DBT Status Check: ಈ ತಿಂಗಳ ಅನ್ನಭಾಗ್ಯ ಯೋಜನೆಯ ಹಣ ಜಮೆಯಾಗಿದೆ..! ನಿಮ್ಮ DBT ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಿ…!
ನಮಸ್ಕಾರ ಬಂಧುಗಳೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಐದು ಗ್ಯಾರಂಟಿಗಳಾದ ಒಂದು ಗ್ಯಾರಂಟಿ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು ಮನೆಯ ಯಜಮಾನಿಗೆ ಎರಡು ಸಾವಿರ ಹಣವನ್ನು ಅವರ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತಿದೆ. ಹಾಗೆಯೇ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಅಕ್ಕಿಯ ಬದಲು ಹಣವನ್ನು ಕಾಂಗ್ರೆಸ್ ಸರ್ಕಾರ ನೀಡುತ್ತಿದೆ. ಪ್ರತಿ ತಿಂಗಳು ಅನ್ನಭಾಗ್ಯ ಯೋಜನೆಯ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ. ಹೋದ ತಿಂಗಳು ಅಂದರೆ ಮಾರ್ಚ್ ತಿಂಗಳಲ್ಲಿ ಅನ್ನಭಾಗ್ಯ ಯೋಜನೆಯ ಹಣ ಫಲಾನುಭವಿಗಳ ಎಲ್ಲಾ ಬ್ಯಾಂಕ್ ಖಾತೆಗೆ ಜಮವಾಗಿದೆ. ಅದೇ ರೀತಿ ಈ ತಿಂಗಳಿನ ಅನ್ನಭಾಗ್ಯ ಯೋಜನೆಯ ಹಣವನ್ನು ವರ್ಗಾವಣೆ ಮಾಡಲಾಗಿದೆ. ಹಾಗಾದರೆ ನಿಮ್ಮ ಅನ್ನಭಾಗ್ಯ ಯೋಜನೆಯ DBT ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳುವ ಬಗ್ಗೆ ತಿಳಿದುಕೊಳ್ಳೋಣ.
ಅನ್ನಭಾಗ್ಯ ಯೋಜನೆ
ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆ ಅಡಿಯಲ್ಲಿ 10 ಕೆಜಿ ಅಕ್ಕಿಯನ್ನು ನೀಡುವುದಾಗಿ ಹೇಳಿತ್ತು. ಅದರಲ್ಲಿ 5 ಕೆಜಿ ನೀಡುತ್ತಿದ್ದಾರೆ ಮತ್ತು ಹೆಚ್ಚುವರಿ 5 ಕೆಜಿ ಅಕ್ಕಿ ಇಲ್ಲವಾಗದ ಕಾರಣ ಅಕ್ಕಿಯ ಬದಲು ಪ್ರತಿ ಕೆಜಿಗೆ 34 ರೂಪಾಯಿಯಂತೆ ಪ್ರತಿ ಸದಸ್ಯನಿಗೆ 170 ರೂಪಾಯಿಗಳನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ. ಕಳೆದ ತಿಂಗಳು ಅಂದರೆ ಮಾರ್ಚ್ ತಿಂಗಳಿಂದನು ಸಹ ಅನ್ನಭಾಗ್ಯ ಯೋಜನೆಯ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ. ಅದೇ ರೀತಿ ಏಪ್ರಿಲ್ ತಿಂಗಳಿನ ಅನ್ನಭಾಗ್ಯ ಯೋಜನೆಯ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗಿದೆ. ಹಾಗಾದರೆ ಅನ್ನಭಾಗ್ಯ ಯೋಜನೆಯ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳುವ ವಿಧಾನದ ಬಗ್ಗೆ ತಿಳಿದುಕೊಳ್ಳೋಣ.
