Post Office Jobs: ಅಂಚೆ ಇಲಾಖೆಯಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ…! 10ನೇ ತರಗತಿ ಪಾಸಾದ್ರೆ ಸಾಕು, ಅರ್ಜಿ ಸಲ್ಲಿಸಲು ಇಲ್ಲಿದೆ ಸಂಪೂರ್ಣ ಮಾಹಿತಿ..!
ನಮಸ್ಕಾರ ಬಂಧುಗಳೇ ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಪೋಸ್ಟ್ ಮ್ಯಾನ್ ಹುದ್ದೆಗಳಿಗೆ ಬೃಹತ್ ಸಂಖ್ಯೆಯ ಭರ್ತಿಗಾಗಿ ಇತ್ತೀಚಿನ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಅಂಚೆ ಇಲಾಖೆಯಲ್ಲಿರುವ ನೇಮಕಾತಿಗೆ ಸಂಬಂಧಿಸಿದ ಎಲ್ಲ ವಿವರವನ್ನು ಈ ಲೇಖನದಲ್ಲಿ ಹಂತ ಹಂತವಾಗಿ ತಿಳಿಸಲಾಗಿದೆ.
ಅಂಚೆ ಇಲಾಖೆಯ ಅಧಿಸೂಚನೆ ಬಿಡುಗಡೆ
ಸರ್ಕಾರಿ ಸಂಸ್ಥೆಗಳಲ್ಲಿ ಒಂದಾದ ಭಾರತೀಯ ಅಂಚೆ ಇಲಾಖೆಯು ಬೃಹತ್ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳಬೇಕು ಅಂತ ಇರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ಎಂದು ಹೇಳಬಹುದು. ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟ್ ಮ್ಯಾನ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ 10ನೇ ತರಗತಿ ಪಾಸಾಗಿದ್ದರೆ ಸಾಕು ಸುಲಭವಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹಾಗಾದರೆ ಈ ಹುದ್ದೆಗೆ ಬೇಕಾಗುವ ಎಲ್ಲಾ ವಿವರವನ್ನು ಈ ಕೆಳಭಾಗದಲ್ಲಿ ಹಂತ ಹಂತವಾಗಿ ತಿಳಿಸಲಾಗಿದೆ.
ಒಟ್ಟು ಖಾಲಿ ಇರುವ ಹುದ್ದೆಗಳು
ಭಾರತೀಯ ಅಂಚೆ ಇಲಾಖೆಯ ಅಧಿಸೂಚನೆಯ ಪ್ರಕಾರ ಸುಮಾರು 32 ಸಾವಿರ ಹುದ್ದೆಗಳು ಖಾಲಿ ಇವೆ ಎಂದು ತಿಳಿಸಲಾಗಿದೆ.
ವಯೋಮಿತಿ
ಪೋಸ್ಟ್ ಮ್ಯಾನ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷ ಗರಿಷ್ಠ 40 ವರ್ಷ ಮೀರಿರಬಾರದು. 40 ವರ್ಷ ಮೀರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ. ಈ ಹುದ್ದೆಗೆ ಹೆಚ್ಚಿನ ವಯೋಮಿತಿ ಸಡಲಿಕೆ ಸಹ ನೀಡಲಾಗಿದೆ.
ವಯೋಮಿತಿಯ ಸಡಿಲಿಕೆ
ಈ ಹುದ್ದೆಯ ನಿಯಮದ ಪ್ರಕಾರ SC/ST ಅಭ್ಯರ್ಥಿಗಳಿಗೆ 3 ವರ್ಷ ಮತ್ತು OBC ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಲಿಕೆಯನ್ನು ನೀಡಲಾಗಿದೆ.
ವೇತನ
ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟ್ ಮ್ಯಾನ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.12,000 ದಿಂದ 14,000 ವರೆಗೆ ಸಂಬಳವನ್ನು ನೀಡಲಾಗುತ್ತದೆ. ಅದಲ್ಲದೆ ಇತರ ಸೌಲಭ್ಯವನ್ನು ಸಹ ಸರ್ಕಾರದಿಂದ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ಶುಲ್ಕ
ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು ಎಂದರೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವರ್ಗದ ಆಧಾರದ ಮೇಲೆ ಅರ್ಜಿ ಶುಲ್ಕವನ್ನು ವಿಧಿಸಲಾಗುತ್ತದೆ.
- OBC ಇತರೆ ಅಭ್ಯರ್ಥಿಗಳಿಗೆ ರೂ.100 ಶುಲ್ಕವನ್ನು ಪಾವತಿಸಬೇಕು.
- ಮಹಿಳೆಯರು, SC/ST PWD ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನೀಡುವಂತಿಲ್ಲ
ಈ ಹಣವನ್ನು ಸುಲಭವಾಗಿ ಡೆಬಿಟ್ ಕಾರ್ಡ್ ಅಥವಾ ಕ್ರೆಡಿಟ್ ಕಾರ್ಡ್, ಯುಪಿಐ, ನೆಟ್ ಬ್ಯಾಂಕಿಂಗ್ ಮೂಲಕ ಸುಲಭವಾಗಿ ಆನ್ಲೈನ್ ಮೂಲಕ ಪಾವತಿ ಮಾಡಬಹುದಾಗಿದೆ.
