NEW PAN CARD: ಕೇವಲ 10 ನಿಮಿಷದಲ್ಲಿ ಉಚಿತ ಪ್ಯಾನ್ ಕಾರ್ಡ್ ಅನ್ನು ಪಡೆದುಕೊಳ್ಳಿ..! ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿದೆ ಸಂಪೂರ್ಣ ಮಾಹಿತಿ..!
ನಮಸ್ಕಾರ ಬಂಧುಗಳೇ ಆದಾಯ ತೆರಿಗೆ ಇಲಾಖೆಯಿಂದ ಪ್ರತಿಯೊಬ್ಬ ನಾಗರಿಕರಿಗೂ ಉಚಿತವಾಗಿ ಪ್ಯಾನ್ ಕಾರ್ಡ್ ಅನ್ನು ಒದಗಿಸುತ್ತದೆ. ನೀವು ಪ್ಯಾನ್ ಕಾರ್ಡ್ ಅನ್ನು ಪಡೆದುಕೊಳ್ಳಲು 18 ವರ್ಷ ತುಂಬಿರಬೇಕು, ನಿಮಗೆ 18 ವರ್ಷ ತುಂಬಿದ್ದು ನಿಮ್ಮ ಹತ್ತಿರ ಪ್ಯಾನ್ ಕಾರ್ಡ್ ಇಲ್ಲ ಎಂದರೆ ನೀವು ಸುಲಭವಾಗಿ ಮೊಬೈಲ್ ಫೋನನ್ನು ಬಳಸಿಕೊಂಡು ಪ್ಯಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು ಮತ್ತು ಉಚಿತವಾಗಿ ಕಾರ್ಡ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಹಣಕಾಸಿನ ವಹಿವಾಟುಗಳಿಗಾಗಿ ಭಾರತದ ಪ್ರತಿಯೊಬ್ಬ ನಾಗರಿಕನಿಗೆ ಪ್ಯಾನ್ ಕಾರ್ಡ್ ಪ್ರಮುಖ ದಾಖಲೆಯಾಗಿದೆ. ನೀವೇನಾದರೂ ಇ-ಪ್ಯಾನ್ ಕಾರ್ಡ್ ಮಾಡಿಸಲು ಒಂದು ಸರಳ ಪ್ರಕ್ರಿಯೆಯಾಗಿದೆ ಇದಕ್ಕೆ ಯಾವುದೇ ಶುಲ್ಕವನ್ನು ವಿಧಿಸದೆ ಇ-ಪ್ಯಾನ್ ಕಾರ್ಡ್ ಅನ್ನು ಪಡೆದುಕೊಳ್ಳಬಹುದು. ಆದಾಯ ತೆರಿಗೆ ಇಲಾಖೆ ಇ-ಫೈಲಿಂಗ್ ವೆಬ್ ಸೈಟ್ ನಲ್ಲಿ ತ್ವರಿತ ಪ್ಯಾನ್ ಕಾರ್ಡ್ ಆನ್ಲೈನ್ ಅಲ್ಲಿ ಲಭ್ಯವಿದೆ. ಹಾಗಾದರೆ ಉಚಿತವಾಗಿ ಇ-ಪ್ಯಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವ ವಿಧಾನದ ಬಗ್ಗೆ ತಿಳಿದುಕೊಳ್ಳೋಣ.