ಅನ್ನಭಾಗ್ಯ ಯೋಜನೆಯ ಹಣದ [DBT] ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳುವ ವಿಧಾನ
ಹೌದು ಗೆಳೆಯರೇ, ನಿಮ್ಮ ಹತ್ತಿರ ಮೊಬೈಲ್ ಇದ್ದರೆ ಸಾಕು, ನೀವು ಸುಲಭವಾಗಿ ಅನ್ನಭಾಗ್ಯ ಯೋಜನೆಯ ಸ್ಟೇಟಸ್ ಅನ್ನು ಸುಲಭವಾಗಿ ಚೆಕ್ ಮಾಡಿಕೊಳ್ಳಬಹುದು. ಸರ್ಕಾರದ ಅಧಿಕೃತ ಅಪ್ ಅನ್ನು ಡೌನ್ಲೋಡ್ ಮಾಡಿಕೊಳ್ಳುವ ಮೂಲಕ ನೀವು ಅಲ್ಲಿ ಸುಲಭವಾಗಿ ಅನ್ನಭಾಗ್ಯ ಯೋಜನೆಯ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಿ.
- ಮೊದಲು ನೀವು ಸರ್ಕಾರದ ಅಧಿಕೃತ ಆಪ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ ಅಂದರೆ ನಿಮ್ಮ ಮೊಬೈಲ್ ನ ಪ್ಲೇ ಸ್ಟೋರ್ ಗೆ ಭೇಟಿ ನೀಡಿ, ಅಲ್ಲಿ ನೀವು DBT karnataka ಎಂಬ ಅಪ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.
- ಆಪ್ ಅನ್ನು ಡೌನ್ಲೋಡ್ ಮಾಡಿಕೊಂಡಿದ್ದ ನಂತರ ಆಪ್ ಅನ್ನು ಓಪನ್ ಮಾಡಿ, ನಿಮ್ಮ ಆಧಾರ್ ಕಾರ್ಡ್ ನಂಬರ್ ಅನ್ನು ಹಾಕಿ ಓಟಿಪಿ [OTP] ಮೇಲೆ ಕ್ಲಿಕ್ ಮಾಡಿ.
- ನಿಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಗೆ ಓಟಿಪಿ [OTP] ಬರುತ್ತದೆ, ಆ ಒಟಿಪಿಯನ್ನು ಎಂಟರ್ ಮಾಡಿ ವೆರಿಫೈ ಓಟಿಪಿ ಬಟನ್ [Verify OTP Button]ಎಂಬ ಆಪ್ಶನ್ ಮೇಲೆ ಕ್ಲಿಕ್ ಮಾಡಿ.
- ನಂತರ ನಿಮಗೆ ಕ್ರಿಯೇಟ್ ಎಮ್ ಪಿನ್ [Create Mpin] ಎಂಬ ಆಪ್ಷನ್ ಕಾಣುತ್ತದೆ, ಅಲ್ಲಿ ನೀವು ನಿಮಗೆ ಬೇಕಾಗುವ ನಾಲ್ಕು ಎಮ್ ಪಿನ್ [Mpin] ಅನ್ನು ಎಂಟರ್ ಮಾಡಿ ಸಬ್ಮಿಟ್ ಬಟನ್ [Submit Button] ಮೇಲೆ ಕ್ಲಿಕ್ ಮಾಡಿ.
- ನಂತರ ನಿಮಗೆ ಹೋಂ ಪೇಜ್ ಓಪನ್ ಆಗುತ್ತದೆ, ಅಲ್ಲಿ ನೀವು ಸೆಲೆಕ್ಟ್ ಬೇನೆಫಿಕೀಯರಿ [Select Beneficiary] ಮೇಲೆ ಕ್ಲಿಕ್ ಮಾಡಿ ನಂತರ ನೀವು ಆಡ್ ಮಾಡಿರೋ ಫಲಾನುಭವಿಯನ್ನು ಆಯ್ಕೆ ಮಾಡಿಕೊಳ್ಳಿ.
- ನಂತರ ಮೊದಲೇ ಕ್ರಿಯೇಟ್ ಮಾಡಿರೋ ಎಮ್ ಪಿನ್ [Mpin] ಅನ್ನು ಎಂಟರ್ ಮಾಡಿ ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ.