ಆಯ್ಕೆಯ ಪ್ರಕ್ರಿಯೆ
ಅಂಚೆ ಇಲಾಖೆಯಲ್ಲಿರುವ ಖಾಲಿ ಹುದ್ದೆಗೆ ಅಥವಾ ಸರ್ಕಾರಿ ಉದ್ಯೋಗಗಳಿಗೆ ಯಾವುದೇ ಲಿಖಿತ ಪರೀಕ್ಷೆಯನ್ನು ನಡೆಸುವುದಿಲ್ಲ. ಆಯ್ಕೆಯನ್ನು ಮತ್ತು ಉದ್ಯೋಗವನ್ನು ಮೆರಿಟ್ ಪಟ್ಟಿಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪೋಸ್ಟ್ ಆಫೀಸ್ ನಲ್ಲಿ ಏನು ಕೆಲಸ
ಸರ್ಕಾರಿ ಉದ್ಯೋಗಕ್ಕೆ ಆಯ್ಕೆಯಾದ ನಂತರ ನಿಮಗೆ ನಿಯೋಜಿಸಲಾದ ಪೋಸ್ಟ್ ಆಫೀಸ್ ನ ದೈನಂದಿನ ಕಾರ್ಯಾಚರಣೆಗಳಲ್ಲಿ ಕೆಲಸ ಮಾಡಬೇಕಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ಈ ಮೇಲೆ ನೀಡಲಾಗಿರುವ ಎಲ್ಲಾ ಅರ್ಹತೆಯನ್ನು ಹೊಂದಿರಬೇಕು. ಹಾಗಾದರೆ ಮಾತ್ರ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ನೀವು ಭಾರತೀಯ ಅಂಚೆ ಇಲಾಖೆಯ ಅಥವಾ ಆಯಾ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಸುಲಭವಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಒಂದು ವೇಳೆ ನಿಮಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕಷ್ಟಕರವಾದರೆ ನಿಮ್ಮ ಊರಿನ ಹತ್ತಿರವಿರುವ ಸೇವಾ ಕೇಂದ್ರಗಳಿಗೆ ಅಥವಾ ಕೆಲವು ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿ ನೀವು ಈ ಹುದ್ದೆಯ ವಿವರವನ್ನು ತಿಳಿಸಿ, ಅಲ್ಲಿ ನೀವು ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿಯನ್ನು ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಗಮನಿಸಿ
ಹೌದು ಗೆಳೆಯರೇ, ನಾನು ನಿಮಗೆ ತಿಳಿಸುವುದೇನೆಂದರೆ ಯಾವುದೇ ಖಾಲಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಮೊದಲು ಆ ಹುದ್ದೆಯ ಅಧಿಸೂಚನೆಯನ್ನು ಗಮನಿಸಿ. ಏಕೆಂದರೆ ನಾನು ಈ ಮಾಧ್ಯಮದಲ್ಲಿ ಈ ಹುದ್ದೆಗೆ ಬೇಕಾಗುವ ಪ್ರಮುಖ ಮಾಹಿತಿಯನ್ನು ತಿಳಿಸಲಾಗಿರುತ್ತದೆ. ಈ ಕಾರಣದಿಂದ ಪ್ರತಿಯೊಂದು ಖಾಲಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಮೊದಲು ಆ ಹುದ್ದೆಯ ಅಧಿಸೂಚನೆಯನ್ನು ಮತ್ತು ಹುದ್ದೆಯ ಎಲ್ಲ ವಿವರವನ್ನು ತಿಳಿದುಕೊಳ್ಳಿ ನಂತರ ಅರ್ಜಿಯನ್ನು ಸಲ್ಲಿಸಿ.
ಒಂದು ವೇಳೆ ನೀವು ಈ ಹುದ್ದೆಯ ಅಧಿಸೂಚನೆಯನ್ನು ತಿಳಿದುಕೊಳ್ಳಬೇಕೆಂದರೆ ಅರ್ಜಿ ಸಲ್ಲಿಸುವ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸುವ ಭಾಗದಲ್ಲಿ ಅಧಿಸೂಚನೆಯನ್ನು ನೀಡಲಾಗಿರುತ್ತದೆ. ನೀವು ಅದನ್ನು ಡೌನ್ಲೋಡ್ ಮಾಡಿಕೊಂಡು ಅದನ್ನು ಚೆನ್ನಾಗಿ ಓದಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ, ಅದಲ್ಲದೆ ಆನ್ಲೈನ್ ಅಥವಾ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ಮೊದಲು ನೀವು ಸರಿಯಾದ ದಾಖಲೆಯನ್ನು ಒದಗಿಸಿ ಅರ್ಜಿಯನ್ನು ಸಲ್ಲಿಸಿ. ಇಲ್ಲವಾದಲ್ಲಿ ಸಮಸ್ಯೆಗೆ ಒಳಗಾಗಬೇಕಾಗುತ್ತದೆ. ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಮತ್ತು ಪ್ರಾರಂಭದ ದಿನಾಂಕವನ್ನು ಅಧಿಕೃತ ವೆಬ್ಸೈಟ್ ನಲ್ಲಿ ನೀಡಲಾಗಿದೆ ಅಲ್ಲಿ ನೀವು ತಿಳಿದುಕೊಳ್ಳಬಹುದಾಗಿದೆ.