Ration Card: ರೇಷನ್ ಕಾರ್ಡ್ ನಲ್ಲಿ ಮಿಸ್ ಆಗಿರೋ ಕುಟುಂಬದ ಸದಸ್ಯರ ಹೆಸರನ್ನು ಸೇರಿಸಲು ಅವಕಾಶ..! ಇಲ್ಲಿದೆ ಸಂಪೂರ್ಣ ಮಾಹಿತಿ…!
ನಮಸ್ಕಾರ ಬಂಧುಗಳೇ ಈಗಿನ ಸಮಯದಲ್ಲಿ ರೇಷನ್ ಕಾರ್ಡ್ ಪ್ರಮುಖ ದಾಖಲೆಯಾಗಿದೆ, ಏಕೆಂದರೆ ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಗೃಹಲಕ್ಷ್ಮಿ ಯೋಜನೆಯ ಹಣ ಮತ್ತು ಅನ್ನಭಾಗ್ಯ ಯೋಜನೆಯ ಹಣವನ್ನು ಪಡೆದುಕೊಳ್ಳಲು ರೇಷನ್ ಕಾರ್ಡ್ ಪ್ರಮುಖ ದಾಖಲೆಯಾಗಿದೆ. ರೇಷನ್ ಕಾರ್ಡ್ ನಲ್ಲಿ ಸರಿಯಾದ ದಾಖಲೆ ಇಲ್ಲದಿದ್ದರೆ ಯಾವುದೇ ಯೋಜನೆಯ ಹಣ ಬರುವುದಿಲ್ಲ. ಹಾಗೆಯೇ ನಿಮ್ಮ ರೇಷನ್ ಕಾರ್ಡ್ ನಲ್ಲಿ ಎಲ್ಲಾ ಸದಸ್ಯರ ಹೆಸರು ಸೇರ್ಪಡೆ ಆಗಿದಿಯಾ ಎಂದು ಚೆಕ್ ಮಾಡಿಕೊಳ್ಳಿ. ಒಂದು ವೇಳೆ ಸದಸ್ಯರ ಹೆಸರು ಮಿಸ್ ಆಗಿದ್ದಾರೆ ಅಥವಾ ಇಲ್ಲವಾದರೆ ಆದಷ್ಟು ಬೇಗ ತಿದ್ದುಪಡಿ ಮಾಡಿಕೊಳ್ಳಿ.
ರೇಷನ್ ಕಾರ್ಡ್ ನಲ್ಲಿ ಮಿಸ್ ಆಗಿರೋ ಕುಟುಂಬದ ಸದಸ್ಯರ ಹೆಸರನ್ನು ಸೇರ್ಪಡೆ ಮಾಡಿಕೊಳ್ಳಿ
ಹೌದು ಗೆಳೆಯರೇ, ನಿಮ್ಮ ರೇಷನ್ ಕಾರ್ಡ್ ನಲ್ಲಿ ನಿಮ್ಮ ಕುಟುಂಬದ ಎಲ್ಲಾ ಸದಸ್ಯರ ಹೆಸರು ಇದ್ದರೆ ಏನು ಸಮಸ್ಯೆ ಉಂಟಾಗುವುದಿಲ್ಲ. ಒಂದು ವೇಳೆ ರೇಷನ್ ಕಾರ್ಡ್ ನಲ್ಲಿ ನಿಮ್ಮ ಕುಟುಂಬದ ಒಬ್ಬ ಸದಸ್ಯ ಮಿಸ್ ಆಗಿದ್ದರೆ ಸರ್ಕಾರದಿಂದ ಬರುವ ಯೋಜನೆಯ ಹಣ ಅಂದರೆ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಕುಟುಂಬದ ಪ್ರತಿಯೊಬ್ಬ ಸದಸ್ಯನಿಗೆ 5 ಕೆಜಿ ಅಕ್ಕಿಯ ಬದಲು ಹಣವನ್ನು ಬಿಪಿಎಲ್ ಕಾರ್ಡ್ ನಲ್ಲಿ ಇರುವ ಪ್ರತಿಯೊಂದು ಸದಸ್ಯರಿಗೂ ನೀಡಲಾಗುತ್ತಿದೆ. ಒಂದು ವೇಳೆ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಸದಸ್ಯ ಮಿಸ್ ಆಗಿದ್ದರೆ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಬರುವ ಹಣ ಮತ್ತು ಕಡಿಮೆ ಹಕ್ಕಿಯನ್ನು ಪಡೆದುಕೊಳ್ಳಬೇಕಾಗುತ್ತದೆ.
