Aadhar Card: ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಕೊಳ್ಳಲು ಜೂನ್ 14 ಕೊನೆಯ ದಿನಾಂಕ, ಇಲ್ಲವಾದಲ್ಲಿ ಶುಲ್ಕ ವಿಧಿಸಲಾಗುತ್ತದೆ..!
ನಮಸ್ಕಾರ ಬಂಧುಗಳೇ ರಾಜ್ಯ ಸರ್ಕಾರವು ಉಚಿತವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಕೊಳ್ಳಲು ಜೂನ್ 14 ರ ವರೆಗೆ ವಿಸ್ತರಿಸಲಾಗಿದೆ. ನಿಮ್ಮ ಆಧಾರ್ ಕಾರ್ಡ್ ಹತ್ತು ವರ್ಷ ಹಳೆಯದಾಗಿದ್ದರೆ ಯಾವುದೇ ಉಪಯೋಗಕ್ಕೆ ಬರುವುದಿಲ್ಲ. ಈ ಕಾರಣದಿಂದ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಕೊಳ್ಳಬೇಕಾಗಿದೆ. ಮೊದಲು ಸರ್ಕಾರವು ಮಾರ್ಚ್ ವರೆಗೆ ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ನಿಗದಿಪಡಿಸಲಾಗಿತ್ತು. ನಂತರ ಉಚಿತವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಕೊಳ್ಳಲು ಜೂನ್ 14ರ ವರೆಗೆ ವಿಸ್ತರಣೆ ಮಾಡಲಾಗಿದೆ. ಹಾಗಾದ್ರೆ ಆನ್ಲೈನ್ ಮೂಲಕ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಕೊಳ್ಳುವುದು ಹೇಗೆ ಎಂಬ ಎಲ್ಲ ಮಾಹಿತಿಯನ್ನು ಈ ಲೇಖನದಲ್ಲಿ ಹಂತ ಹಂತವಾಗಿ ತಿಳಿಸಲಾಗಿದೆ.
ಆಧಾರ್ ಕಾರ್ಡ್ ಅಪ್ಡೇಟ್
ಹೌದು ಗೆಳೆಯರೇ, ಸರ್ಕಾರದಿಂದ ಸಿಗುವ ಯಾವುದೇ ಯೋಜನೆಯನ್ನು ಪಡೆದುಕೊಳ್ಳಬೇಕೆಂದರೆ ಪ್ರಮುಖವಾಗಿ ಬೇಕಾಗಿರುವುದು ಆಧಾರ್ ಕಾರ್ಡ್. ಪ್ರತಿಯೊಂದು ಕೆಲಸಕ್ಕೂ, ಪ್ರತಿಯೊಂದು ಯೋಜನೆಗೂ ಪ್ರಮುಖವಾಗಿ ಆಧಾರ್ ಕಾರ್ಡ್ ಪ್ರಮುಖ ದಾಖಲೆಯಾಗಿದೆ. ನಿಮ್ಮ ಆಧಾರ್ ಕಾರ್ಡ್ ನಲ್ಲಿ ದಾಖಲೆಗಳ ಸಮಸ್ಯೆ ಇದ್ದರೆ ಅದನ್ನು ಸುಲಭವಾಗಿ ಅಪ್ಡೇಟ್ ಮಾಡಿಕೊಳ್ಳಬಹುದು.
ಆದರೆ ಸರ್ಕಾರವು ನೀಡಿರುವುದು ನಿಮ್ಮ ಆಧಾರ್ ಕಾರ್ಡ್ 10 ವರ್ಷ ಪೂರ್ಣಗೊಂಡಿದ್ದು ಅಂತವರು ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಕೊಳ್ಳಬೇಕು ಎಂದು ಸರ್ಕಾರವು ತಿಳಿದಿದೆ. ನೀವು ಉಚಿತವಾಗಿ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಕೊಳ್ಳಲು ಜೂನ್ 14 ಕೊನೆಯ ದಿನಾಂಕವಾಗಿದೆ. ನೀವೇನಾದರೂ ನಿಮ್ಮ ಆಧಾರ್ ಕಾರ್ಡ್ 10 ವರ್ಷ ಹಳೆಯದಾಗಿದ್ದರೆ ಆದಷ್ಟು ಬೇಗ ಅಪ್ಡೇಟ್ ಮಾಡಿಕೊಳ್ಳಿ. ನೀವು ಸುಲಭವಾಗಿ ಆನ್ಲೈನ್ ಮೂಲಕ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಕೊಳ್ಳಬಹುದು.
ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ಶುಲ್ಕವನ್ನು ನೀಡಬೇಕಾ?
ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಕೊಳ್ಳಲು ನೀವು ಯಾವುದೇ ಶುಲ್ಕವನ್ನು ನೀಡಬೇಕಾಗಿಲ್ಲ, ಸುಲಭವಾಗಿ ಅಪ್ಡೇಟ್ ಮಾಡಿಕೊಳ್ಳಬಹುದು. ಒಂದು ವೇಳೆ ಜೂನ್ 14ರ ನಂತರ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಕೊಂಡರೆ ನಿಮಗೆ ಶುಲ್ಕವನ್ನು ವಿಧಿಸಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ. ಹಾಗಾದರೆ ಆನ್ಲೈನ್ ಮೂಲಕ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಕೊಳ್ಳುವುದು ಹೇಗೆ ಎಂಬ ಮಾಹಿತಿಯನ್ನು ಈ ಕೆಳಭಾಗದಲ್ಲಿ ತಿಳಿಸಲಾಗಿದೆ.
ಆನ್ಲೈನ್ ಮೂಲಕ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಕೊಳ್ಳುವ ವಿಧಾನ
ಹೌದು ಗೆಳೆಯರೇ, ಸರ್ಕಾರವು ಈಗಾಗಲೇ ಹತ್ತು ವರ್ಷದ ಹಳೆಯ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಕೊಳ್ಳಲು ತಿಳಿಸಿದೆ. ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಕೊಳ್ಳಲು ಜೂನ್ 14 ಕೊನೆಯ ದಿನಾಂಕವಾಗಿದೆ. ಒಂದು ವೇಳೆ ಜೂನ್ 14ರ ನಂತರ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಕೊಂಡರೆ ಶುಲ್ಕವನ್ನು ವಿಧಿಸಲಾಗುತ್ತದೆ ಎಂದು ಸರ್ಕಾರವು ಈಗಾಗಲೇ ತಿಳಿಸಿದೆ. ನಿಮ್ಮ ಹತ್ತಿರ ಮೊಬೈಲ್, ಲ್ಯಾಪ್ಟಾಪ್ ಅಥವಾ ಕಂಪ್ಯೂಟರ್ ಇದ್ದರೆ ಸಾಕು ನೀವು ಸುಲಭವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಕೊಳ್ಳಬಹುದು.
- ಮೊದಲು ನೀವು ಆಧಾರ್ ಕಾರ್ಡ್ ನ ಅಧಿಕೃತ https://myaadhaar.uidai.gov.in/ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
- ಇಲ್ಲಿ ನಿಮ್ಮ ಆಧಾರ್ ಸಂಖ್ಯೆ ಮತ್ತು ಓಟಿಪಿಯನ್ನು ನಮೂದಿಸಿ ಲಾಗಿನ್ ಮಾಡಿಕೊಳ್ಳಿ.
- ನಂತರ ನೀವು ಡಾಕ್ಯುಮೆಂಟ್ ಅಪ್ಡೇಟ್ ಮೇಲೆ ಕ್ಲಿಕ್ ಮಾಡಿ. ವೆರಿಫೈ ಆಯ್ಕೆ ಮೇಲೆ ಕ್ಲಿಕ್ ಮಾಡಬೇ..
