2nd PUC Examination 2: ದ್ವಿತೀಯ ಪಿಯುಸಿ ಪರೀಕ್ಷೆ 2ಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ..! ಇಲ್ಲಿದೆ ಸಂಪೂರ್ಣ ಮಾಹಿತಿ
ನಮಸ್ಕಾರ ಬಂಧುಗಳೇ ಕರ್ನಾಟಕ ಶಾಲಾ ಪರೀಕ್ಷಾ ಮೌಲ್ಯಮಾಪನ ಮಂಡಳಿಯಿಂದ ಏಪ್ರಿಲ್ 10 2024 ಬೆಳಗ್ಗೆ 11:00 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಮಾಡಲಾಗಿತ್ತು. ಕರ್ನಾಟಕದಲ್ಲಿ ಮಾರ್ಚ್ 1ರಿಂದ ಮಾರ್ಚ್ 22 ರವರೆಗೆ ವಿಜ್ಞಾನ, ಕಲೆ, ವಾಣಿಜ್ಯ ಮೂರು ವಿಭಾಗದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರಾಜ್ಯದಲ್ಲಿ ನಡೆದಿತ್ತು. ಒಟ್ಟು1,124 ಕೇಂದ್ರಗಳಲ್ಲಿ 6,81,079 ವಿದ್ಯಾರ್ಥಿಗಳು ಹಾಜರಾಗಿದ್ದರು. ದ್ವಿತೀಯ ಪಿಯುಸಿ ರಿಸಲ್ಟ್ ಅನ್ನು ಏಪ್ರಿಲ್ 10 ರಂದು ಬೆಳಗ್ಗೆ 11:00ಗೆ ಅಧಿಕೃತ ವೆಬ್ಸೈಟ್ನಲ್ಲಿ ದ್ವಿತೀಯ ಪಿಯುಸಿ ರಿಸಲ್ಟ್ ಅನ್ನು ಪ್ರಕಟಿಸಲಾಗಿತ್ತು. ಅದರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ 2ಕ್ಕೆ ಅರ್ಜಿಯನ್ನು ಕೂಡ ಈಗಾಗಲೇ ಶಿಕ್ಷಣ ಇಲಾಖೆ ಆಹ್ವಾನ ಮಾಡಿದೆ.ಮೊಬೈಲ್ ನ ಮುಖಾಂತರ ಸುಲಭವಾಗಿ ದ್ವಿತೀಯ ಪಿಯುಸಿ ಪರೀಕ್ಷೆ 2ಕ್ಕೆ ರಿಜಿಸ್ಟರ್ ಮಾಡಿಕೊಳ್ಳಬಹುದು.
ದ್ವಿತೀಯ ಪಿಯುಸಿ ಪರೀಕ್ಷೆ 2
ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಏಪ್ರಿಲ್ 10 ರಂದು ಪ್ರಕಟವಾಗಿದ್ದು. ಅದರಲ್ಲಿ 5,52,690 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ ಒಂದರಲ್ಲಿ ಅನುತ್ತೀರ್ಣರಾದವರು ಯಾವುದೇ ವಿಷಯದ ಅಂಕಗಳನ್ನು ಉತ್ತಮಪಡಿಸಿಕೊಳ್ಳಲು ಬಯಸುವವರು ದ್ವಿತೀಯ ಪಿಯುಸಿ ಪರೀಕ್ಷೆ 2ಕ್ಕೆ ಅರ್ಜಿಯನ್ನು ಸಲ್ಲಿಸಬಹುದು. ದ್ವಿತೀಯ ಪಿಯುಸಿ ಪರೀಕ್ಷೆ 2ಕ್ಕೆ ಅರ್ಜಿ ಸಲ್ಲಿಸಲು ಏಪ್ರಿಲ್ 16 ಕೊನೆಯ ದಿನಾಂಕ ವಾಗಿರುವುದರಿಂದ ಆದಷ್ಟು ಬೇಗ ಅನ್ನು ಅನುತ್ತೀರ್ಣರಾದ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ದ್ವಿತೀಯ ಪಿಯುಸಿ ಪರೀಕ್ಷೆ 2 ರ ದಿನಾಂಕಗಳು
