ಮೇ 31ರೊಳಗೆ ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ ಲಿಂಕ್ ಆಗದಿದ್ದರೆ ಎರಡು ಪಟ್ಟು TDS ಕಡಿತ…! ಇಲ್ಲಿದೆ ಸಂಪೂರ್ಣ ಮಾಹಿತಿ…
ನಮಸ್ಕಾರ ಬಂಧುಗಳೇ ಆದಾಯ ತೆರಿಗೆ ಇಲಾಖೆಯು ಮೇ 31ರ ಒಳಗೆ ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ ಲಿಂಕ್ ಮಾಡದಿದ್ದರೆ ಸಣ್ಣ ಪ್ರಮಾಣದ TDS ಕಡಿತಕ್ಕೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ತಿಳಿಸಿತ್ತು. ಆದರೆ ಆದಾಯ ತೆರಿಗೆ ನಿಯಮಗಳ ಪ್ರಕಾರ ಪ್ಯಾನ್ ಕಾರ್ಡ್ ಗೆ ಬಯೋಮೆಟ್ರಿಕ್ ಆಧಾರ್ ನೊಂದಿಗೆ ಲಿಂಕ್ ಮಾಡದಿದ್ದರೆ TDS ಅನ್ನು ಅನ್ವಯಿಸುವ ದರಕ್ಕಿಂತ ಎರಡು ಪಟ್ಟು ಕಡಿತಗೊಳಿಸಬೇಕಾಗುತ್ತದೆ ಇಂದು ಆದಾಯ ತೆರಿಗೆ ಇಲಾಖೆಯ ಹೇಳಿದೆ.
ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ ಲಿಂಕ್
ಭಾರತದ ಪ್ರತಿಯೊಬ್ಬ ವ್ಯಕ್ತಿಯು ಆಧಾರ್ ಕಾರ್ಡ್ ಅನ್ನು ಹೊಂದಿರುತ್ತಾರೆ, ಅದಲ್ಲದೆ ಕೆಲವು ವ್ಯವಹಾರಗಳಿಗೆ 18 ವರ್ಷ ಮೇಲ್ಪಟ್ಟ ಅಭ್ಯರ್ಥಿಗಳು ಪ್ಯಾನ್ ಕಾರ್ಡ್ ಸಹ ಹೊಂದಿರುತ್ತಾರೆ. ವ್ಯವಹಾರಗಳಿಗೆ ಪಾನ್ ಕಾರ್ಡ್ ಸಹ ಮುಖ್ಯ ದಾಖಲೆಯಾಗಿದೆ. ಬ್ಯಾಂಕ್ ನ ವ್ಯವಹಾರಗಳಿಗೆ ಹೋಗಬೇಕೆಂದರೆ ಕೆಲವೊಂದು ಸಮಯದಲ್ಲಿ ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಬೇಕಾಗುತ್ತದೆ, ಈ ಎರಡು ದಾಖಲೆಗಳು ಇದ್ದರೆ ಪ್ರತಿಯೊಂದು ಕೆಲಸಕ್ಕೂ ಉಪಯೋಗವಾಗುತ್ತದೆ.
ಇದೇ ರೀತಿ ಸರ್ಕಾರದ ಪ್ರಯೋಜನಗಳು ಇನ್ನೂ ಕೂಡ ಸಿಗಬೇಕೆಂದರೆ ನೀವು ಕಡ್ಡಾಯವಾಗಿ ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ ಲಿಂಕ್ ಮಾಡಬೇಕಾಗುತ್ತದೆ. ಇಲ್ಲವಾದಲ್ಲಿ ವ್ಯವಹಾರ ಮಾಡಲು ಸಾಧ್ಯವಾಗುವುದಿಲ್ಲ ಈ ಕಾರಣದಿಂದ ಯಾರೆಲ್ಲಾ ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ ಲಿಂಕ್ ಮಾಡಿಲ್ಲವೆಂದರೆ ಆದಷ್ಟು ಬೇಗ ಲಿಂಕ್ ಮಾಡಿಕೊಳ್ಳಿ. ಆನ್ಲೈನ್ ಮೂಲಕ ಲಿಂಕ್ ಮಾಡುವ ಎಲ್ಲ ವಿಧಾನವನ್ನು ಈ ಕೆಳಭಾಗದಲ್ಲಿ ತಿಳಿಸಲಾಗಿದೆ.
ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ ಲಿಂಕ್ ಮಾಡದಿದ್ದರೆ TDS ಕಡಿತ
ಹೌದು ಗೆಳೆಯರೇ, ನೀವೇನಾದರೂ ಮೇ 31 ರಂದು ಅಥವಾ ಅದಕ್ಕೂ ಮುನ್ನ ಆಧಾರ್ ಕಾರ್ಡ್ ನೊಂದಿಗೆ ಪಾನ್ ಕಾರ್ಡ್ ಲಿಂಕ್ ಮಾಡಿದರೆ ತೆರಿಗೆಯನ್ನು ಕಡಿತಗೊಳಿಸಲು ಯಾವುದೇ ಹೊಣೆಗಾರಿಕೆ ಇರುವುದಿಲ್ಲ. ಒಂದು ವೇಳೆ ನೀವು ಮೇ 31ರ ನಂತರ ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ ಲಿಂಕ್ ಮಾಡಿದರೆ TDS ಅನ್ನು ಅನ್ವಯಿಸುವ ದರಕ್ಕಿಂತ ಎರಡು ಪಟ್ಟು ಕಡಿತಗೊಳಿಸಲಾಗುತ್ತದೆ.
ಈ ಸಮಸ್ಯೆಯ ಕಾರಣದಿಂದ ಅಲ್ಪ ಕಡಿತಕ್ಕೆ ನೋಟಿಸ್ ಬಂದಿದ್ದರೆ ಮೇ 31ಕ್ಕೂ ಮುನ್ನ ನೀವು ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ ಲಿಂಕ್ ಮಾಡಿಕೊಳ್ಳುವುದು ಸೂಕ್ತ ಎಂದು ಹೇಳಬಹುದು. ನೀವೇನಾದರೂ ಇನ್ನೂ ಕೂಡ ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ ಲಿಂಕ್ ಮಾಡಿಸಿಲ್ಲವೆಂದರೆ ಆದಷ್ಟು ಬೇಗ ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ ಲಿಂಕ್ ಮಾಡಿಸಿಕೊಳ್ಳಿ, ಇಲ್ಲವಾದಲ್ಲಿ ಸಮಸ್ಯೆಗೆ ಒಳಗಾಗಬೇಕಾಗುತ್ತದೆ.
ಒಂದು ವೇಳೆ ನೀವು ಮೇ 31ರ ನಂತರ ಆಧಾರ್ ಕಾರ್ಡ್ ಲಿಂಕ್ ಮಾಡಿಸಿದರೆ ಸರ್ಕಾರದ ಯಾವುದೇ ಪ್ರಯೋಜನದ ಹಣ, ಇನ್ನಿತರ ಯೋಜನೆಗಳ ಪ್ರಯೋಜನ ನಿಮಗೆ ಸಿಗುವುದಿಲ್ಲ. ಈ ಕಾರಣದಿಂದ ಇನ್ನೂ ಸಹ ನೀವು ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ ಲಿಂಕ್ ಮಾಡಿಸಿಲ್ಲವೆಂದರೆ ಆದಷ್ಟು ಬೇಗ ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ ಲಿಂಕ್ ಮಾಡಿಕೊಳ್ಳಿ. ಹಾಗಾದರೆ ಆನ್ಲೈನ್ ಮೂಲಕ ಆಧಾರ್ ಕಾರ್ಡ್ ಲಿಂಕ್ ಮಾಡುವ ವಿಧಾನದ ಬಗ್ಗೆ ತಿಳಿದುಕೊಳ್ಳೋಣ.