ತಿದ್ದುಪಡಿ ಮಾಡಿಕೊಳ್ಳಲು ಸರ್ಕಾರದಿಂದ ಅವಕಾಶ
ಹೌದು ಗೆಳೆಯರೇ, ಈಗಾಗಲೇ ಸರ್ಕಾರವು ಹೊಸದಾಗಿ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ನೀಡಿತು ಹಾಗೆಯೇ ನಿಮ್ಮ ರೇಷನ್ ಕಾರ್ಡ್ ನಲ್ಲಿ ಕೆಲವು ದಾಖಲೆಗಳು ಮತ್ತು ಹೆಸರನ್ನು ತಿದ್ದುಪಡಿ ಮಾಡಿಕೊಳ್ಳಲು ಸರ್ಕಾರ ಅವಕಾಶ ನೀಡಿದೆ. ಕುಟುಂಬದ ಸದಸ್ಯರನ್ನು ಸೇರ್ಪಡೆ ಮಾಡುವುದು, ಮರಣ ಹೊಂದಿದ ವ್ಯಕ್ತಿಯ ಹೆಸರನ್ನು ರೇಷನ್ ಕಾರ್ಡ್ ನಿಂದ ತೆಗೆಯುವುದು ಮತ್ತು ಇನ್ನಿತರ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಳ್ಳಬಹುದು. ಹಾಗಾದರೆ ನಿಮ್ಮ ಮೊಬೈಲ್ ಅನ್ನು ಬಳಸಿಕೊಂಡು ಸುಲಭವಾಗಿ ಆನ್ಲೈನ್ ನಲ್ಲಿ ರೇಷನ್ ಕಾರ್ಡ್ ನ ಸ್ಥಿತಿಯ ವಿವರವನ್ನು ಪರಿಶೀಲನೆ ಮಾಡುವ ವಿಧಾನದ ಬಗ್ಗೆ ಈ ಕೆಳಭಾಗದಲ್ಲಿ ತಿಳಿಸಲಾಗಿದೆ
ಆನ್ಲೈನ್ ನಲ್ಲಿ ರೇಷನ್ ಕಾರ್ಡ್ ನ ಸ್ಥಿತಿಯ ವಿವರವನ್ನು ಪರಿಶೀಲನೆ ಮಾಡುವ ವಿಧಾನ
ನಿಮ್ಮ ಹತ್ತಿರ ಮೊಬೈಲ್ ಇದ್ದರೆ ಸಾಕು ರೇಷನ್ ಕಾರ್ಡ್ ನ ಅಧಿಕೃತ ವ್ಯಕ್ತಿಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಸುಲಭವಾಗಿ ರೇಷನ್ ಕಾರ್ಡ್ ನ ಸ್ಥಿತಿಯ ವಿವರವನ್ನು ಪರಿಶೀಲನೆ ಮಾಡಿಕೊಳ್ಳಬಹುದು.
- ಮೊದಲು ನೀವು ರೇಷನ್ ಕಾರ್ಡ್ ನ ಅಥವಾ ಸರ್ಕಾರದ ಅಧಿಕೃತ https://nfsa.gov.in/ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
- ಈಗ ನಿಮಗೆ ಹೋಂ ಪೇಜ್ ಓಪನ್ ಆಗುತ್ತದೆ, ಅಲ್ಲಿ ನಿಮಗೆ ರೇಷನ್ ಕಾರ್ಡ್ ವಿವರ ಎಂಬ ಆಪ್ಶನ್ ಮೇಲೆ ಕ್ಲಿಕ್ ಮಾಡಿ.
