Scholarship 2024: ಇಂತಹ ವಿದ್ಯಾರ್ಥಿಗಳಿಗೆ 50,000 ಸ್ಕಾಲರ್ಶಿಪ್, SSP ಸ್ಕಾಲರ್ಶಿಪ್ 2024 ಅರ್ಜಿ ಆಹ್ವಾನ..! ಇಲ್ಲಿದೆ ಸಂಪೂರ್ಣ ಮಾಹಿತಿ..
ನಮಸ್ಕಾರ ಬಂಧುಗಳೇ ಕರ್ನಾಟಕ ಕಟ್ಟಡ ಮತ್ತು ಇತರ ಕಾರ್ಮಿಕರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಮಿಕರ ಮಕ್ಕಳಿಗೆ ಮುಂದಿನ ಓದಿಗಾಗಿ ವಿದ್ಯಾರ್ಥಿ ವೇತನವನ್ನು ಸರ್ಕಾರ ನೀಡುತ್ತಿದೆ. ಈ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳು 5,000 ದಿಂದ 60,000 ವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು. ಹಾಗಾದರೆ ಈ ಯೋಜನೆ ಅಡಿಯಲ್ಲಿ ಯಾವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು, ಯಾವ ವರ್ಗದ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಎಂಬ ಎಲ್ಲಾ ಮಾಹಿತಿ ಈ ಕೆಳಭಾಗದಲ್ಲಿ ತಿಳಿಸಲಾಗಿದೆ.
ವಿದ್ಯಾರ್ಥಿ ವೇತನ [Scholarship]
ಹೌದು ಗೆಳೆಯರೇ, ಸರ್ಕಾರದಿಂದಕರ್ನಾಟಕ ಕಟ್ಟಡ ಮತ್ತು ಇತರ ಕಾರ್ಮಿಕರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಮುಂದಿನ ಓದಿಗೆ ಉಪಯೋಗವಾಗಲಿ ಎಂದು ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಈ ಯೋಜನೆಗೆ ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಸುಲಭವಾಗಿ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಲು ಅರ್ಜಿಯನ್ನು ಸಲ್ಲಿಸಬಹುದು. ಈ ಯೋಜನೆಗೆ ಯಾರು ಅರ್ಹರು ಎಂಬ ಮಾಹಿತಿ ಈ ಕೆಳಭಾಗದಲ್ಲಿ ತಿಳಿಸಲಾಗಿದೆ.
ಈ ಯೋಜನೆಗೆ ಯಾರು ಅರ್ಹರು
ಕರ್ನಾಟಕ ಕಟ್ಟಡ ಮತ್ತು ಇತರ ಕಾರ್ಮಿಕರ ಕಲ್ಯಾಣ ಇಲಾಖೆಯಲ್ಲಿ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬೇಕೆಂದರೆ ಕೆಳಗೆ ನೀಡಿರುವ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ.
- ಕಟ್ಟಡ ಕಾರ್ಮಿಕರ ಮಕ್ಕಳಿಗೆ ಈ ಯೋಜನೆ ಲಾಭವಾಗಿರುತ್ತದೆ
- ಕಟ್ಟಡ ಕಾರ್ಮಿಕರ ಮಕ್ಕಳು 50,000 ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು
- ಈ ಯೋಜನೆಗೆ 1ನೇ ತರಗತಿಯಿಂದ PHD ವಿದ್ಯಾರ್ಥಿಗಳ ವರೆಗೂ ಅರ್ಜಿಯನ್ನು ಸಲ್ಲಿಸಬಹುದು
ಈ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಎಷ್ಟು ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು
ಕಟ್ಟಡ ಕಾರ್ಮಿಕರ ಮಕ್ಕಳು ಈ ಯೋಜನೆ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ಪಡೆದುಕೊಳ್ಳಬಹುದು, ವಿದ್ಯಾರ್ಥಿಗಳ ತರಗತಿಯ ಆಧಾರದ ಮೇಲೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.
- ಪೂರ್ವಶಾಲೆ ನರ್ಸರಿ ಮಕ್ಕಳಿಗೆ 5000 ಹಣ ನೀಡಲಾಗುತ್ತದೆ.