ಆನ್ಲೈನ್ ಮೂಲಕ ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ ಲಿಂಕ್ ಮಾಡುವುದು ಹೇಗೆ
ಹೌದು ಗೆಳೆಯರೇ, ನಿಮ್ಮ ಹತ್ತಿರ ಮೊಬೈಲ್ ಇದ್ದರೆ ಸಾಕು, ನೀವು ಸುಲಭವಾಗಿ ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಸುಲಭವಾಗಿ ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು. ನೀವು ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ ಲಿಂಕ್ ಮಾಡಿಸುತ್ತಿರುವೆಂದರೆ ಒಂದು ಸಾವಿರ ದಂಡವನ್ನು ಪಾವತಿಸಬೇಕಾಗುತ್ತದೆ. ಹಾಗಾದರೆ ಆನ್ಲೈನ್ ನಲ್ಲಿ ಆಧಾರ್ ಕಾರ್ಡ್ ಲಿಂಕ್ ಮಾಡುವ ವಿಧಾನದ ಬಗ್ಗೆ ಕೇಳಬಾಗದಲ್ಲಿ ಹಂತ ಹಂತವಾಗಿ ತಿಳಿಸಲಾಗಿದೆ.
- ಮೊದಲು ನೀವು ಆದಾಯ ತೆರಿಗೆ ಇಲಾಖೆ ಅಧಿಕೃತ https://www.incometax.gov.in/iec/foportal/ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
- ನಂತರ ನಿಮಗೆ ಹೋಂ ಪೇಜ್ ಓಪನ್ ಆಗುತ್ತದೆ ಅಲ್ಲಿ ಕ್ವಿಕ್ ಲಿಂಕ್ ಇನ್ ದ ಆಪ್ಷನ್ ನಲ್ಲಿ ಲಿಂಕ್ ಆಧಾರ್ ಮೇಲೆ ಕ್ಲಿಕ್ ಮಾಡಿ.
- ನಂತರ ನೀವು ಪಾನ್ ಕಾರ್ಡ್ ನ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ ವ್ಯಾಲಿಡೇಟ್ ಎಂಬ ಬಟನ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
- ಕ್ಲಿಕ್ ಮಾಡಿದ ನಂತರ ಇ-ಪೇ ಟ್ಯಾಕ್ಸ್ ಮೂಲಕ ಪಾವತಿಸಲು ಮುಂದುವರಿಸಿ ಎಂಬ ಬಟನ್ ಮೇಲೆ ನೀವು ಕ್ಲಿಕ್ ಮಾಡಬೇಕಾಗುತ್ತದೆ.
- ಈಗ ನೀವು ನಿಮ್ಮ ಪ್ಯಾನ್ ಕಾರ್ಡ್, ಮೊಬೈಲ್ ನಂಬರ್ ನಮೂಂದಿಸ ಬೇಕಾಗುತ್ತದೆ. ನಮೂದಿಸಿದ ನಂತರ ಮುಂದುವರಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ.
- ಈಗ ನೀವು ಚಲನ್ ಮೊತ್ತವನ್ನು ಪಾವತಿಸಿ ಅಂದರೆ ನೀವು ಇಲ್ಲಿ ದಂಡವನ್ನು ಪಾವತಿಸಬೇಕಾಗುತ್ತದೆ.. ಪಾವತಿಸಿದ ನಂತರ ಮುಂದುವರಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ.
- ಮತ್ತೆ ನೀವು ಕ್ಲಿಕ್ ಲಿಂಕ್ ಎಂಬ ಆಪ್ಷನ್ ನಲ್ಲಿ ಲಿಂಕ್ ಆಧಾರ್ ಮೇಲೆ ಕ್ಲಿಕ್ ಮಾಡಿ.
- ನಂತರ ನೀವು ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ ವ್ಯಾಲಿಡೇಟ್ ಮೇಲೆ ಕ್ಲಿಕ್ ಮಾಡಿ.
- ಈಗ ನೀವು ನಿಮ್ಮ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ ಮತ್ತು ಒಟಿಪಿಯನ್ನು ನಮೂದಿಸಿ ವ್ಯಾಲಿಡೇಟ್ ಮೇಲೆ ಕ್ಲಿಕ್ ಮಾಡಿ.