ದ್ವಿತೀಯ ಪಿಯುಸಿ ಒಂದರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ 2ಕ್ಕೆ ಅರ್ಜಿಯನ್ನು ಸಲ್ಲಿಸಬಹುದು. ಆನ್ಲೈನ್ ಮೂಲಕ ದ್ವಿತೀಯ ಪಿಯುಸಿ ಪರೀಕ್ಷೆ 2ಕ್ಕೆ ಅರ್ಜಿ ಹಾಕಲು ಕೊನೆಯ ದಿನಾಂಕ ಏಪ್ರಿಲ್ 16 ಆಗಿರುವುದರಿಂದ ಆದಷ್ಟು ಬೇಗ ಅರ್ಜಿಯನ್ನು ಸಲ್ಲಿಸಿ. ಅರ್ಜಿಯನ್ನು ಸಲ್ಲಿಸಿದ ನಂತರ ದ್ವಿತೀಯ ಪಿಯುಸಿ ಪರೀಕ್ಷೆ 2 ರ ದಿನಾಂಕ ಏಪ್ರಿಲ್ 29ರಿಂದ ಮೇ 16 ವರೆಗೆ ನಡೆಯಲಿದೆ. ಹಾಗಾದರೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ವಿಧಾನದ ಬಗ್ಗೆ ತಿಳಿದುಕೊಳ್ಳೋಣ/
ದ್ವಿತೀಯ ಪಿಯುಸಿ ಪರೀಕ್ಷೆ 2ಕ್ಕೆ ಅರ್ಜಿ ಸಲ್ಲಿಸುವ ವಿಧಾನ
ಮೊಬೈಲ್ ಇದ್ದರೆ ಸಾಕು ಸುಲಭವಾಗಿ ಆನ್ಲೈನ್ ಮೂಲಕ ದ್ವಿತೀಯ ಪಿಯುಸಿ ಪರೀಕ್ಷೆ 2ಕ್ಕೆ ಅರ್ಜಿಯನ್ನು ಸಲ್ಲಿಸಬಹುದು
- ಮೊದಲು ನೀವು ಕೆಎಸ್ಇಎಬಿ ಯಾ ಅಧಿಕೃತ https://kseab.karnataka.gov.in/ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
- ಈಗ ನಿಮಗೆ ಹೊಸ ಪುಟ್ಟ ಓಪನ್ ಆಗುತ್ತದೆ, ಅಲ್ಲಿ ನೀವು ಮತ್ತಷ್ಟು ಓದಿ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ.
- ನಂತರ ನಿಮಗೆ ಇತ್ತೀಚಿಗೆ ಬಿಡುಗಡೆ ಮಾಡಲಾದ ಪ್ರಕಟಗಳು ಎಂಬ ಆಕ್ಷನ್ ನಲ್ಲಿ ಹಲವಾರು ಲಿಂಕ್ ಗಳು ಕಾಣಿಸುತ್ತದೆ.
- ಅದರಲ್ಲಿ ನೀವು 2024ನೇ ಸಾಲಿನ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ 2 ಗೆ ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ.
- ಈಗ ನಿಮಗೆ ಒಂದು ಹೊಸ ವೆಬ್ ಓಪನ್ ಆಗುತ್ತದೆ, ನಿಮಗೆ ಎರಡು ಆಪ್ಷನ್ ಗಳು ಕಾಣುತ್ತದೆ.
- ಇಲ್ಲಿ ಅರ್ಜಿ ಸಲ್ಲಿಸಿ ಅಥವಾ application form for online registration examination 2 ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ.
- ಈಗ ನಿಮಗೆ ಮತ್ತೊಂದು ಹೊಸ ವೆಬ್ ಓಪನ್ ಆಗುತ್ತದೆ.
- ಇಲ್ಲಿ ನೀವು ದ್ವಿತೀಯ ಪಿಯುಸಿ ರಿಜಿಸ್ಟರ್ ಸಂಖ್ಯೆ ಮತ್ತು ದಿನಾಂಕ, ತಿಂಗಳು, ವರ್ಷ ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ಇಲ್ಲಿ ಎಲ್ಲಾ ವಿಷಯವಾರು ರಿಜಿಸ್ಟರ್ ಲಭ್ಯವಿರುತ್ತದೆ ನಿಮಗೆ ಅನುಗುಣವಾಗಿರುವಂತಹ ವಿಷಯವನ್ನು ಆಯ್ಕೆ ಆಯ್ಕೆಮಾಡಿಕೊಳ್ಳಿ.