- 1 ರಿಂದ 4ನೇ ತರಗತಿ ವಿದ್ಯಾರ್ಥಿಗಳಿಗೆ 5000 ಹಣ ನೀಡಲಾಗುತ್ತದೆ.
- 5 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ 8,000 ಹಣ ನೀಡಲಾಗುತ್ತದೆ.
- 9 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ 12,000 ಹಣವನ್ನು ನೀಡಲಾಗುತ್ತದೆ.
- ಪಿಯುಸಿ ವಿದ್ಯಾರ್ಥಿಗಳಿಗೆ 15,000 ಹಣವನ್ನು ನೀಡಲಾಗುತ್ತದೆ.
- ಡಿಪ್ಲೋಮಾ ಓದುತ್ತಿರುವ ವಿದ್ಯಾರ್ಥಿಗಳಿಗೆ 20,000 ಹಣವನ್ನು ನೀಡಲಾಗುತ್ತದೆ.
- ಡಿ.ಎಡ್ ವಿದ್ಯಾರ್ಥಿಗಳಿಗೆ 25,000 ಹಣವನ್ನು ನೀಡಲಾಗುತ್ತದೆ.
- ಯಾವುದೇ ಪದವಿ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ 25,000 ಹಣವನ್ನು ನೀಡಲಾಗುತ್ತದೆ.
- ಬಿ.ಎಡ್ ವಿದ್ಯಾರ್ಥಿಗಳಿಗೆ 35,000 ಹಣವನ್ನು ನೀಡಲಾಗುತ್ತದೆ.
- ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 60,000 ಹಣವನ್ನು ನೀಡಲಾಗುತ್ತದೆ.
ಈ ರೀತಿ ವಿದ್ಯಾರ್ಥಿಗಳ ತರಗತಿಯ ಆಧಾರದ ಮೇಲೆ ಈ ಯೋಜನೆ ಅಡಿಯಲ್ಲಿ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಹಾಗಾದರೆ ಯಾವ ರೀತಿ ಅರ್ಜಿಯನ್ನು ಸಲ್ಲಿಸಬೇಕು ಎಂಬ ಎಲ್ಲ ಮಾಹಿತಿಯನ್ನು ಈ ಕೆಳಭಾಗದಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ
- ಪಾಸ್ಪೋರ್ಟ್ ಅಳತೆಯ ಫೋಟೋ
- ತಂದೆಯ ಅಥವಾ ತಾಯಿಯ ಕಟ್ಟಡ ಕಾರ್ಮಿಕರ ದಾಖಲೆಗಳು
- ಬ್ಯಾಂಕ್ ನ ವಿವರ
- ಕಾಲೇಜಿನ ಐಡಿ ಅಥವಾ ರಿಶೀದಿ
ಮುಂತಾದ ಮುಂತಾದ ದಾಖಲೆಗಳು ನಿಮ್ಮ ಹತ್ತಿರವಿದ್ದರೆ ಸಾಕು ನೀವು ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ
ನೀವೇನಾದರೂ ಕಟ್ಟಡ ಕಾರ್ಮಿಕರ ಮಕ್ಕಳಾಗಿದ್ದರೆ, ನೀವು ಸುಲಭವಾಗಿ ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ನೀವು ಸೇವಾ ಸಿಂದು ಪೋರ್ಟಲ್ ಮೂಲಕ ಅರ್ಜಿಯನ್ನು ಸುಲಭವಾಗಿ ಸಲ್ಲಿಸಬಹುದು ಅಥವಾ ನಿಮ್ಮ ಊರಿನ ಹತ್ತಿರವಿರುವ ಸೈಬರ್ ಅಥವಾ ಕೆಲವು ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಕರ್ನಾಟಕ ಕಟ್ಟಡ ಮತ್ತು ಇತರ ಕಾರ್ಮಿಕರ ಕಲ್ಯಾಣ ಇಲಾಖೆಯ ಅಡಿಯಲ್ಲಿರುವ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು.