- ಈಗ ನಿಮಗೆ ಪೇಮೆಂಟ್ ಸ್ಟೇಟಸ್ ಅನ್ನು ಆಯ್ಕೆ ಮಾಡಿಕೊಳ್ಳಿ ನಂತರ ನೀವು ಅನ್ನಭಾಗ್ಯ ಡಿಬಿಟಿ ಸ್ಟೇಟಸ್ ಚೆಕ್ [DBT Status Check] ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
- ಕ್ಲಿಕ್ ಮಾಡಿದ ನಂತರ ಅನ್ನಭಾಗ್ಯ ಯೋಜನೆಯ ಸ್ಟೇಟಸ್ ಅನ್ನು ನೋಡಿಕೊಳ್ಳಬಹುದು.
ಈ ರೀತಿ ನೀವು ಸುಲಭವಾಗಿ ಮೊಬೈಲ್ ಅನ್ನು ಬಳಸಿಕೊಂಡು ಅನ್ನಭಾಗ್ಯ ಯೋಜನೆಯ ಸ್ಟೇಟಸ್ ಅನ್ನು ನೋಡಿಕೊಳ್ಳಬಹುದು.
ಅನ್ನಭಾಗ್ಯ ಯೋಜನೆಯ ಹಣ ಬರೆದಿರಲು ಏನು ಕಾರಣ
ಹೌದು ಗೆಳೆಯರೇ, ರಾಜ್ಯ ಸರ್ಕಾರ ನೀಡುತ್ತಿರುವ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯ ಹಣವನ್ನು ಎಲ್ಲ ಮಹಿಳೆಯರ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗಿದೆ. ಆದರೆ ಕೆಲವು ಮಹಿಳೆಯರಿಗೆ ಮಾತ್ರ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯ ಹಣ ಬರುತ್ತಿಲ್ಲ, ಹೆಚ್ಚಾಗಿ ಅವರು ಅರ್ಜಿ ಸಲ್ಲಿಸುವ ಸಮಯದಲ್ಲಿ ದಾಖಲೆಗಳ ಸಮಸ್ಯೆಯಿಂದ ಅವರ ಬ್ಯಾಂಕ್ ಖಾತೆಗೆ ಹಣ ಬರುತ್ತಿಲ್ಲ.
ಹಾಗೆ ನಿಮ್ಮ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆಗೆ ಮೊಬೈಲ್ ನಂಬರ್ ಲಿಂಕ್ ಆಗಿರಬೇಕು ಮತ್ತು ಈ ಕೆ ವೈ ಸಿ ಕಡ್ಡಾಯವಾಗಿದೆ ಮತ್ತು ಮ್ಯಾಪ್ ಪಿಂಗ್ ಸಹ ಮಾಡಿಕೊಳ್ಳಬೇಕು. ಈ ಎಲ್ಲ ಕೆಲಸ ಮಾಡಿದರು ಸಹ ನಿಮ್ಮ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗುತ್ತಿಲ್ಲವೆಂದರೆ ನಿಮ್ಮ ದಾಖಲೆಗಳಲ್ಲಿ ಏನಾದರೂ ಸಮಸ್ಯೆ ಇದೆ ಎಂದರ್ಥ. ನಿಮ್ಮ ಊರಿನ ಹತ್ತಿರವಿರುವ ಆಹಾರ ಇಲಾಖೆ ಕಚೇರಿಗಳಿಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯ ಹಣ ಏಕೆ ಬರುತ್ತಿಲ್ಲ ಎಂಬ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳಬಹುದು. ತಿಳಿದುಕೊಂಡ ನಂತರ ಸಮಸ್ಯೆಗಳನ್ನು ಬಗೆಹರಿಸಿ ಪ್ರತಿ ತಿಂಗಳಿನಂತೆ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯ ಹಣವನ್ನು ಸುಲಭವಾಗಿ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಆಹಾರ ಇಲಾಖೆ ಕಚೇರಿಗೆ ಭೇಟಿ ನೀಡಿ