- ಇಲ್ಲಿ ನೀವು ನಿಮ್ಮ ರಾಜ್ಯ, ಜಿಲ್ಲೆ, ತಾಲೂಕು, ಹೋಬಳಿ ಈ ಎಲ್ಲ ವಿವರವನ್ನು ಆಯ್ಕೆ ಮಾಡಬೇಕಾಗುತ್ತದೆ
- ನಂತರ ನಿಮ್ಮ ಊರಿನ ಹತ್ತಿರ ಇರುವ ನ್ಯಾಯಬೆಲೆ ಅಂಗಡಿ, ಮಾಲೀಕರ ಹೆಸರು, ಜೊತೆಗೆ ಪಡಿತರ ಚೀಟಿ ಟೈಪ್ ಯಾವುದು ಎಂದು ಆಯ್ಕೆ ಮಾಡಿಕೊಳ್ಳಬೇಕು.
- ನಂತರ ನಿಮಗೆ ನಿಮ್ಮ ಪಡಿತರ ಸಂಖ್ಯೆಯನ್ನು ನಮೂದಿಸಲು ಕೇಳಿಸುತ್ತದೆ.
- ನಮೂಂದಿಸಿದ ನಂತರ ನಿಮಗೆ ಒಂದು ಲಿಸ್ಟ್ ತೆಗೆದುಕೊಳ್ಳುತ್ತದೆ. ಅದರಲ್ಲಿ ನಿಮಗೆ ಪಡಿತರ ಚೀಟಿಯ ಸಂಪೂರ್ಣ ವಿವರ ಇರುತ್ತದೆ.
- ಒಂದು ವೇಳೆ ಆ ಲಿಸ್ಟ್ ನಲ್ಲಿ ಸದಸ್ಯರ ಹೆಸರು ಕಾಣದಿದ್ದರೆ, ನಿಮ್ಮ ಊರಿನ ಹತ್ತಿರವಿರುವ ಆಹಾರ ಇಲಾಖೆ ಕಚೇರಿಗೆ ಭೇಟಿ ನೀಡಿ ಹೆಸರನ್ನು ಸೇರ್ಪಡೆ ಮಾಡಿಕೊಳ್ಳಬಹುದು.
ರೇಷನ್ ಕಾರ್ಡನ್ನು ತಿದ್ದುಪಡಿ ಮಾಡಿಕೊಳ್ಳುವ ವಿಧಾನ
ಒಂದು ವೇಳೆ ರೇಷನ್ ಕಾರ್ಡ್ ನಲ್ಲಿ ಹೆಸರನ್ನು ಅಥವಾ ಮರಣ ಹೊಂದಿದ ವ್ಯಕ್ತಿಯ ಹೆಸರನ್ನು ತೆಗೆದುಹಾಕಲು ಅಥವಾ ಇನ್ನಿತರ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಳ್ಳಬೇಕೆಂದರೆ ನಿಮ್ಮ ಊರಿನ ಹತ್ತಿರ ಇರುವ ಆಹಾರ ಇಲಾಖೆ ಕಛೇರಿ ಅಥವಾ ಸೇವ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ಅಲ್ಲಿ ಕೇಳುವ ಎಲ್ಲಾ ದಾಖಲೆಗಳನ್ನು ನೀಡಿ ನೀವು ಯಾವ ದಾಖಲೆಯನ್ನು ತಿದ್ದುಪಡಿ ಮಾಡಿಕೊಳ್ಳಬೇಕು ಆ ದಾಖಲೆಯನ್ನು ನೀವು ಸುಲಭವಾಗಿ ತಿದ್ದುಪಡಿ ಮಾಡಿಕೊಳ್ಳಬಹುದು. ಆನ್ಲೈನ್ ಮೂಲಕ ರೇಷನ್ ಕಾರ್ಡ್ ಅನ್ನು ತಿದ್ದುಪಡಿ ಮಾಡಿಕೊಳ್ಳಲು ಯಾವುದೇ ಅವಕಾಶ ನೀಡಿಲ್ಲ. ಈ ಕಾರಣದಿಂದ ಆಫ್ಲೈನ್ ಮೂಲಕ ಸುಲಭವಾಗಿ ರೇಷನ್ ಕಾರ್ಡ್ ಅನ್ನು ತಿದ್ದುಪಡಿ ಮಾಡಿಕೊಳ್ಳಬಹುದು.