SSP ಸ್ಕಾಲರ್ಶಿಪ್ 2024 [SSP Scholarship 2024]
ಕರ್ನಾಟಕದ ಎಲ್ಲಾ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಕರ್ನಾಟಕ ರಾಜ್ಯದ Sc, ST ಮತ್ತು OBC ವರ್ಗದ ಸೇರಿದ ಎಲ್ಲ ವಿದ್ಯಾರ್ಥಿಗಳಿಗೆ SSP ಸ್ಕಾಲರ್ಶಿಪ್ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಡಿಯಲ್ಲಿ ಮೆಟ್ರಿಕ್ ಶಿಕ್ಷಣ ಮತ್ತು ಮೆಟ್ರಿಕ್ ಪೂರ್ವ ಶಿಕ್ಷಣದ ಹುದ್ದೆಗಳಿಗೆ ಸ್ಕಾಲರ್ಶಿಪ್ ಅನ್ನು ಪಡೆದುಕೊಳ್ಳಲು ಅರ್ಜಿಯನ್ನು ಸಲ್ಲಿಸಬಹುದು.
ಆದರೆ SSP ಮೆಟ್ರಿಕ್ ಸ್ಕಾಲರ್ಶಿಪ್ 2024ರ ಅರ್ಜಿಯನ್ನು ನವೆಂಬರ್ 30 ರಲ್ಲಿ ಮುಚ್ಚಲಾಗಿತ್ತು, ಅದಾಗಿಯೂ SSP ಪೋಸ್ಟ್ ಮೆಟ್ರಿಕ್ ಸ್ಕಾಲರ್ಶಿಪ್ 2024 ರ ಅರ್ಜಿಗಳು ಮುಂಬರುವ ದಿನಗಳಲ್ಲಿ ಹೊರ ಬರುತ್ತವೆ. ನಂತರ ನೀವು ಸುಲಭವಾಗಿ ಆನ್ಲೈನ್ ನಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.
SSP ಸ್ಕಾಲರ್ಶಿಪ್ 2024 ರ ವಿವರಗಳು
- ವಿದ್ಯಾರ್ಥಿ ವೇತನದ ಹೆಸರು: SSP ವಿದ್ಯಾರ್ಥಿವೇತನ [SSP ಸ್ಕಾಲರ್ಶಿಪ್]
- ಅರ್ಜಿ ಸಲ್ಲಿಸುವ ವರ್ಷ: 2024
- ವಿದ್ಯಾರ್ಥಿ ವೇತನದ ವಿವರ: ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ, ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನ
- ಅರ್ಜಿ ಸಲ್ಲಿಸುವ ರಾಜ್ಯ: ಕರ್ನಾಟಕ
- ಯಾವ ಇಲಾಖೆ ಅಡಿಯಲ್ಲಿ ಅರ್ಜಿ ಸಲ್ಲಿಸುವುದು: ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
- ಅರ್ಜಿ ಸಲ್ಲಿಸುವ ವಿಧಾನ: ಆನ್ಲೈನ್
- ಅಧಿಕೃತ ವೆಬ್ಸೈಟ್: ssp.karnataka.gov.in
- ಪೂರ್ವ ಮೆಟ್ರಿಕ್ ಮತ್ತು ಪೋಸ್ಟ್ ಮೆಟ್ರಿಕ್ ನ ಅರ್ಹತೆ: ಪೂರ್ವ ಮೆಟ್ರಿಕ್ ಗೆ 10ನೇ ತರಗತಿ ಒಳಗಡೆ ಇರುವ ವಿದ್ಯಾರ್ಥಿಗಳು ಮತ್ತು ಪೋಸ್ಟ್ ಮೆಟ್ರಿಕ್ ನಲ್ಲಿ 11ನೇ ತರಗತಿ ಮೇಲ್ಪಟ್ಟ ವಿದ್ಯಾರ್ಥಿಗಳು
SSP ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ವಿದ್ಯಾರ್ಥಿಯ ಪಾಸ್ಪೋರ್ಟ್ ಅಳತೆಯ ಫೋಟೋ
- ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ
- ಕಾಲೇಜಿನ ಐಡಿ ಅಥವಾ ಪಾವತಿ ಮಾಡಿದ ರಶೀದಿ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ನ ವಿವರಗಳು
- ಖಾಸಗಿ ಅಥವಾ ಸರ್ಕಾರಿ ಹಾಸ್ಟೆಲಿನ ಗುರುತಿನ ಚೀಟಿ
ಮುಂತಾದ ದಾಖಲೆಗಳು ನಿಮ್ಮ ಹತ್ತಿರವಿದ್ದರೆ ಸಾಕು ನೀವು SSP ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದು. ಹಾಗಾದರೆ ಅರ್ಜಿಯನ್ನು ಸಲ್ಲಿಸುವ ವಿಧಾನದ ಬಗ್ಗೆ ತಿಳಿದುಕೊಳ್ಳೋಣ.