- ನಂತರ view ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ ನಂತರ ನಿಮಗೆ ಹೆಸರು, ಸಹಿ ಮತ್ತು ಇನ್ನಿತರ ಮಾಹಿತಿಗಳು ನಿಮಗೆ ಕಾಣುತ್ತದೆ.
- ನಂತರ ನೀವು ರಿಜಿಸ್ಟರ್ ಮೇಲೆ ಕ್ಲಿಕ್ ಮಾಡಿ, ನಂತರ ಹಿಂದಿನ ಮೆನು ಪುಟಕ್ಕೆ ಬರಬೇಕಾಗುತ್ತದೆ.
- ಅಲ್ಲಿ ನೀವು make payment ಎಂಬ ಆಪ್ಷನ್ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ.
- ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕವನ್ನು ಸುಲಭವಾಗಿ ಆನ್ಲೈನ್ ಮೂಲಕ ಪಾವತಿ ಮಾಡಬಹುದು.
- ಈ ರೀತಿ ಮಾಡಿದರೆ ಸಾಕು ಸುಲಭವಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಒಂದು ವೇಳೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕಷ್ಟಕರವಾದರೆ ನಿಮ್ಮ ಊರಿನ ಹತ್ತಿರವಿರುವ ಕೆಲವು ಸೈಬರ್ ಗಳಿಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು.
ದ್ವಿತೀಯ ಪಿಯುಸಿ ಪರೀಕ್ಷೆ 2ಕ್ಕೆ ಅರ್ಜಿ ಸಲ್ಲಿಸಲು ಎಷ್ಟು ಶುಲ್ಕ ನೀಡಬೇಕು
- ಒಂದು ವಿಷಯದ ಪರೀಕ್ಷೆಗೆ 140 ಪಾವತಿಸಬೇಕು
- ಎರಡು ವಿಷಯದ ಪರೀಕ್ಷೆಗೆ 270 ಪಾವತಿಸಬೇಕು ಅಥವಾ ಹೆಚ್ಚಿನ ವಿಷಯಕ್ಕೆ ರೂ 400 ಪಾವತಿಸಬೇಕು.
- ಕೆಲವು ವಿದ್ಯಾರ್ಥಿಗಳಿಗೆ ಪಾಸಾಗಿದ್ದರು ಕೆಲವು ವಿಷಯಗಳಲ್ಲಿ ಕಡಿಮೆ ಅಂಕ ಬಂದಿದ್ದರೆ ಅದನ್ನು ಮತ್ತೊಮ್ಮೆ ಪರೀಕ್ಷೆ ಬರೆಯಲು ಒಂದು ವಿಷಯಕ್ಕೆ 175 ಪಾವತಿಸಬೇಕು.
ಈ ಎಲ್ಲಾ ಹಣವನ್ನು ನೀವು ಸುಲಭವಾಗಿ ನೆಟ್ ಬ್ಯಾಂಕಿಂಗ್, ಕ್ರೆಡಿಟ್ ಕಾರ್ಡ್ ಅಥವಾ ಡಿಬಿಟ್ ಕಾರ್ಡ್, ಯುಪಿಐ ಮೂಲಕ ಸುಲಭವಾಗಿ ಆನ್ಲೈನ್ ನಲ್ಲಿ ಪಾವತಿ ಮಾಡಬಹುದು.
