Ration Card: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್…! ಇಲ್ಲಿದೆ ಸಂಪೂರ್ಣ ಮಾಹಿತಿ..!
ನಮಸ್ಕಾರ ಬಂಧುಗಳೇ ಬಡವರ್ಗದ ಕುಟುಂಬಕ್ಕೆ ಪಡಿತರ ಚೀಟಿಯು ಬಹು ಮುಖ್ಯ ಪಾತ್ರ ವಹಿಸುತ್ತದೆ. ಇವತ್ತಿನ ವರದಿಯ ಪ್ರಕಾರ ರೇಷನ್ ಕಾರ್ಡ್ ನ ತಿದ್ದುಪಡಿಗೆ ಮತ್ತೆ ಆರಂಭಿಸುವುದರ ಬಗ್ಗೆ ಮಾಹಿತಿಯನ್ನು ಸರ್ಕಾರ ನೀಡಲಾಗಿದೆ. ಹೌದು ಗೆಳೆಯರೇ ನೀವೇನಾದರೂ ನಿಮ್ಮ ರೇಷನ್ ಕಾರ್ಡ್ ನಲ್ಲಿ ತಪ್ಪುಗಳನ್ನು ತಿದ್ದುಪಡಿ ಮಾಡಿಸಿಕೊಳ್ಳಬೇಕೆಂದರೆ ಮತ್ತು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸುವವರಿಗೆ ಸರ್ಕಾರವು ಸಿಹಿ ಸುದ್ದಿ ನಿಡುತ್ತದೆಯೇ. ಯಾವ ದಿನದಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು? ಎಷ್ಟು ದಿನಗಳ ಕಾಲಾವಕಾಶ ನೀಡಲಾಗಿದೆ? ಎಂಬ ಎಲ್ಲ ಮಾಹಿತಿಯನ್ನು ಈ ಲೇಖನದಲ್ಲಿ ಹಂತ ಹಂತವಾಗಿ ತಿಳಿಸಲಾಗಿದೆ.
ಈಗಿನ ಪರಿಸ್ಥಿತಿಯಲ್ಲಿ ರೇಷನ್ ಕಾರ್ಡ್ ಪ್ರಮುಖ ಪಾತ್ರವಾಗಿದೆ
ಹೌದು ಗೆಳೆಯರೇ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಕಾಂಗ್ರೆಸ್ ಸರ್ಕಾರವು ನೀಡಿದ ಐದು ಗ್ಯಾರಂಟಿಗಳಲ್ಲಿ ಪ್ರಮುಖವಾಗಿ ಗೃಹಲಕ್ಷ್ಮಿ ಯೋಜನೆ, ಅನ್ನಭಾಗ್ಯ ಯೋಜನೆ ಎರಡು ಗ್ಯಾರೆಂಟಿಗಳಿಗೆ ರೇಷನ್ ಕಾರ್ಡ್ ಪ್ರಮುಖ ದಾಖಲೆಯಾಗಿದೆ. ಈ ಕಾರಣದಿಂದ ಹೆಚ್ಚಿನ ಜನರು ರೇಷನ್ ಕಾರ್ಡ್ ಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಮತ್ತು ಹೊಸದಾಗಿ ಅರ್ಜಿ ಸಲ್ಲಿಸಲು ಸರ್ಕಾರ ಅನುಮತಿ ನೀಡಿತ್ತು.
ಆದರೆ ಕೆಲವು ತಿಂಗಳುಗಳಲ್ಲಿ ಅಂದರೆ ದೇಶದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿರುವುದರಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ನೀಡಿಲ್ಲ. ಈ ಕಾರಣದಿಂದ ಈಗ ರಾಜ್ಯ ಸರ್ಕಾರವು ಮುಂದಿನ ದಿನಗಳಲ್ಲಿ ರಾಜ್ಯದ ಜನತೆಗೆ ಹೊಸ ರೇಷನ್ ಕಾರ್ಡ್ ಮಾಡಿಸಲು ಮತ್ತು ತಿದ್ದುಪಡಿ ಮಾಡಿಸಲು ಅವಕಾಶ ನೀಡಲು ಮುಂದಾಗಿದೆ. ಹಾಗಾದರೆ ಯಾವ ದಿನಾಂಕದಿಂದ ತಿದ್ದುಪಡಿ ಮತ್ತು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ಈ ಕೆಳಭಾಗದಲ್ಲಿ ತಿಳಿಸಲಾಗಿದೆ.
ಯಾವ ದಿನಾಂಕದಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಮತ್ತು ತಿದ್ದುಪಡಿ ಮಾಡಿಸಿಕೊಳ್ಳಬಹುದು
ಹೌದು ಗೆಳೆಯರೇ, ಹೊಸದಾಗಿ ರೇಷನ್ ಕಾರ್ಡ್ ಮಾಡಿಸಬೇಕಂತ ಇರುವ ವ್ಯಕ್ತಿಗಳಿಗೆ ಮತ್ತು ತಿದ್ದುಪಡಿ ಮಾಡಿಸಿಕೊಳ್ಳಬೇಕು ಅಂತ ಇರುವ ವ್ಯಕ್ತಿಗಳಿಗೆ ಗುಡ್ ನ್ಯೂಸ್ ನೀಡಬಹುದು ಸರ್ಕಾರ. ಸರ್ಕಾರವು ಈಗಾಗಲೇ ಹೊಸ ರೇಷನ್ ಕಾರ್ಡ್ ಮತ್ತು ತಿದ್ದುಪಡಿಗೆ ಅವಕಾಶ ನೀಡಿತ್ತು. ಅಂತಹ ಸಮಯದಲ್ಲಿ ಹೆಚ್ಚು ಜನರು ಹೊಸ ರೇಷನ್ ಕಾರ್ಡ್ ಮತ್ತು ತಿದ್ದುಪಡಿ ಮಾಡಿಸಿಕೊಂಡರು. ಈ ಕೆಲವು ತಿಂಗಳುಗಳಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಮತ್ತು ತಿದ್ದುಪಡಿ ಮಾಡಿಸಿಕೊಳ್ಳಲು ಸ್ಥಗಿತಗೊಳಿಸಲಾಗಿತ್ತು.
ಆದರೆ ಈಗ ಸದ್ಯಕ್ಕೆ ರಾಜ್ಯದಲ್ಲಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಲು ಮತ್ತು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿಯ ದಿನಾಂಕವನ್ನು ನೀಡಿಲ್ಲ. ಆದರೆ ಮುಂಬರುವ ದಿನಗಳಲ್ಲಿ ಅಂದರೆ ಚುನಾವಣೆ ಮುಗಿದ ನಂತರ ಜೂನ್ ತಿಂಗಳಲ್ಲಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿ ಮಾಡಿಸಿಕೊಳ್ಳಲು ಅವಕಾಶ ನೀಡಬಹುದು. ಹಾಗಾದರೆ ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳ ಬಗ್ಗೆ ತಿಳಿದುಕೊಳ್ಳೋಣ.
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
ಹೊಸ ರೇಷನ್ ಕಾರ್ಡ್ ಗೆ ನೀವೇನಾದರೂ ಆನ್ಲೈನ್ ಮೂಲಕ ಅಥವಾ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕೆಂದರೆ ಈ ಕೆಳಗೆ ನೀಡಲಾಗಿರುವ ಪ್ರಮುಖ ದಾಖಲೆಗಳು ನಿಮ್ಮ ಹತ್ತಿರವಿರಬೇಕು. ಹಾಗಾದರೆ ಮಾತ್ರ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬಹುದು.
- ಕುಟುಂಬದ ಪ್ರತಿ ಸದಸ್ಯನ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಗೆ ಲಿಂಕ್ ಆಗಿರೋ ಮೊಬೈಲ್ ಸಂಖ್ಯೆ
- ವಾಸಸ್ಥಳ ಪ್ರಮಾಣ ಪತ್ರ
- ನಿಮ್ಮ ಮನೆಯಲ್ಲಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಗು ಇದ್ದರೆ ಆ ಮಗುವಿನ ಜನ್ಮ ದಾಖಲೆಯಾದ ಪ್ರಮಾಣ ಪತ್ರ ಹೊಂದಿರಬೇಕು
ಮುಂತಾದ ದಾಖಲೆಗಳನ್ನು ಹೊಂದಿದ್ದರೆ ಮಾತ್ರ ನೀವು ಸುಲಭವಾಗಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬಹುದು. ಹಾಗಾದರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಯಾರು ಅರ್ಹರಾಗಿರುತ್ತಾರೆ ಎಂಬುವುದರ ಬಗ್ಗೆ ಕೇಳಬಾಗದಲ್ಲಿ ತಿಳಿಸಲಾಗಿದೆ.
ಇಂಥವರು ಮಾತ್ರ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬಹುದು
ರಾಜ್ಯ ಸರ್ಕಾರವು ಮುಂಬರುವ ದಿನಗಳಲ್ಲಿ ಹೊಸ ರೇಷನ್ ಕಾರ್ಡ್ ಗೆ ಮತ್ತು ತಿದ್ದುಪಡಿಗೆ ಅವಕಾಶ ನೀಡಲಾಗುತ್ತದೆ. ಆದರೆ ಇಂಥವರು ಮಾತ್ರ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ನೀವು ಕರ್ನಾಟಕದ ನಿವಾಸಿ ಆಗಿರಬೇಕು.