ಆನ್ಲೈನ್ ಮೂಲಕ SSP ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸುವ ವಿಧಾನ
ಕರ್ನಾಟಕದ ಎಲ್ಲ ವಿದ್ಯಾರ್ಥಿಗಳು SSP ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದು. ಈ ಮೇಲೆ ನೀಡಿರುವ ದಾಖಲೆಗಳು ನಿಮ್ಮ ಹತ್ತಿರವಿದ್ದರೆ ಸಾಕು ನೀವು ಸುಲಭವಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸಲು ಈ ಕೆಳಭಾಗದಲ್ಲಿ ಎಲ್ಲ ಮಾಹಿತಿಯನ್ನು ನೀಡಲಾಗಿದೆ.
- ಮೊದಲು ನೀವು SSP ಸ್ಕಾಲರ್ಶಿಪ್ ನ ಅಧಿಕೃತ ssp.karnataka.gov.in ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
- ಈಗ ನಿಮಗೆ ಹೋಂ ಪೇಜ್ ಓಪನ್ ಆಗುತ್ತದೆ, ಅಲ್ಲಿ ನೀವು SSP ಸ್ಕಾಲರ್ಶಿಪ್ ವಿದ್ಯಾರ್ಥಿವೇತನ 2024 ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿಕೊಳ್ಳಿ.
- ಈಗ ನಿಮಗೆ ಒಂದು ಹೊಸ ಪುಟ್ಟ ಓಪನ್ ಆಗುತ್ತದೆ, ಅಲ್ಲಿ ನೀವು ಮೊದಲೇ ನೀವು ವೆಬ್ಸೈಲ್ ಅನ್ನು ರಿಜಿಸ್ಟರ್ ಮಾಡಿಕೊಂಡಿದ್ದರೆ ಲಾಗಿನ್ ಮಾಡಿಕೊಳ್ಳಿ.
- ಒಂದು ವೇಳೆ ರಿಜಿಸ್ಟರ್ ಮಾಡಿಕೊಂಡಿಲ್ಲವೆಂದರೆ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ಐಡಿ ಮುಂತಾದ ದಾಖಲೆಯನ್ನು ಒದಗಿಸಿ ಪಾಸ್ವರ್ಡ್ ಅನ್ನು ಕ್ರಿಯೇಟ್ ಮಾಡಿಕೊಂಡು ರಿಜಿಸ್ಟರ್ ಮಾಡಿಕೊಳ್ಳಿ.
- ನಂತರ ಲಾಗಿನ್ ಮಾಡಿಕೊಳ್ಳಿ, ಲಾಗಿನ್ ಮಾಡಿಕೊಂಡ ನಂತರ SSP ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸುವ ವಿವರ ನಿಮಗೆ ಕಾಣುತ್ತದೆ.
- ಅಲ್ಲಿ ಕೇಳುವ ಎಲ್ಲಾ ವಿವರವನ್ನು ಸರಿಯಾಗಿ ಭರ್ತಿ ಮಾಡಿ, ಭರ್ತಿ ಮಾಡಿದ ನಂತರ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಬಹುದು.
- ಅರ್ಜಿ ಸಲ್ಲಿಸಲು ನಾಲ್ಕು ಹಂತದಲ್ಲಿ ಕೇಳುತ್ತದೆ, ಪ್ರತಿಯೊಂದು ಹಂತದಲ್ಲಿ ಸರಿಯಾದ ದಾಖಲೆಗಳನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಿ.
ಈ ರೀತಿ ನೀವು ಸುಲಭವಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಅರ್ಜಿಯ ಸ್ಥಿತಿಯನ್ನು ಸಹ ನೀವು ಸುಲಭವಾಗಿ ಆನ್ಲೈನ್ ನಲ್ಲಿ ಪರಿಶೀಲನೆ ಮಾಡಿಕೊಳ್ಳಬಹುದು, ಹಾಗಾದರೆ ಅದರ ಬಗ್ಗೆ ತಿಳಿದುಕೊಳ್ಳೋಣ.