ಏಪ್ರಿಲ್ ತಿಂಗಳ ಅನ್ನಭಾಗ್ಯ ಯೋಜನೆ ಹಣ ಬಂದಿದ್ಯಾ ಎಂದು ಚೆಕ್ ಮಾಡಿಕೊಳ್ಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಯನ್ನು ತಂದಿದೆ, ಅದರಲ್ಲಿ ಅನ್ನಭಾಗ್ಯ ಯೋಜನೆ ಅಡಿಯಲ್ಲಿ 5 ಕೆಜಿ ಅಕ್ಕಿಯ ಬದಲು ಹಣವನ್ನು ನೀಡಲಾಗುತ್ತಿದೆ. ಕಳೆದ ಏಳು ತಿಂಗಳುಗಳಿಂದ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಖಾತೆಗೆ ಹಣವನ್ನು ಜಮಾ ಮಾಡಲಾಗುತ್ತಿದೆ. ಪ್ರತಿ ಕೆಜಿಗೆ 34 ರೂಪಾಯಿಗಳಂತೆ ಒಬ್ಬ ಸದಸ್ಯನಿಗೆ 170ಗಳನ್ನು ನೀಡಲಾಗುತ್ತಿದೆ. ಈ ಹಣವನ್ನು ಸುಲಭವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ.
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಆಹ್ವಾನ
ಹೌದು ಗೆಳೆಯರೇ, ನೀವೇನಾದರೂ ಹೊಸ ಎಪಿಎಲ್ ಕಾರ್ಡ್ ಅಥವಾ ಬಿಪಿಎಲ್ ಕಾರ್ಡ್ ಅನ್ನು ಪಡೆದುಕೊಳ್ಳಲು ಸರ್ಕಾರದಿಂದ ಅರ್ಜಿ ಆಹ್ವಾನ..! ಈಗಿನ ಸ್ಥಿತಿಯಲ್ಲಿ ರೇಷನ್ ಕಾರ್ಡ್ ಪ್ರಮುಖ ದಾಖಲೆಯಾಗಿದೆ, ಏಕೆಂದರೆ ಸರ್ಕಾರ ನೀಡುತ್ತಿರುವ ಕೆಲವು ಯೋಜನೆಗಳಿಗೆ ಪ್ರಮುಖ ದಾಖಲೆಯಾಗಿದೆ. ಈ ಕಾರಣದಿಂದ ನೀವು ಹೊಸ ರೇಷನ್ ಕಾರ್ಡ್ ಅನ್ನು ಮಾಡಿಸಿಕೊಳ್ಳಬೇಕೆಂದರೆ ಒಳ್ಳೆಯ ಅವಕಾಶ ಎಂದು ಹೇಳಬಹುದು. ಹಾಗೆಯೇ ನಿಮ್ಮ ರೇಷನ್ ಕಾರ್ಡ್ ನಲ್ಲಿ ಏನಾದರೂ ತಿದ್ದುಪಡಿ ಮಾಡಬೇಕೆಂದರೆ ಅದರ ಬಗ್ಗೆ ತಿಳಿದುಕೊಳ್ಳಲು ಮತ್ತು ತಿದ್ದುಪಡಿ ಮಾಡಿಕೊಳ್ಳಲು ಈ ಮೇಲಿನ ಭಾಗದಲ್ಲಿ ಎಲ್ಲ ವಿವರವನ್ನು ವಿವರಿಸಲಾಗಿದೆ. ನೀವೇನಾದರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಿದರೆ ಶೀಘ್ರವೇ ಸರ್ಕಾರ ಮಂಜೂರು ಮಾಡುತ್ತದೆ. ಈ ಎಲ್ಲ ಸೌಲಭ್ಯ ಇರುವುದರಿಂದ ಆದಷ್ಟು ಬೇಗ ಯಾರೆಲ್ಲಾ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕೆಂದಿದ್ದೀರಾ ಅಂತವರು ಸಲ್ಲಿಸಬಹುದು.