ಪ್ಯಾನ್ ಕಾರ್ಡ್ ನಮಗೆ ಏಕೆ ಬೇಕು
ಹಣಕಾಸಿನ ವ್ಯವಹಾರಕ್ಕಾಗಿ ಅಥವಾ ಹಣಕಾಸಿನ ವಹಿವಾಟುಗಳಿಗಾಗಿ ಪ್ಯಾನ್ ಕಾರ್ಡ್ ಪ್ರಮುಖ ದಾಖಲೆಯಾಗಿದೆ. ಪ್ಯಾನ್ ಕಾರ್ಡ್ ಗುರುತಿನ ಚೀಟಿಗಾಗಿ ಕಾರ್ಯನಿರ್ವಹಿಸುತ್ತದೆ. ಪ್ಯಾನ್ ಕಾರ್ಡ್ ಇಲ್ಲದೆ ಇದ್ದರೆ ಬ್ಯಾಂಕ್ ಖಾತೆಯಲ್ಲಿ ಸಾಲವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಹಾಗಾದರೆ ಮನೆಯಲ್ಲಿ ಕೂತುಕೊಂಡು ನೀವು ಸುಲಭವಾಗಿ ಇ-ಪ್ಯಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವ ವಿಧಾನದ ಬಗ್ಗೆ ತಿಳಿದುಕೊಳ್ಳೋಣ.
ಇ-ಪ್ಯಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವ ವಿಧಾನ
ನಿಮ್ಮ ಹತ್ತಿರ ಮೊಬೈಲ್ ಇದ್ದರೆ ಸಾಕು ನೀವು ಸುಲಭವಾಗಿ ಹತ್ತು ನಿಮಿಷದಲ್ಲಿ ಇ-ಪ್ಯಾನ್ ಕಾರ್ಡ್ ಅನ್ನು ಪಡೆದುಕೊಳ್ಳಬಹುದು. ಹಾಗಾದರೆ ಯಾವ ವೆಬ್ಸೈಟ್ ನಲ್ಲಿ ಇ-ಪ್ಯಾನ್ ಕಾರ್ಡ್ ಅನ್ನು ಪಡೆದುಕೊಳ್ಳಬೇಕು ಎಂಬ ಎಲ್ಲಾ ವಿವರವನ್ನು ಈ ಕೆಳಭಾಗದಲ್ಲಿ ತಿಳಿಸಲಾಗಿದೆ.
- ಮೊದಲು ನೀವು ಆದಾಯ ತೆರಿಗೆ ಇಲಾಖೆಯ ಇ-ಫೈಲಿಂಗ್ ಅಧಿಕೃತ https://eportal.incometax.gov.in/iec/foservices/#/pre-login/instant-e-pan ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
- ನಂತರ ನಿಮಗೆ ಅಲ್ಲಿ ಕೆಳಗೆ ಕಾಣಬಹುದು ಗೇಟ್ ನ್ಯೂ ಇ-ಪ್ಯಾನ್ ಕಾರ್ಡ್ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ.
- ಕ್ಲಿಕ್ ಮಾಡಿದ ನಂತರ ನೀವು ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ ಮತ್ತು ಕ್ಯಾಪ್ಚರ್ ಕೋಡ್ ಅನ್ನು ಭರ್ತಿ ಮಾಡಬೇಕು ನಂತರ ದೃಢೀಕರಣದ ಮೇಲೆ ಚೆಕ್ ಮಾಡಬೇಕು.
- ನಂತರ ನೀವು ಗೆಟ್ ಓಟಿಪಿ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ. ನಿಮ್ಮ ಆಧಾರ್ ಕಾರ್ಡ್ ಗೆ ಮೊಬೈಲ್ ಲಿಂಕ್ ಆಗಿರೋ ಮೊಬೈಲ್ ಸಂಖ್ಯೆಗೆ ಓಟಿಪಿ ಬರುತ್ತದೆ ಓಟಿಪಿಯನ್ನು ನಮೂದಿಸಿ.
- ಈಗ ನಿಮಗೆ ನಿಮ್ಮ ಆಧಾರ್ ಕಾರ್ಡ್ ಡಿನ ಮಾಹಿತಿ ದೊರೆಯುತ್ತದೆ, ಅಲ್ಲಿ ನೀವು ನಿಮ್ಮ ಮಾಹಿತಿಯನ್ನು ಪರಿಶೀಲನೆ ಮಾಡಿಕೊಳ್ಳಿ ನಂತರ ನೀವು ದೃಢೀಕರಿಸುವ ಬಾಕ್ಸ್ ಮೇಲೆ ಚೆಕ್ ಮಾಡಿಕೊಳ್ಳಿ
- ಕೊನೆಯ ಹಂತದಲ್ಲಿ ನೀವು ಸಲ್ಲಿಸು ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ.