- ಅಲ್ಲಿ ನೀವು ನಿಮ್ಮ ಡ್ರಾಪ್ಡೌನ್ ನಲ್ಲಿ ಗುರುತಿನ ಪುರಾವೆ ಮತ್ತು ವಿಳಾಸದ ಪುರಾವೆಯನ್ನು ಅನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕಾಗುತ್ತದೆ
- ಈ ಎಲ್ಲ ಮಾಹಿತಿಯನ್ನು ಸಲ್ಲಿಸಿದ ನಂತರ ಈಗ ಸಲ್ಲಿಸಿ ಬಟನ್ ಕ್ಲಿಕ್ ಮಾಡಿ. ನಂತರ ನೀವು .
- ಈ ವಿನಂತಿಯ ಸಂಖ್ಯೆಯ ಮೂಲಕ ಆಧಾರ್ ಕಾರ್ಡ್ ಸ್ಟೇಟಸ್ ಅನ್ನು ಸಹ ಪರಿಶೀಲಿಸಬಹುದು.
- ಈ ಕೆಲಸ ಮಾಡಿದರೆ ಸಾಕು ಕೆಲವೇ ದಿನಗಳಲ್ಲಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಲಾಗುತ್ತದೆ.
ಈ ಮೇಲೆ ತಿಳಿಸಿಕೊಟ್ಟಿರುವ ರೀತಿಯಲ್ಲಿ ನೀವು ಸುಲಭವಾಗಿ ಆನ್ಲೈನ್ ಮೂಲಕ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಕೊಳ್ಳಬಹುದಾಗಿದೆ. ಒಂದು ವೇಳೆ ನಿಮಗೆ ಆನ್ಲೈನ್ ಮೂಲಕ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಕೊಳ್ಳಲು ಕಷ್ಟಕರವಾದರೆ ನಿಮ್ಮ ಊರಿನ ಹತ್ತಿರವಿರುವ ಸೇವಾ ಕೇಂದ್ರಗಳು ಅಥವಾ ಕೆಲವು ಸೆಂಟರ್ ಗಳಿಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಸುಲಭವಾಗಿ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಕೊಳ್ಳಬಹುದಾಗಿದೆ.
ಸುಲಭವಾಗಿ ಆನ್ಲೈನ್ ಮೂಲಕ ಆಧಾರ್ ಕಾರ್ಡ್ ಗೆ ಮೊಬೈಲ್ ನಂಬರ್ ಲಿಂಕ್ ಮಾಡಿಕೊಳ್ಳಿ
ಹೌದು ಗೆಳೆಯರೇ, ನಿಮ್ಮ ಆಧಾರ್ ಕಾರ್ಡ್ ಗೆ ಸರಿಯಾದ ಮೊಬೈಲ್ ಸಂಖ್ಯೆ ಲಿಂಕ್ ಮಾಡುವುದು ಪ್ರಮುಖವಾಗಿದೆ. ಏಕೆಂದರೆ ಯಾವುದೇ ಸರ್ಕಾರದ ಯೋಜನೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಧಾರ್ ಕಾರ್ಡ್ ಗೆ ಲಿಂಕ್ ಆಗಿರೋ ಮೊಬೈಲ್ ಸಂಖ್ಯೆಯ ಓಟಿಪಿ ಪ್ರಮುಖವಾಗಿರುತ್ತದೆ. ಈ ಕಾರಣದಿಂದ ಸರಿಯಾದ ಮೊಬೈಲ್ ಸಂಖ್ಯೆಯನ್ನು ಆಧಾರ್ ಕಾರ್ಡ್ ಗೆ ಲಿಂಕ್ ಮಾಡಿಕೊಳ್ಳಿ.