ದ್ವಿತೀಯ ಪಿಯುಸಿ ಪರೀಕ್ಷೆ
ಏಪ್ರಿಲ್ 10 2024ರಂದು ಬೆಳಗ್ಗೆ 11 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಪ್ರಕಟ ಮಾಡಲಾಗಿತ್ತು. 6,81,079 ವಿದ್ಯಾರ್ಥಿಗಳು ಹಾಜರಾಗಿದ್ದರು. ಅದರಲ್ಲಿ 5,52,690 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಅನುತ್ತೀರ್ಣರಾದ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ 2ಕ್ಕೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಎಲ್ಲ ಮಾಹಿತಿ ಮೇಲ್ಭಾಗದಲ್ಲಿ ತಿಳಿಸಲಾಗಿದೆ. ನೀವೇನಾದರೂ ಮತ್ತೊಮ್ಮೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನೋಡಬೇಕೆಂದರೆ ಮತ್ತು ಡೌನ್ಲೋಡ್ ಮಾಡಿಕೊಳ್ಳಲು ಈ ಕೆಳಗಿನ ಮಾಹಿತಿಯನ್ನು ಓದಿ
ದ್ವಿತೀಯ ಪಿಯುಸಿ ಪರೀಕ್ಷೆ ಪಲಿತಾಂಶ ಆನ್ ಲೈನ್ ಮೂಲಕ ನೋಡುವ ವಿಧಾನ
ಮೊಬೈಲ್ ಇದ್ದರೆ ಸಾಕು ಸುಲಭವಾಗಿ ಆನ್ಲೈನ್ ಮೂಲಕ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಸುಲಭವಾಗಿ ನೋಡಬಹುದು.
- ಮೊದಲು ನೀವು ಪಿಯುಸಿ ರಿಸಲ್ಟ್ ನೋಡಲು ಅಧಿಕೃತ karresults.nic.in. ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
- ನಿಮಗೆ ಹೋಂ ಪೇಜ್ ಓಪನ್ ಆಗುತ್ತದೆ. ಅದರಲ್ಲಿ ನೀವು ದ್ವಿತೀಯ ಪಿಯುಸಿ ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಂತರ ನೀವು ಪಿಯುಸಿ ನೋಂದಣಿ ಸಂಖ್ಯೆಯನ್ನು ಸಲ್ಲಿಸಿ ಮತ್ತು ವಿಷಯ ಸಂಯೋಜನೆ ಅಥವಾ ಸ್ಟ್ರೀಮ್ ಅನ್ನು ಆಯ್ಕೆ ಮಾಡಿ.
- ನಂತರ ಹೊಸ ಪುಟದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಎಂದು ಕಾಣುತ್ತದೆ, ಇಲ್ಲಿ ನಿಮ್ಮ ದ್ವಿತೀಯ ಪಿಯುಸಿ ಅಂಕ ಪಟ್ಟಿಯನ್ನು ನೋಡಬಹುದು.
- ನಂತರ ಅದನ್ನು ಡೌನ್ಲೋಡ್ ಮಾಡಿಕೊಂಡು ಫೋನ್ ನಲ್ಲಿ ಸೇವ್ ಮಾಡಿಕೊಳ್ಳಬಹುದು.
ಈ ರೀತಿ ಸುಲಭವಾಗಿ ಆನ್ಲೈನ್ ಮೂಲಕ ದ್ವಿತೀಯ ಪಿಯುಸಿ ಫಲಿತಾಂಶವನ್ನು ನೋಡಿಕೊಳ್ಳಬಹುದು. ಈಗಾಗಲೇ ಈ ಮಾಹಿತಿಯು ಕೆಲವು ದಿನಗಳ ಹಿಂದೆಯೇ ದ್ವಿತೀಯ ಪಿಯುಸಿ ಫಲಿತಾಂಶವನ್ನು ನೋಡಿದ್ದೀರಾ ಆದರೆ ಮತ್ತೊಮ್ಮೆ ಏಕೆ ತಿಳಿಸಿಕೊಡಲಿದ್ದೇನೆ. ಏಕೆಂದರೆ ದ್ವಿತೀಯ ಪಿಯುಸಿ ಪರೀಕ್ಷೆ 2ರ ಫಲಿತಾಂಶವನ್ನು ಇದೇ ರೀತಿ ಸುಲಭವಾಗಿ ಆನ್ಲೈನ್ ನಲ್ಲಿ ನೋಡಿಕೊಳ್ಳಬಹುದು. ಈ ಮಾಹಿತಿ ಉಪಯೋಗವಾಗುತ್ತದೆ ಎಂದು ತಿಳಿಸಿದ್ದೇನೆ.