ಈ ರೀತಿ ನೀವು ಆನ್ಲೈನ್ ನಲ್ಲಿ ಮಾಡಿದರೆ ಸಾಕು ಇ-ಪ್ಯಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು. ಕೆಲವು ಗಂಟೆಗಳ ಆದ ನಂತರ ನಿಮ್ಮ ಇ-ಪ್ಯಾನ್ ಕಾರ್ಡ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಡೌನ್ಲೋಡ್ ಮಾಡಿಕೊಂಡಿದ್ದ ನಂತರ ಇ-ಪ್ಯಾನ್ ಕಾರ್ಡ್ ಅನ್ನು ಎಲ್ಲಿ ಬೇಕಾದರೂ ಉಪಯೋಗಿಸಬಹುದು. ಸುಲಭವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನದ ಬಗ್ಗೆ ನಾವು ತಿಳಿದುಕೊಂಡಿದ್ದೇವೆ ಹಾಗೆಯೇ ಇ-ಪ್ಯಾನ್ ಕಾರ್ಡ್ ಅನ್ನು ಡೌನ್ಲೋಡ್ ಮಾಡಿಕೊಳ್ಳುವ ವಿಧಾನದ ಬಗ್ಗೆ ತಿಳಿದುಕೊಳ್ಳೋಣ.
ಇ-ಪ್ಯಾನ್ ಕಾರ್ಡ್ ಅನ್ನು ಡೌನ್ಲೋಡ್ ಮಾಡಿಕೊಳ್ಳುವ ವಿಧಾನ
ಇ-ಪ್ಯಾನ್ ಕಾರ್ಡ್ ಅನ್ನು ಡೌನ್ಲೋಡ್ ಮಾಡಿಕೊಳ್ಳಲು ಮೊದಲು ನೀವು ಆದಾಯ ತೆರಿಗೆ ಇಲಾಖೆ ಅಧಿಕೃತ https://eportal.incometax.gov.in/iec/foservices/#/pre-login/instant-e-pan ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
ಇಲ್ಲಿ ನಿಮಗೆ ಎರಡು ಆಪ್ಷನ್ ಕಾಣುತ್ತದೆ ಸ್ಥಿತಿಯನ್ನು ಪರಿಶೀಲಿಸಿ/ ಪ್ಯಾನ್ ಡೌನ್‌ಲೋಡ್ ಮಾಡಿ ಎಂಬ ಆಪ್ಷನ್ ಅನ್ನು ಕ್ಲಿಕ್ ಮಾಡಿ.
ಇಲ್ಲಿ ನಿಮ್ಮ 12 ಅಂಕಿಯ ಆಧಾರ್ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ, ನಮೂಂದಿಸಿದ ನಂತರ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಿ.
ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಿದರೆ ಸಾಕು ನಿಮಗೆ ಇ-ಪ್ಯಾನ್ ಕಾರ್ಡ್ ಡೌನ್ಲೋಡ್ ಆಪ್ಷನ್ ಕೇಳುತ್ತದೆ. ಅಲ್ಲಿ ನೀವು ಡೌನ್ಲೋಡ್ ಮಾಡಿಕೊಳ್ಳಬಹುದು.
ಒಂದು ವೇಳೆ ಇ-ಪ್ಯಾನ್ ಕಾರ್ಡ್ ಸ್ಥಿತಿಯನ್ನು ಪರಿಶೀಲಿನೆ ಮಾಡಬೇಕೆಂದರೆ ಈ ಮೇಲ್ಭಾಗದಲ್ಲಿ ತಿಳಿಸಿಕೊಟ್ಟಿರುವ ರೀತಿಯಲ್ಲಿ ಇ-ಪ್ಯಾನ್ ಕಾರ್ಡ್ ನ ಸ್ಥಿತಿಯನ್ನು ನೋಡಿಕೊಳ್ಳಬಹುದು.
ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್
ಹೌದು ಗೆಳೆಯರೇ ಕೆಲವು ತಿಂಗಳುಗಳ ಹಿಂದೆ ಆದಾಯ ತೆರಿಗೆ ಇಲಾಖೆಯು ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ತಿಳಿಸಿತ್ತು, ಆದರೆ ಹೆಚ್ಚಿನ ಜನರು ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ತಲೆಕೆಡಿಸಿಕೊಂಡಿರಲಿಲ್ಲ. ಆಗ ಆದಾಯ ತೆರಿಗೆ ಇಲಾಖೆಯು ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು 1000 ವಿಳಂಬ ಶುಲ್ಕ ಅನ್ವಯಿಸಲಾಯಿತು. ಆ ಸಮಯದಲ್ಲಿ ಹೆಚ್ಚಿನ ಜನರು 1000 ದಂಡವನ್ನು ನೀಡಿ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡನ್ನು ಲಿಂಕ್ ಮಾಡಿಕೊಂಡರು. ಆದರೆ ಕೆಲವು ಜನರು ಇನ್ನೂ ಸಹ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿಕೊಂಡಿಲ್ಲ. ನೀವೇನಾದರೂ ಹಣಕಾಸಿನ ವ್ಯವಹಾರ ಮಾಡುವ ಸಮಯದಲ್ಲಿ ಪ್ಯಾನ್ ಕಾರ್ಡ್ ಪ್ರಮುಖ ವಾಗುತ್ತದೆ. ಆದರೆ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಆಗಿದ್ದರೆ ಮಾತ್ರ ಪ್ರತಿಯೊಂದು ಕೆಲಸಕ್ಕೆ ಉಪಯೋಗವಾಗುತ್ತದೆ.
ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡುವ ವಿಧಾನ
ಹೌದು ಗೆಳೆಯರೇ ಪ್ಯಾನ್ ಕಾರ್ಡ್ ಗೆ ನೀವು ಆಧಾರ್ ಕಾರ್ಡ್ ಲಿಂಕ್ ಮಾಡಬೇಕೆಂದರೆ ನಿಮ್ಮ ಹತ್ತಿರ ಮೊಬೈಲ್ ಇದ್ದರೆ ಸಾಕು ನೀವು ಆದಾಯ ತೆರಿಗೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿರುವ ಮೂಲಕ ಅಲ್ಲಿ ನೀವು ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡಿಕೊಳ್ಳಬಹುದು.
ನಾನು ನಿಮಗೆ ಒಂದು ಸಲಹೆ ನೀಡುವುದೇನೆಂದರೆ ಆನ್ಲೈನ್ ಮೂಲಕ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ತುಂಬಾ ಕಷ್ಟಕರವಾಗಿದೆ ಮತ್ತು ತುಂಬಾ ತಲೆ ಬಿಸಿಯಾಗುತ್ತದೆ. ಇಂತಹ ಸಮಯದಲ್ಲಿ ಯಾವುದೇ ಕಾರಣಕ್ಕೂ ಆನ್ಲೈನ್ ಮೂಲಕ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಹೋಗಬೇಡಿ ಹೊರತಾಗಿ ನಿಮ್ಮ ಊರಿನ ಹತ್ತಿರವಿರುವ ಕೆಲವು ಸೈಬರ್ ಗಳಿಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ನಿಮ್ಮ ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡಿಸಿಕೊಳ್ಳಬಹುದು. ಪಾನ್ ಕಾರ್ಡ್ ಗೆ ಆಧಾರ್ ಕಾರ್ಡನ್ನು ಲಿಂಕ್ ಮಾಡಿಸಿಕೊಳ್ಳಲು ಒಂದು ಸಾವಿರದಂಡವನ್ನು ನೀಡಿ ಲಿಂಕ್ ಮಾಡಿಸಿಕೊಳ್ಳಬೇಕಾಗುತ್ತದೆ.