ಒಂದು ವೇಳೆ ನಿಮ್ಮ ಆಧಾರ್ ಕಾರ್ಡ್ ಗೆ ಹಳೆಯ ಮೊಬೈಲ್ ಸಂಖ್ಯೆಯನ್ನು ತೆಗೆದು ಹೊಸ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಿಕೊಳ್ಳಬೇಕೆಂದರೆ ನೀವು ಸುಲಭವಾಗಿ ಆನ್ಲೈನ್ ಮೂಲಕ ಲಿಂಕ್ ಮಾಡಿಕೊಳ್ಳಬಹುದಾಗಿದೆ. ಆನ್ಲೈನ್ ಮೂಲಕ ಲಿಂಕ್ ಮಾಡಿಕೊಳ್ಳಲು ರೂ.50 ಶುಲ್ಕವನ್ನು ವಿಧಿಸಬೇಕಾಗುತ್ತದೆ. ಆಧಾರ್ ಕಾರ್ಡ್ ಗೆ ಮೊಬೈಲ್ ಸಂಖ್ಯೆ ಲಿಂಕ್ ಮಾಡೋದು ಕಡ್ಡಾಯವೇನಲ್ಲ. ಮೊಬೈಲ್ ನಂಬರ್ ಲಿಂಕ್ ಮಾಡಿದ್ರೆ ಉಪಯೋಗವಾಗುತ್ತದೆ. ಹಾಗಾದರೆ ಆನ್ಲೈನ್ ಮೂಲಕ ಆಧಾರ್ ಕಾರ್ಡ್ ಗೆ ಮೊಬೈಲ್ ಸಂಖ್ಯೆ ಯನ್ನು ಲಿಂಕ್ ಮಾಡಿಕೊಳ್ಳುವ ವಿಧಾನದ ಬಗ್ಗೆ ಈ ಕೆಳಭಾಗದಲ್ಲಿ ತಿಳಿಸಲಾಗಿದೆ.
ಆನ್ಲೈನ್ ಮೂಲಕ ಆಧಾರ್ ಕಾರ್ಡ್ ಗೆ ಮೊಬೈಲ್ ನಂಬರ್ ಲಿಂಕ್ ಮಾಡುವುದು ಹೇಗೆ
ಹೌದು ಗೆಳೆಯರೇ, ನಿಮ್ಮ ಹತ್ತಿರ ಮೊಬೈಲ್ ಇದ್ದರೆ ಸಾಕು ನೀವು ಸುಲಭವಾಗಿ ಆಧಾರ್ ಕಾರ್ಡ್ ಗೆ ಮೊಬೈಲ್ ನಂಬರ್ ಅನ್ನು ಲಿಂಕ್ ಮಾಡಿಕೊಳ್ಳಬಹುದಾಗಿದೆ. ನೀವು ಆಧಾರ್ ಕೇಂದ್ರಕ್ಕೆ ಹೋಗದೆ ಆಧಾರ್ ಸರ್ವೀಸ್ ಪಡೆಯುವ ದಾರಿ ಒಂದು ಇದೆ ಅದು ಏನು ಎಂದರೆ ಇಂಡಿಯಾ ಪೋಸ್ಟ್ ಸರ್ವಿಸ್ ವೆಬ್ಸೈಟ್ ಮೂಲಕ ನೀವು ಸುಲಭವಾಗಿ ಆಧಾರ್ ಕಾರ್ಡ್ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಬಹುದಾಗಿದೆ.
- ಮೊದಲು ನೀವು ಆಧಾರ್ ಕಾರ್ಡ್ ಗೆ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಲು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕಾಗುತ್ತದೆ.
- ಅಲ್ಲಿ ನಿಮ್ಮ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ ಸೇರಿದಂತೆ ಕೆಲವು ವಿವರಗಳನ್ನು ನಮೂದಿಸಬೇಕು.
- ಡ್ರಾಪ್-ಡೌನ್ ಮೆನುವಿನಿಂದ ಸೇವೆಯಾಗಿ PPB- ಆಧಾರ್ ಸೇವೆ ಆಯ್ಕೆ ಮಾಡಿಕೊಳ್ಳಿ.
- ನಂತರ ಆಧಾರ್ ಲಿಂಕ್ ಮಾಡಲು/ಅಪ್ಡೇಟ್ ಮಾಡಲು UIDAI-ಮೊಬೈಲ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
- ನೀವು ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡಿದ ನಂತರ, ಓಟಿಪಿ ವಿನಂತಿ ಬಟನ್ ಮೇಲೆ ಕ್ಲಿಕ್ ಮಾಡಿ.