ಹೌದು ಗೆಳೆಯರೇ, ನಿಮಗೇನಾದರೂ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತಿಲ್ಲವೆಂದರೆ ಅಥವಾ ಅನ್ನಭಾಗ್ಯ ಯೋಜನೆಯ ಹಣ ಬರುತ್ತಿಲ್ಲವೆಂದರೆ ನಿಮ್ಮ ಊರಿನ ಹತ್ತಿರವಿರುವ ಆಹಾರ ಇಲಾಖೆ ಕಚೇರಿಗಳಿಗೆ ಭೇಟಿ ನೀಡುವ ಮೂಲಕ ನಿಮ್ಮ ಬ್ಯಾಂಕ್ ಖಾತೆಗೆ ಏಕೆ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯ ಹಣ ಏಕೆ ಬರುತ್ತಿಲ್ಲ ಎಂಬ ಎಲ್ಲ ಮಾಹಿತಿಯನ್ನು ಅಲ್ಲಿ ನೀವು ಸುಲಭವಾಗಿ ತಿಳಿದುಕೊಳ್ಳಬಹುದು. ಹೆಚ್ಚಾಗಿ ಕೆಲವು ದಾಖಲೆಗಳಿಂದ ಮತ್ತು ಕೆಲವು ಲಿಂಕ್ ಮಾಡಿಲ್ಲದ ಕಾರಣ ಹೆಚ್ಚಾಗಿ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯ ಹಣ ಬರುತ್ತಿಲ್ಲ. ಆ ಸಮಸ್ಯೆಗಳನ್ನು ಬಗೆಹರಿಸಿದ ಇದುವರೆಗೂ ಬರಬೇಕಾದ ಎಲ್ಲಾ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆ ವರ್ಗಾವಣೆ ಮಾಡಲಾಗುತ್ತದೆ.
ಹೊಸದಾಗಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು
ಕರ್ನಾಟಕದಲ್ಲಿ ಹಲವು ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ್ದಾರೆ, ಆದರೆ ಕೆಲವು ಮಹಿಳೆಯರು ಅವರ ದಾಖಲೆಗಳ ಸಮಸ್ಯೆಗಳಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿಲ್ಲದ ಕಾರಣ ಅಂತವರಿಗೆ ಗುಡ್ ನ್ಯೂಸ್ ಎಂದು ಹೇಳಬಹುದು. ಏಕೆಂದರೆ ಸರ್ಕಾರವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಿದೆ. ನೀವೇನಾದರೂ ಹೊಸದಾಗಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ಆದಷ್ಟು ಬೇಗ ಅರ್ಜಿಯನ್ನು ಸಲ್ಲಿಸಿ.
ನಿಮ್ಮ ಹತ್ತಿರ ಮೊಬೈಲ್ ಇದ್ದರೆ ಸಾಕು ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಕೇಳುವ ಎಲ್ಲ ದಾಖಲೆಯ ಮಾಹಿತಿಯನ್ನು ಭರ್ತಿ ಮಾಡಿ. ನೀವು ಸುಲಭವಾಗಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು. ಒಂದು ವೇಳೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕಷ್ಟಕರವಾದರೆ ನಿಮ್ಮ ಊರಿನ ಹತ್ತಿರ ಇರುವ ಕೆಲವು ಸೈಬರ್ ಗಳಿಗೆ ಅಥವಾ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು. ನಾನು ನಿಮಗೆ ತಿಳಿಸುವುದೇನೆಂದರೆ ಅರ್ಜಿಯನ್ನು ಸಲ್ಲಿಸುವ ಮೊದಲು ಸರಿಯಾದ ದಾಖಲೆಯನ್ನು ನೀಡಿ ಅರ್ಜಿಯನ್ನು ಸಲ್ಲಿಸಿ ಇಲ್ಲವಾದಲ್ಲಿ ಸಮಸ್ಯೆಗೆ ಒಳಗಾಗಬೇಕಾಗುತ್ತದೆ.
ಗೃಹಲಕ್ಷ್ಮಿ ಯೋಜನೆಯ ಹಣವನ್ನು ಚೆಕ್ ಮಾಡಿಕೊಳ್ಳಿ
ನಿಮ್ಮ ಹತ್ತಿರ ಮೊಬೈಲ್ ಇದ್ದರೆ ಸಾಕು, ನಾನು ನಿಮಗೆ ಮೇಲೆ ತಿಳಿಸಿಕೊಟ್ಟಿರುವ ನ ಅನ್ನಭಾಗ್ಯ ಯೋಜನೆ ಯ ಹಣವನ್ನು ಚೆಕ್ ಮಾಡಿಕೊಳ್ಳುವ ವಿಧಾನದಲ್ಲಿ ಗೃಹಲಕ್ಷ್ಮಿ ಯೋಜನೆ ಹಣವನ್ನು ಚೆಕ್ ಮಾಡಿಕೊಳ್ಳಬಹುದು.