ಈ ಕೆಲಸವನ್ನು ಒಂದು ವರ್ಷ ಹಿಂದಿಯೇ ಮಾಡಿದರೆ ಕೇವಲ ರೂ.50 ಗಳಲ್ಲಿ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಆಗಿರುತ್ತಿತ್ತು. ಜನರ ನಿರ್ಲಕ್ಷೆಯಿಂದ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ರೂ.1000 ದಂಡ / ವಿಳಂಬ ಶುಲ್ಕ ಅನ್ವಯಿಸಲಾಯಿತು. ಇನ್ನು ನೀವು ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿಕೊಂಡಿಲ್ಲವೆಂದರೆ 1000ಕ್ಕಿಂತ ಹೆಚ್ಚು ದಂಡವನ್ನು ವಿಧಿಸಿ ಲಿಂಕ್ ಮಾಡಿಸಿಕೊಳ್ಳಬೇಕಾಗುತ್ತದೆ. ಈ ಕಾರಣದಿಂದ ಆದಷ್ಟು ಬೇಗ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಕೊಳ್ಳಿ. ಹಾಗಾದರೆ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಆಗಿರುವ ಸ್ಥಿತಿಯನ್ನು ಆನ್ಲೈನಲ್ಲಿ ನೋಡುವ ವಿಧಾನದ ಬಗ್ಗೆ ತಿಳಿದುಕೊಳ್ಳೋಣ.
ಆಧಾರ್ ಕಾರ್ಡ್ ಗೆ ಪ್ಯಾನ್ ಕಾರ್ಡ್ ಲಿಂಕ್ ಆಗಿರುವ ಸ್ಥಿತಿಯನ್ನು ನೋಡುವ ವಿಧಾನ
ಆನ್ಲೈನ್ ನಲ್ಲಿ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಕಷ್ಟಕರವಾಗಿದೆ ಅದರಿಂದ ಆಫ್ಲೈನ್ ಮೂಲಕ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಅನ್ನು ಮಾಡಿಸಿಕೊಳ್ಳಿ. ಆದರೆ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಆಗಿರುವ ಸ್ಥಿತಿಯನ್ನು ಸುಲಭವಾಗಿ ಮೊಬೈಲ್ ಮೂಲಕ ನೋಡಿಕೊಳ್ಳಬಹುದು.
- ಮೊದಲು ನೀವು ಆದಾಯ ತೆರಿಗೆ ಇಲಾಖೆಯ ಅಧಿಕೃತ https://www.incometax.gov.in/iec/foportal/ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
- ಅಲ್ಲಿ ನೀವು ಎಡಬಾಗದಲ್ಲಿ ಮೂರು ಡಾಟ್ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ. ಅಲ್ಲಿ ನೀವು ಲಿಂಕ್ ಆಧಾರ್ ಸ್ಥಿತಿ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ.
- ಅಲ್ಲಿ ನಿಮ್ಮ ಪ್ಯಾನ್ ಕಾರ್ಡ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ.
- ನಂತರ ನೀವು ಲಿಂಕ್ ಆಧಾರ್ ಸ್ಥಿತಿಯನ್ನು ವೀಕ್ಷಿಸಿ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ.
- ಈಗ ನಿಮಗೆ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಆಗಿದೆಯೋ ಇಲ್ಲವೋ ಎಂಬ ಸ್ಥಿತಿ ಕಾಣುತ್ತದೆ.
- ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಆಗಲು ಕನಿಷ್ಠ 7 ದಿನಗಳು ಬೇಕಾಗುತ್ತದೆ. 7 ದಿನಗಳದ ನಂತರ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಆಗಿದೆಯೋ ಇಲ್ಲವೋ ಎಂಬ ಸ್ಥಿತಿಯನ್ನು ನೋಡಿಕೊಳ್ಳಬಹುದು.