- ಮುಂದಿನ ಪೇಜ್ ನಲ್ಲಿ, ನಿಮ್ಮ ಮೊಬೈಲ್ ಸಂಖ್ಯೆಗೆ OTP ಬರುತ್ತದೆ ನಂತರ ನೀವು OTP ಅನ್ನು ನಮೂದಿಸಿ.
- ನಂತರ ಸೇವಾ ವಿನಂತಿಯನ್ನು ದೃಢೀಕರಿಸಿ ಮೇಲೆ ಕ್ಲಿಕ್ ಮಾಡಿ. ನಿಮ್ಮ ಅಪ್ಲಿಕೇಶನ್ನ ಸ್ಥಿತಿಯನ್ನು ಟ್ರ್ಯಾಕ್ ಮಾಡಲು ನಿಮಗೆ ಉಲ್ಲೇಖ ಸಂಖ್ಯೆಯನ್ನು ನೀವು ಪಡೆದುಕೊಳ್ಳುತ್ತಿರ.
- ಪೂರ್ಣವಾಗಿ ಸಲ್ಲಿಸಿದ ನಂತರ, ವಿನಂತಿಯನ್ನು ನಿಮ್ಮ ಊರಿನ ಬಳಿಯಿರುವ ಅಂಚೆ ಕಛೇರಿಗೆ ಕಳುಹಿಸಲಾಗುತ್ತದೆ.
- ಆಧಾರ್ ಅಪ್ಡೇಟ್/ಲಿಂಕ್ ಮಾಡುವ ಕೆಲಸದೊಂದಿಗೆ ಕಾರ್ಯ ನಿರ್ವಹಿಸುವ ಅಧಿಕಾರಿಯಿಂದ ಪರಿಶೀಲನೆ ಪ್ರಕ್ರಿಯೆಯನ್ನು ಮಾಡಲಾಗುತ್ತದೆ.
- ಅಧಿಕಾರಿಯು ನಿಮ್ಮ ವಿಳಾಸಕ್ಕೆ ಭೇಟಿ ನೀಡುತ್ತಾರೆ ಮತ್ತು ಮೊಬೈಲ್ ಬಯೋಮೆಟ್ರಿಕ್ ಸಾಧನವನ್ನು (ಐರಿಸ್, ಫಿಂಗರ್ಪ್ರಿಂಟ್ಗಳು ಮತ್ತು ಛಾಯಾಚಿತ್ರಗಳಿಗಾಗಿ) ಬಳಸಿಕೊಂಡು ಪರಿಶೀಲನೆ ಪ್ರಕ್ರಿಯೆಯನ್ನು ಕೈಗೊಳ್ಳುತ್ತಾರೆ.
- ಅವನು/ಅವಳು ನವೀಕರಣ/ಲಿಂಕ್ ಮಾಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತಾರೆ ಮತ್ತು ಸೇವೆಗಾಗಿ ನಿಮಗೆ ಶುಲ್ಕವನ್ನು ವಿಧಿಸುತ್ತಾರೆ.
- ಈ ರೀತಿ ಸುಲಭವಾಗಿ ಆಧಾರ್ ಕಾರ್ಡ್ ಗೆ ಮೊಬೈಲ್ ನಂಬರ್ ಅನ್ನು ಬದಲಾಯಿಸಬಹುದು.
ಈ ರೀತಿ ನೀವು ಸುಲಭವಾಗಿ ಆನ್ಲೈನ್ ಮೂಲಕ ಆಧಾರ್ ಕಾರ್ಡ್ ಗೆ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಿಕೊಳ್ಳಬಹುದಾಗಿದೆ. ಒಂದು ವೇಳೆ ನಿಮಗೆ ಆನ್ಲೈನ್ ಮೂಲಕ ಆಧಾರ್ ಕಾರ್ಡ್ ಗೆ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಲು ಕಷ್ಟಕರವಾದರೆ ನಿಮ್ಮ ಊರಿನ ಹತ್ತಿರ ಇರುವ ಆಧಾರ್ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಸುಲಭವಾಗಿ ಆಧಾರ್ ಕಾರ್ಡ್ ಗೆ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಿಕೊಳ್ಳಬಹುದಾಗಿದೆ.