- ಹೊಸದಾಗಿ ಮದುವೆಯಾದ ದಂಪತಿಗಳು ಮಾತ್ರ ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಬಹುದು.
- ಒಂದು ವೇಳೆ ನಿಮ್ಮ ಆದಾಯ ಒಂದು ಲಕ್ಷ ರೂಪಾಯಿಗಿಂತ ಕಡಿಮೆ ಇದ್ದರೆ ಬಿಪಿಎಲ್ ಕಾರ್ಡ್ ಅದಕ್ಕಿಂತ ಜಾಸ್ತಿ ಇದ್ದರೆ ಐಪಿಎಲ್ ಕಾರ್ಡ್ ಅನ್ನು ನೀಡಲಾಗುತ್ತದೆ.
- ಪ್ರತಿಯೊಂದು ಕರ್ನಾಟಕದ ನಿವಾಸಿಯ ಕುಟುಂಬಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆದರೆ ಬಡ ರೇಖೆಗಿಂತ ಕೇಳಿರುವ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ನೀಡಲಾಗುತ್ತದೆ ಮತ್ತು ಹೆಚ್ಚಿನ ಆದಾಯ ಅಥವಾ ಸರ್ಕಾರಿ ಕೆಲಸದಲ್ಲಿರುವ ಕುಟುಂಬಗಳಿಗೆ ಎಪಿಎಲ್ ಕಾರ್ಡ್ ಅನ್ನು ನೀಡಲಾಗುತ್ತದೆ.
ಈ ಮೇಲೆ ನೀಡಲಾಗಿರುವ ಅರ್ಹತೆಗಳನ್ನು ಹೊಂದಿದ್ದರೆ ಮಾತ್ರ ನೀವು ಸುಲಭವಾಗಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹಾಗಾದರೆ ಯಾವ ರೀತಿ ಅರ್ಜಿ ಸಲ್ಲಿಸುವುದು ಎಂಬ ಮಾಹಿತಿಯನ್ನು ಈ ಕೆಳಭಾಗದಲ್ಲಿ ತಿಳಿಸಲಾಗಿದೆ.
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ
ಹೌದು ಗೆಳೆಯರೇ, ಸರ್ಕಾರವು ಈಗಾಗಲೇ ಹೊಸ ರೇಷನ್ ಕಾರ್ಡ್ ಗೆ ಮತ್ತು ತಿದ್ದುಪಡಿ ಮಾಡಲು ಅವಕಾಶ ನೀಡಿಲ್ಲ. ಆದರೆ ಮುಂಬರುವ ದಿನಗಳಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿ ಮಾಡಲು ಅವಕಾಶ ನೀಡಲಾಗುತ್ತದೆ. ಅಂತಹ ಸಮಯದಲ್ಲಿ ನೀವು ಸುಲಭವಾಗಿ ಆನ್ಲೈನ್ ಮೂಲಕ ಅಥವಾ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ನಿಮ್ಮ ಹತ್ತಿರ ಮೊಬೈಲ್ ಇದ್ದರೆ ಸಾಕು, ನೀವು ಸುಲಭವಾಗಿ ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದಾಗಿದೆ. ಆದರೆ ನಾನು ನಿಮಗೆ ತಿಳಿಸುವುದೇನೆಂದರೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕಷ್ಟಕರವಾಗಿರುವುದರಿಂದ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವುದು ಸೂಕ್ತ ಎಂದು ಹೇಳಬಹುದು.
ನಿಮ್ಮ ಊರಿನ ಹತ್ತಿರವಿರುವ ಗ್ರಾಮ್ ಒನ್ ಅಥವಾ ನಾಡ ಕಚೇರಿ ಅಥವಾ ಸೇವಾ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ಅಲ್ಲಿ ಕೇಳುವ ಎಲ್ಲ ದಾಖಲೆಗಳನ್ನು ಒದಗಿಸಿ, ಅಲ್ಲಿ ನೀವು ಸುಲಭವಾಗಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅಥವಾ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿಯೂ ಸಹ ಮಾಡಿಸಿಕೊಳ್ಳಬಹುದಾಗಿದೆ. ಒಂದು ವೇಳೆ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಿದ ನಂತರ ಅರ್ಜಿಯ ಸ್ಥಿತಿಯನ್ನು ಸಹ ನೀವು ಸುಲಭವಾಗಿ ಆನ್ಲೈನ್ ಮೂಲಕ ಚೆಕ್ ಮಾಡಿಕೊಳ್ಳಬಹುದಾಗಿದೆ.