- ಈಗ ಆಧಾರ್-ಪ್ಯಾನ್ ಲಿಂಕ್ ಮಾಡುವ ವಿನಂತಿಯನ್ನು ಮಾನ್ಯತೆಗಾಗಿ UIDAI ಗೆ ಕಳುಹಿಸಲಾಗುತ್ತದೆ.
ಈ ರೀತಿ ನೀವು ಮಾಡಿದರೆ ಸಾಕು ನೀವು ಸುಲಭವಾಗಿ ಆನ್ಲೈನ್ ಮೂಲಕ ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ ಲಿಂಕ್ ಮಾಡಿಕೊಳ್ಳಬಹುದು.
ನಿಮಗೇನಾದರೂ ಆನ್ಲೈನ್ ಮೂಲಕ ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ ಲಿಂಕ್ ಮಾಡಲು ಕಷ್ಟಕರವಾದರೆ ನಿಮ್ಮ ಊರಿನ ಹತ್ತಿರವಿರುವ ಪ್ಯಾನ್ ಕಾರ್ಡ್ ಕೇಂದ್ರಕ್ಕೆ ಅಥವಾ ಕೆಲವು ಸೇವಾ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ಅಲ್ಲಿ ಕೇಳುವ ಕೆಲವು ದಾಖಲೆಗಳನ್ನು ನೀಡಿ ಮತ್ತು ಫಾರಂ ಅನ್ನು ಭರ್ತಿ ಮಾಡಿ, ಸುಲಭವಾಗಿ ನೀವು ಆಫ್ಲೈನ್ ಮೂಲಕ ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ ಲಿಂಕ್ ಮಾಡಿಕೊಳ್ಳಬಹುದು. ನೀವು ಆನ್ಲೈನ್ ಅಥವಾ ಆಫ್ಲೈನ್ ಆದರೂ ಸಹ ನೀವು ಆಧಾರ್ ಕಾರ್ಡ್ ಲಿಂಕ್ ಮಾಡಿಸಲು ಒಂದು ಸಾವಿರ ದಂಡವನ್ನು ವಿಧಿಸಬೇಕಾಗುತ್ತದೆ.
ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ ಲಿಂಕ್ ಸ್ಥಿತಿಯನ್ನು ಪರಿಶೀಲಿಸುವ ವಿಧಾನ
ನೀವು ಆನ್ಲೈನ್ ಅಥವಾ ಆಫ್ಲೈನ್ ಮೂಲಕ ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ ಲಿಂಕ್ ಮಾಡಿಸಿದರೆ, ಆ ಸ್ಥಿತಿಯನ್ನು ನೀವು ಸುಲಭವಾಗಿ ಮೊಬೈಲ್ ಅನ್ನು ಬಳಸಿಕೊಂಡು ಆದಾಯ ತೆರಿಗೆ ಅಧಿಕೃತ ವೆಬ್ಸೈಟ್ ನಲ್ಲಿ ಪರಿಶೀಲನೆ ಮಾಡಿಕೊಳ್ಳಬಹುದು.
- ಮೊದಲು ನೀವು ಆದಾಯ ತೆರಿಗೆ ಅಧಿಕೃತ https://www.incometax.gov.in/iec/foportal/ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
- ಈಗ ನಿಮಗೆ ಹೋಂ ಪೇಜ್ ಓಪನ್ ಆಗುತ್ತದೆ, ಅಲ್ಲಿ ನೀವು ಕ್ವಿಕ್ ಲಿಂಕ್ ಎಂಬ ಆಪ್ಷನ್ ನಲ್ಲಿ ಲಿಂಕ್ ಆಧಾರ್ ಸ್ಥಿತಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ.
- ಈಗ ನೀವು ನಿಮ್ಮ ಪ್ಯಾನ್ ಕಾರ್ಡ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ.
- ನಮೂದಿಸಿದ ನಂತರ ಸ್ಟೇಟಸ್ ಬಟನ್ ಮೇಲೆ ಕ್ಲಿಕ್ ಮಾಡಿ.