SSP ಸ್ಕಾಲರ್ಶಿಪ್ ಸ್ಥಿತಿ ಪರಿಶೀಲನೆ ಮಾಡುವ ವಿಧಾನ
ನೀವು ಆನ್ಲೈನ್ ಮೂಲಕ SSP ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಿದರೆ ನೀವು ಆ ಅರ್ಜಿಯ ಸ್ಥಿತಿಯನ್ನು ಆನ್ಲೈನ್ ಮೂಲಕ ಸುಲಭವಾಗಿ ಪರಿಶೀಲನೆ ಮಾಡಿಕೊಳ್ಳಬಹುದು. ಅರ್ಜಿ ಸ್ಥಿತಿಯನ್ನು ಪರಿಶೀಲನೆ ಮಾಡಿಕೊಳ್ಳುವುದು ಸುಲಭ ವಿಧಾನವಾಗಿದೆ.
- ಮೊದಲು ನೀವು SSP ಸ್ಕಾಲರ್ಶಿಪ್ ನ ಅಧಿಕೃತ ssp.karnataka.gov.in ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
- ಈಗ ನಿಮಗೆ ಹೋಂ ಪೇಜ್ ಓಪನ್ ಆಗುತ್ತದೆ, ನೀವು ಮೊದಲೇ ಈ ವೆಬ್ಸೈಟನ್ನು ರಿಜಿಸ್ಟರ್ ಮಾಡಿಕೊಂಡಿದ್ದರೆ ಲಾಗಿನ್ ಮಾಡಿಕೊಳ್ಳಿ.
- ರಿಜಿಸ್ಟರ್ ಮಾಡಿಕೊಂಡಿಲ್ಲವೆಂದರೆ ಕೆಲವು ದಾಖಲೆಗಳನ್ನು ಒದಗಿಸಿ ರಿಜಿಸ್ಟರ್ ಮಾಡಿಕೊಳ್ಳಿ.
- ನಂತರ ನಿಮಗೆ ವಿದ್ಯಾರ್ಥಿವೇತನ ಸ್ಥಿತಿ ಚೆಕ್ ಎಂಬ ಆಪ್ಷನ್ ಕಾಣುತ್ತದೆ, ನೀವು ಅದರ ಮೇಲೆ ಕ್ಲಿಕ್ ಮಾಡಿ.
- ನಂತರ ನಿಮಗೆ ಮೊದಲೇ ನೀವು SSP ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಿದರೆ ನಿಮಗೆ ಐಡಿ ಸಂಖ್ಯೆ ಸಿಗುತ್ತದೆ.
- ನೀವು ಇಲ್ಲಿ ಐಡಿ ಸಂಖ್ಯೆ, ವರ್ಷ ಮತ್ತು ಕೆಲವು ದಾಖಲೆಗಳನ್ನು ಭರ್ತಿ ಮಾಡಿ.
- SSP ಸ್ಕಾಲರ್ಶಿಪ್/ವಿದ್ಯಾರ್ಥಿ ವೇತನ ಸ್ಥಿತಿ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ.
ಈಗ ನಿಮಗೆ SSP ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಿರುವ ಸ್ಥಿತಿ ನಿಮಗೆ ಕಾಣುತ್ತದೆ ಮತ್ತು ನಿಮ್ಮ ಬ್ಯಾಂಕ್ ಖಾತೆಗೆ ಎಷ್ಟು ಹಣ ಬಂದಿದೆ ಎಂಬ ಎಲ್ಲಾ ವಿವರವನ್ನು ತಿಳಿದುಕೊಳ್ಳಬಹುದು. ಅದಲ್ಲದೆ ಯಾವ ವರ್ಷ ಎಷ್ಟು ಹಣ ಬಂದಿದೆ ವಿವರವನ್ನು ಸಹ ತಿಳಿದುಕೊಳ್ಳಬಹುದು.