ದ್ವಿತೀಯ ಪಿಯುಸಿ ಪರೀಕ್ಷೆ 3
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ 2ಕ್ಕೆ ಅರ್ಜಿಯನ್ನು ಸಲ್ಲಿಸಿ ಪರೀಕ್ಷೆಯನ್ನು ಬರೆದುಕೊಳ್ಳಬಹುದು. ಒಂದು ವೇಳೆ ದ್ವಿತೀಯ ಪಿಯುಸಿ ಪರೀಕ್ಷೆ 2ರಲ್ಲಿ ಅರ್ಜಿಯನ್ನು ಸಲ್ಲಿಸಲು ಅಥವಾ ಕೆಲವು ಸಮಸ್ಯೆಗಳಿಂದ ಪರೀಕ್ಷೆ ಬರೆಯಲು ಸಾಧ್ಯವಾಗದಿದ್ದರೆ ದ್ವಿತೀಯ ಪಿಯುಸಿ ಪರೀಕ್ಷೆ 2 ಮುಗಿದ ನಂತರ ಮುಂದಿನ ದಿನಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ 3ಕ್ಕೆ ಕೂಡ ಅರ್ಜಿಯನ್ನು ಸಲ್ಲಿಸಿ, ಪರೀಕ್ಷೆಯನ್ನು ಬರೆಯಬಹುದು.
ಹೌದು ಗೆಳೆಯರೇ ಈ ಬಾರಿ ಹೊಸದಾಗಿ ತಂದಿರುವ ನಿಯಮವಾಗಿದೆ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಶುಲ್ಕವನ್ನು ನೀಡಿ ದ್ವಿತೀಯ ಪಿಯುಸಿ 2ಕ್ಕೆ ವರ್ಜಿ ಸಲ್ಲಿಸಬಹುದು. ಒಂದು ವೇಳೆ ದ್ವಿತೀಯ ಪಿಯುಸಿ 2ರಲ್ಲಿ ಅನುತ್ತೀರ್ಣರಾದರೆ ಮತ್ತೊಮ್ಮೆ ದ್ವಿತೀಯ ಪಿಯುಸಿ 3ಕ್ಕೆ ಅರ್ಜಿಯನ್ನು ಸಲ್ಲಿಸಬಹುದು. ಮುಂಬರುವ ದಿನಗಳಲ್ಲಿ ದ್ವಿತೀಯ ಪಿಯುಸಿ 3ಕ್ಕೆ ಅರ್ಜಿ ಸಲ್ಲಿಸುವ ದಿನಾಂಕ, ಕೊನೆಯ ದಿನಾಂಕ, ಪರೀಕ್ಷೆಯ ದಿನಾಂಕ ಈ ಎಲ್ಲ ಮಾಹಿತಿಯನ್ನು ಪ್ರಕಟಿಸಲಾಗುತ್ತದೆ.
ಇದನ್ನು ಗಮನಿಸಿ
ನಾನು ಈ ವೆಬ್ ಸೈಟ್ ನಲ್ಲಿ ಜನರಿಗೆ ಉಪಯೋಗವಾಗುವ ಮಾಹಿತಿಯನ್ನು ಪ್ರತಿದಿನ ಒದಗಿಸುತ್ತೇನೆ. ನೀವು ಪ್ರತಿದಿನ ಉತ್ತಮ ಮಾಹಿತಿಯನ್ನು ಪಡೆದುಕೊಳ್ಳಬೇಕೆಂದರೆ ನಮ್ಮ ಟೆಲಿಗ್ರಾಂ ಮತ್ತು ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ ಇದರಿಂದ ಪ್ರತಿದಿನ ಉತ್ತಮ ಮತ್ತು ಉಪಯೋಗವಾಗುವ ಮಾಹಿತಿಯನ್ನು ಗ್ರೂಪ್ನಲ್ಲಿ ಅಪ್ಡೇಟ್ ಮಾಡುತ್ತೇನೆ
ಈ ವೆಬ್ ಸೈಟ್ ನಲ್ಲಿ ನಾವು ಯಾವುದೇ ತಪ್ಪು ಮಾಹಿತಿಯನ್ನು ನೀಡುವುದಿಲ್ಲ. ಜನರಿಗೆ ಉಪಯೋಗವಾಗುವ ಜಾಬ್ ನ್ಯೂಸ್, ಅಗ್ರಿಕಲ್ಚರ್ ನ್ಯೂಸ್, ಇನ್ನಿತರ ಉಪಯೋಗವಾಗುವ ಮಾಹಿತಿಯನ್ನು ಇಲ್ಲಿ ನೀಡಲಾಗುತ್ತದೆ.
ಧನ್ಯವಾದಗಳು