ಈ ರೀತಿ ನೀವು ಮಾಡಿದರೆ ಸಾಕು ನಿಮಗೆ ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ ಲಿಂಕ್ ಆಗಿದೆಯೋ ಇಲ್ಲವೋ ಎಂಬ ಸ್ಥಿತಿಯನ್ನು ನೋಡಬಹುದಾಗಿದೆ. ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ ಲಿಂಕ್ ಮಾಡಿಸಿದ ದಿನದಿಂದ ಏಳು ದಿನದ ನಂತರ ಸ್ಥಿತಿಯನ್ನು ಚೆಕ್ ಮಾಡಿಕೊಳ್ಳಿ.
ಲಿಂಕ್ ಮಾಡುವ ಮೊದಲು ಇದನ್ನು ಗಮನಿಸಿ
ಹೌದು ಗೆಳೆಯರೇ ನೀವೇನಾದರೂ ಆನ್ಲೈನ್ ಅಥವಾ ಆಫ್ಲೈನ್ ಮೂಲಕ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡುವ ಮೊದಲು ನೀವು ಸರಿಯಾದ ದಾಖಲೆಯನ್ನು ಒದಗಿಸಿ ನಂತರ ಲಿಂಕ್ ಮಾಡಿಕೊಳ್ಳಿ. ಇಲ್ಲವಾದಲ್ಲಿ ಕೆಲವು ಸಮಸ್ಯೆಗಳಿಗೆ ಒಳಗಾಗ ಬೇಕಾಗುತ್ತದೆ. ಇನ್ನು ಕೂಡ ನೀವು ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ ಲಿಂಕ್ ಮಾಡಿದ್ದಿಲ್ಲವೆಂದರೆ ಆದಷ್ಟು ಬೇಗ ಮೇ 31ರ ಒಳಗೆ ಲಿಂಕ್ ಮಾಡಿಕೊಳ್ಳಿ. ಇಲ್ಲವಾದಲ್ಲಿ ಆದಾಯ ತೆರಿಗೆ ನಿಯಮಗಳ ಪ್ರಕಾರ ಫ್ಯಾನ್ ಬಯೋಮೆಟ್ರಿಕ್ ಆಧಾರ್ ನೊಂದಿಗೆ ಲಿಂಕ್ ಮಾಡದಿದ್ದರೆ TDS ಅನ್ನು ಅನ್ವಯಿಸುವ ದರಕ್ಕಿಂತ ಎರಡು ಪಟ್ಟು ಕಡಿತಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಒಂದು ವೇಳೆ ನೀವು ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ ಲಿಂಕ್ ಮಾಡಿಸಿಲ್ಲವೆಂದರೆ ಸರ್ಕಾರದಿಂದ ಸಿಗುವ ಯೋಜನೆ ಮತ್ತು ಕೆಲವು ಪ್ರಯೋಜನಗಳನ್ನು ಸಿಗುವುದಿಲ್ಲ. ಈ ಕಾರಣದಿಂದ ಯಾರೆಲ್ಲಾ ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ ಲಿಂಕ್ ಮಾಡಿಸಿಲ್ಲವೆಂದರೆ ಆದಷ್ಟು ಬೇಗ ಲಿಂಕ್ ಮಾಡಿಸಿಕೊಳ್ಳಿ ಇಲ್ಲವಾದಲ್ಲಿ ಸಮಸ್ಯೆಗೆ ಒಳಗಾಗಬೇಕಾಗುತ್ತದೆ. ನಾನು ನಿಮಗೆ ತಿಳಿಸುವುದು ಆನ್ಲೈನ್ ಮೂಲಕ ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ ಲಿಂಕ್ ಮಾಡಿಸುವುದು ಕಷ್ಟಕರವಾಗಿರುವುದರಿಂದ ನೀವು ಆಫ್ಲೈನ್ ಮೂಲಕ ಸುಲಭವಾಗಿ ನೀವು ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ ಲಿಂಕ್ ಮಾಡಿಸಿಕೊಳ್ಳಬಹುದಾಗಿದೆ.