ಅರ್ಜಿಯನ್ನು ಸಲ್ಲಿಸುವ ಮೊದಲು ಇದನ್ನು ಗಮನಿಸಿ
ಹೌದು ಗೆಳೆಯರೇ, ನಾನು ನಿಮಗೆ ತಿಳಿಸುವುದೇನೆಂದರೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ಮೊದಲು ಅಲ್ಲಿ ಕೇಳುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ಒದಗಿಸಿ. ಒಂದು ವೇಳೆ ತಪ್ಪು ಮಾಹಿತಿಯನ್ನು ಒದಗಿಸಿದರೆ ಮತ್ತೊಮ್ಮೆ ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ಇರುವುದಿಲ್ಲ. ಈ ಕಾರಣದಿಂದ ಇಲ್ಲಿ ಕೇಳುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ಒದಗಿಸಿ, ನಂತರ ಅರ್ಜಿಯನ್ನು ಸಲ್ಲಿಸಿ. ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕಷ್ಟಕರವಾದರೆ ನಿಮ್ಮ ಊರಿನ ಹತ್ತಿರ ಇರುವ ಸೈಬರ್ ಗಳಿಗೆ ಭೇಟಿ ನೀಡುವ ಮೂಲಕ ಈ ಮೇಲೆ ನೀಡಿರುವ ಎಲ್ಲಾ ದಾಖಲೆಗಳನ್ನು ಅವರಿಗೆ ಒದಗಿಸಿ, ನೀವು ಸುಲಭವಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿಯನ್ನು ಸಲ್ಲಿಸಿದ ನಂತರ ಅರ್ಜಿಯ ಸ್ಥಿತಿಯನ್ನು ನೀವು ಸುಲಭವಾಗಿ ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಬಹುದು. ಆನ್ಲೈನ್ ಆಗಲಿ ಅಥವಾ ಆಫ್ಲೈನ್ ಆಗಲಿ ಅರ್ಜಿಯನ್ನು ಸಲ್ಲಿಸುವ ಮೊದಲು ಸರಿಯಾದ ದಾಖಲೆಯನ್ನು ಒದಗಿಸಿ ಮತ್ತು ಸರಿಯಾದ ದಾಖಲೆಗಳನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಿ. SSP ಸ್ಕಾಲರ್ಶಿಪ್ ನ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬೇಕೆಂದರೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ಅಲ್ಲಿ ನೀವು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದು ಅಥವಾ ನಿಮ್ಮ ಕಾಲೇಜಿನ ಕ್ಲರ್ಕ್ ಅನ್ನು ಭೇಟಿ ಮಾಡಿ ಅಲ್ಲಿ ನೀವು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದು ಅಥವಾ ನಿಮ್ಮ ಊರಿನ ಹತ್ತಿರ ಇರುವ ಕೆಲವು ಸೈಬರ್ ಗಳಿಗೆ ಭೇಟಿ ನೀಡಿ ಅಲ್ಲಿ SSP ಸ್ಕಾಲರ್ಶಿಪ್ ನ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದು
ಇದನ್ನು ಗಮನಿಸಿ
ನಾನು ಈ ವೆಬ್ ಸೈಟ್ ನಲ್ಲಿ ಜನರಿಗೆ ಉಪಯೋಗವಾಗುವ ಮಾಹಿತಿಯನ್ನು ಪ್ರತಿದಿನ ಒದಗಿಸುತ್ತೇನೆ. ನೀವು ಪ್ರತಿದಿನ ಉತ್ತಮ ಮಾಹಿತಿಯನ್ನು ಪಡೆದುಕೊಳ್ಳಬೇಕೆಂದರೆ ನಮ್ಮ ಟೆಲಿಗ್ರಾಂ ಮತ್ತು ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ ಇದರಿಂದ ಪ್ರತಿದಿನ ಉತ್ತಮ ಮತ್ತು ಉಪಯೋಗವಾಗುವ ಮಾಹಿತಿಯನ್ನು ಗ್ರೂಪ್ನಲ್ಲಿ ಅಪ್ಡೇಟ್ ಮಾಡುತ್ತೇನೆ
ಈ ವೆಬ್ ಸೈಟ್ ನಲ್ಲಿ ನಾವು ಯಾವುದೇ ತಪ್ಪು ಮಾಹಿತಿಯನ್ನು ನೀಡುವುದಿಲ್ಲ. ಜನರಿಗೆ ಉಪಯೋಗವಾಗುವ ಜಾಬ್ ನ್ಯೂಸ್, ಅಗ್ರಿಕಲ್ಚರ್ ನ್ಯೂಸ್, ಇನ್ನಿತರ ಉಪಯೋಗವಾಗುವ ಮಾಹಿತಿಯನ್ನು ಇಲ್ಲಿ ನೀಡಲಾಗುತ್ತದೆ.
ಧನ್ಯವಾದಗಳು