ಅನ್ನಭಾಗ್ಯ ಯೋಜನೆಯ ಹಣ ನಿಮ್ಮ ಬ್ಯಾಂಕ್ ಖಾತೆಗೆ ಬಂದಿದೆಯೋ ಇಲ್ಲವೋ ಎಂದು ಆನ್ಲೈನ್ ಮೂಲಕ ಚೆಕ್ ಮಾಡಿಕೊಳ್ಳಿ
ಹೌದು ಗೆಳೆಯರೇ ಪ್ರತಿ ತಿಂಗಳು ಅನ್ನಭಾಗ್ಯ ಯೋಜನೆ ಅಡಿಯಲ್ಲಿ ನಿಮ್ಮ ಬ್ಯಾಂಕ್ ಖಾತೆಗೆ ಹಣ ಬಂದಿದೆಯೋ ಇಲ್ಲವೋ ಎಂದು ನೀವು ಸುಲಭವಾಗಿ ಮೊಬೈಲ್ ಅನ್ನು ಬಳಸಿಕೊಂಡು ಆನ್ಲೈನ್ ನಲ್ಲಿ ಚೆಕ್ ಮಾಡಿಕೊಳ್ಳಬಹುದು. ಅನ್ನಭಾಗ್ಯ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಸುಲಭವಾಗಿ ತಿಳಿದುಕೊಳ್ಳಬಹುದು.
- ಮೊದಲು ನೀವು DBT ಸ್ಟೇಟಸ್ ಚೆಕ್ ಮಾಡಿಕೊಳ್ಳಲು ಆಹಾರ ಇಲಾಖೆ ಅಧಿಕೃತ https://ahara.kar.nic.in/status1/status_of_dbt_new.aspx ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
- ವೆಬ್ಸೈಟ್ ಗೆ ಭೇಟಿ ನೀಡಿದ ನಂತರ ನಿಮಗೆ ಮೂರು ಲಿಂಕ್ ಗಳು ಕಾಣಿಸುತ್ತದೆ.
- ಅಲ್ಲಿ ಕೆಳಭಾಗದಲ್ಲಿರುವ ನಿಮ್ಮ ಜಿಲ್ಲೆ ಯಾವುದು ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
- ಈಗ ನೀವು DBT ಸ್ಟೇಟಸ್ ಎನ್ನುವ ಆಯ್ಕೆಯನ್ನು ಮಾಡಿಕೊಳ್ಳಿ ನಂತರ ವರ್ಷ, ತಿಂಗಳು, ರೇಷನ್ ಕಾರ್ಡ್ ಸಂಖ್ಯೆಯನ್ನು ನಮೂಂದಿಸಿ.
- ಕೊನೆಯ ಹಂತದಲ್ಲಿ ಕ್ಯಾಪ್ಚವನ್ನು ಎಂಟರ್ ಮಾಡಲು ಕೇಳುತ್ತದೆ, ಕ್ಯಾಪ್ಚವನ್ನು ಎಂಟರ್ ಮಾಡಿ ನಂತರ ಗೋ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ.
- ನಂತರ ನಿಮಗೆ ನೀವು ಯಾವ ತಿಂಗಳನ್ನು ಆಯ್ಕೆ ಮಾಡಿಕೊಂಡಿದ್ದೀರಾ ಆ ತಿಂಗಳ ಅನ್ನಭಾಗ್ಯ ಯೋಜನೆಯ ಹಣ ನಿಮ್ಮ ಬ್ಯಾಂಕ್ ಖಾತೆಗೆ ಬಿಡುಗಡೆ ಆಗಿದೆಯೋ ಇಲ್ಲವೋ ಎಂದು ಕಾಣಿಸುತ್ತದೆ.