ಮೊದಲು ನೀವು DBT karnataka ಆಪ್ ಅನ್ನು ಓಪನ್ ಮಾಡಿಕೊಳ್ಳಿ, ಈ ಆಪ್ ಅನ್ನು ಮೊದಲೇ ನೀವು ರಿಜಿಸ್ಟರ್ ಮಾಡಿಕೊಂಡಿರುತ್ತೀರ ಲಾಗಿನ್ ಮಾಡಿಕೊಂಡು ಹೋಂ ಪೇಜ್ ನಲ್ಲಿ ಗೃಹಲಕ್ಷ್ಮಿ ಸ್ಟೇಟಸ್ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಯ ಆಧಾರ್ ಕಾರ್ಡ್ ಸಂಖ್ಯೆಯನ್ನು ಹಾಕಿ, ಚೆಕ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ ಈ ರೀತಿ ನೀವು ಮಾಡಿದರೆ ಸಾಕು ನೀವು ಸುಲಭವಾಗಿ ಗೃಹಲಕ್ಷ್ಮಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆ ಹಣವನ್ನು ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಬಹುದು.
ಈ ಆಪ್ ನಲ್ಲಿ ಗೃಹಲಕ್ಷ್ಮಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆ ಅಲ್ಲದೆ ಸರ್ಕಾರದಿಂದ ಬರುವ ಹಲವಾರು ಯೋಜನೆಯ ಹಣದ ಸ್ಟೇಟಸ್ ಅನ್ನು ಸಹ ಚೆಕ್ ಮಾಡಿಕೊಳ್ಳಬಹುದು. ಒಂದು ರೀತಿಯಲ್ಲಿ ಈ ಅಪ್ ಜನರಿಗೆ ಉಪಯೋಗವಾಗುತ್ತದೆ, ಮೊಬೈಲ್ ಅನ್ನು ಬಳಸಿಕೊಂಡು ಸುಲಭವಾಗಿ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯ ಹಣವನ್ನು ಚೆಕ್ ಮಾಡಿಕೊಳ್ಳಬಹುದು.
ಇದನ್ನು ಗಮನಿಸಿ
ನಾನು ಈ ವೆಬ್ ಸೈಟ್ ನಲ್ಲಿ ಜನರಿಗೆ ಉಪಯೋಗವಾಗುವ ಮಾಹಿತಿಯನ್ನು ಪ್ರತಿದಿನ ಒದಗಿಸುತ್ತೇನೆ. ನೀವು ಪ್ರತಿದಿನ ಉತ್ತಮ ಮಾಹಿತಿಯನ್ನು ಪಡೆದುಕೊಳ್ಳಬೇಕೆಂದರೆ ನಮ್ಮ ಟೆಲಿಗ್ರಾಂ ಮತ್ತು ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ ಇದರಿಂದ ಪ್ರತಿದಿನ ಉತ್ತಮ ಮತ್ತು ಉಪಯೋಗವಾಗುವ ಮಾಹಿತಿಯನ್ನು ಗ್ರೂಪ್ನಲ್ಲಿ ಅಪ್ಡೇಟ್ ಮಾಡುತ್ತೇನೆ
ಈ ವೆಬ್ ಸೈಟ್ ನಲ್ಲಿ ನಾವು ಯಾವುದೇ ತಪ್ಪು ಮಾಹಿತಿಯನ್ನು ನೀಡುವುದಿಲ್ಲ. ಜನರಿಗೆ ಉಪಯೋಗವಾಗುವ ಜಾಬ್ ನ್ಯೂಸ್, ಅಗ್ರಿಕಲ್ಚರ್ ನ್ಯೂಸ್, ಇನ್ನಿತರ ಉಪಯೋಗವಾಗುವ ಮಾಹಿತಿಯನ್ನು ಇಲ್ಲಿ ನೀಡಲಾಗುತ್ತದೆ.
ಧನ್ಯವಾದಗಳು