- ಈ ರೀತಿ ಸುಲಭವಾಗಿ ಆನ್ಲೈನ್ ಮೂಲಕ ಅನ್ನಭಾಗ್ಯ ಯೋಜನೆಯ ಹಣದ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಬಹುದು.
ಅದಲ್ಲದೆ ನಿಮ್ಮ ಮೊಬೈಲ್ ನಲ್ಲಿ DBT ಸ್ಟೇಟಸ್ ಚೆಕ್ ಮಾಡಿಕೊಳ್ಳಲು ಪ್ಲೇ ಸ್ಟೋರ್ ಮೂಲಕ ಆಪ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಈ ಆಪ್ ನಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ, ಅನ್ನಭಾಗ್ಯ ಯೋಜನೆಯ ಹಣ, ಇನ್ನಿತರ ಯೋಜನೆಯ ಹಣವನ್ನು ಸುಲಭವಾಗಿ ಚೆಕ್ ಮಾಡಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಆಹಾರ ಇಲಾಖೆ ಕಚೇರಿಗೆ ಭೇಟಿ ನೀಡಿ
ಹೌದು ಗೆಳೆಯರೇ ನಿಮ್ಮ ಆಧಾರ್ ಕಾರ್ಡ್ ನ ತಿದ್ದುಪಡಿ ಅಥವಾ ಅನ್ನಭಾಗ್ಯ ಯೋಜನೆಯ ಹಣ ಬ್ಯಾಂಕ್ ಖಾತೆಗೆ ಬರೆದಿದ್ದರೆ. ಈ ಎಲ್ಲಾ ಸಮಸ್ಯೆಯನ್ನು ನಿಮ್ಮ ಊರಿನ ಹತ್ತಿರ ಇರುವ ಆಹಾರ ಇಲಾಖೆಯ ಕಚೇರಿಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಸುಲಭವಾಗಿ ರೇಷನ್ ಕಾರ್ಡ್ ನ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು.
ಇದನ್ನು ಗಮನಿಸಿ
ನಾನು ಈ ವೆಬ್ ಸೈಟ್ ನಲ್ಲಿ ಜನರಿಗೆ ಉಪಯೋಗವಾಗುವ ಮಾಹಿತಿಯನ್ನು ಪ್ರತಿದಿನ ಒದಗಿಸುತ್ತೇನೆ. ನೀವು ಪ್ರತಿದಿನ ಉತ್ತಮ ಮಾಹಿತಿಯನ್ನು ಪಡೆದುಕೊಳ್ಳಬೇಕೆಂದರೆ ನಮ್ಮ ಟೆಲಿಗ್ರಾಂ ಮತ್ತು ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ ಇದರಿಂದ ಪ್ರತಿದಿನ ಉತ್ತಮ ಮತ್ತು ಉಪಯೋಗವಾಗುವ ಮಾಹಿತಿಯನ್ನು ಗ್ರೂಪ್ನಲ್ಲಿ ಅಪ್ಡೇಟ್ ಮಾಡುತ್ತೇನೆ
ಈ ವೆಬ್ ಸೈಟ್ ನಲ್ಲಿ ನಾವು ಯಾವುದೇ ತಪ್ಪು ಮಾಹಿತಿಯನ್ನು ನೀಡುವುದಿಲ್ಲ. ಜನರಿಗೆ ಉಪಯೋಗವಾಗುವ ಜಾಬ್ ನ್ಯೂಸ್, ಅಗ್ರಿಕಲ್ಚರ್ ನ್ಯೂಸ್, ಇನ್ನಿತರ ಉಪಯೋಗವಾಗುವ ಮಾಹಿತಿಯನ್ನು ಇಲ್ಲಿ ನೀಡಲಾಗುತ್ತದೆ.
ಧನ್ಯವಾದಗಳು