Ration Card: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ..! ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ..!

Ration Card: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ..! ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ..!

WhatsApp Group Join Now
Telegram Group Join Now

ನಮಸ್ಕಾರ ಬಂಧುಗಳೇ ಸುಮಾರು ಎರಡು ವರ್ಷಗಳ ಕಾಲ ಹೊಸ ಪಡಿತರ ಚೀಟಿಯನ್ನು ಪಡೆಯಲು ಅರ್ಜಿ ಸಲ್ಲಿಸಲು ಹಲವಾರು ಗ್ರಾಹಕರು ಕಾಯುತ್ತಿದ್ದಾರೆ. ಒಂದುವರೆ ವರ್ಷದ ಹಿಂದೆ 2023ರ ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆದಿತ್ತು, ಅಂತಹ ಸಮಯದಲ್ಲಿ ಹೊಸ ಪಡಿತರ ಚೀಟಿ ವಿತರಣೆ ನಿಲ್ಲಿಸಲಾಗಿತ್ತು. ಏಕೆಂದರೆ ಚುನಾವಣೆಯ ತಯಾರಿ ಮಾಡಿಕೊಳ್ಳುವ ಹಿನ್ನೆಲೆಯಲ್ಲಿ ಹೊಸ ಪಡಿತರ ಚೀಟಿ ಮತ್ತು ತಿದ್ದುಪಡಿ ಮಾಡಿಕೊಳ್ಳಲು ಕೆಲಸವನ್ನು ನಿಲ್ಲಿಸಲಾಗಿತ್ತು.

ಕಳೆದ ವರ್ಷ ವಿಧಾನಸಭಾ ಚುನಾವಣೆ ಮುಗಿದ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಐದು ಗ್ಯಾರಂಟಿಗಳಲ್ಲಿ ಒಂದೊಂದು ಗ್ಯಾರಂಟಿಗಳನ್ನು ಬಿಡುಗಡೆ ಮಾಡಲಾಗಿತ್ತು. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಗೆ ರೇಷನ್ ಕಾರ್ಡ್ ಪ್ರಮುಖ ದಾಖಲೆಯಾಗಿದೆ. ಈ ಕಾರಣದಿಂದ ಜನರು ಒತ್ತಾಸೆಯ ಮೇರೆಗೆ ಮತ್ತೆ ಹೊಸ ರೇಷನ್ ಕಾರ್ಡ್ ಅನ್ನು ಪಡೆದುಕೊಳ್ಳಲು ಅರ್ಜಿ ಆಹ್ವಾನಿಸಲು ಮುಂದಾಗಿದೆ. ಹಾಗಾದರೆ ಹೊಸ ರೇಷನ್ ಕಾರ್ಡ್ ಅನ್ನು ಪಡೆದುಕೊಳ್ಳಲು ಕಡ್ಡಾಯವಾಗಿ ಯಾವ ದಾಖಲೆಗಳು ಬೇಕು ಮತ್ತು ಯಾರು ಮಾತ್ರ ಹೊಸ ರೇಷನ್ ಕಾರ್ಡ್ ಅನ್ನು ಪಡೆದುಕೊಳ್ಳಬಹುದು. ಈ ಎಲ್ಲ ಮಾಹಿತಿಯನ್ನು ಕೆಳಭಾಗದಲ್ಲಿ ತಿಳಿಸಲಾಗಿದೆ.

ಹೊಸ ರೇಷನ್ ಕಾರ್ಡ್ ಅನ್ನು ಪಡೆದುಕೊಳ್ಳಲು ಈ ಕೆಲವು ದಾಖಲೆಗಳು ಕಡ್ಡಾಯವಾಗಿದೆ

ಹೌದು ಗೆಳೆಯರೇ, ರಾಜ್ಯದ ಕೆಲವು ಜನರು ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಲು ಕಾಯುತ್ತಿದ್ದಾರೆ. ಅಂತವರಿಗೆ ಕೆಲವು ಸರ್ವರ್ ಸಮಸ್ಯೆಗಳು ಕಾಣಿಸಿಕೊಳ್ಳಬಹುದು ಹಾಗಾಗಿ ಹೊಸ ರೇಷನ್ ಕಾರ್ಡ್ ಅನ್ನು ಪಡೆದುಕೊಳ್ಳಲು ಅಗತ್ಯ ದಾಖಲೆಗಳನ್ನು ನೀವು ರೆಡಿ ಮಾಡಿಕೊಳ್ಳಿ ನಂತರ ಅರ್ಜಿಯನ್ನು ಸಲ್ಲಿಸಲು ಪ್ರಾರಂಭಿಸಿ. ಹೊಸದಾಗಿ ಮದುವೆಯಾದ ದಂಪತಿಗಳು, ಮನೆಯಲ್ಲಿ ಹೊಸದಾಗಿ ರೇಷನ್ ಕಾರ್ಡ್ ಮಾಡಿಸಲು ಮತ್ತು ಇನ್ನಿತರ ಸಮಸ್ಯೆಗಳಿಂದ ಹೊಸ ರೇಷನ್ ಕಾರ್ಡ್ ಮಾಡಿಸಲು ಅರ್ಜಿಯನ್ನು ಸಲ್ಲಿಸಲು ಮುಂದಾಗುತ್ತಿದ್ದಾರೆ.

ನಿಮ್ಮ ಹತ್ತಿರ ಈ ಮೂರು ದಾಖಲೆಗಳು ಇದ್ದರೆ ಮಾತ್ರ ನೀವು ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಅರ್ಹವಾಗುತ್ತೀರಾ. ಸರ್ಕಾರವು ಈ ಮೂರು ದಾಖಲೆಗಳು ಕಡ್ಡಾಯ ಎಂದು ತಿಳಿಸಿದ್ದಾರೆ. ಹಾಗಾದರೆ ಅವುಗಳೆಂದರೆ ನಿಮ್ಮ ಮನೆಯ ಎಲ್ಲಾ ಸದಸ್ಯರ ಆಧಾರ್ ಕಾರ್ಡ್, ನಿಮ್ಮ ಮನೆಯಲ್ಲಿ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಗು ಇದ್ದರೆ ಅದರ ಜನ್ಮ ದಾಖಲೆಯ ಪ್ರಮಾಣ ಪತ್ರ ಮತ್ತು ನಿಮ್ಮ ಕುಟುಂಬದ ಎಲ್ಲಾ ಸದಸ್ಯರ ಪೈಕಿಯ ಒಬ್ಬೊಬ್ಬರ ಆದಾಯ ಪ್ರಮಾಣ ಪತ್ರ. ಈ ಮೂರು ದಾಖಲೆಗಳು ಕಡ್ಡಾಯವಾಗಿ ಹೊಸದಾಗಿ ರೇಷನ್ ಕಾರ್ಡ್ ಮಾಡಿಸಲು ಬೇಕಾಗುತ್ತದೆ.

ಅದಲ್ಲದೆ ನಿಮ್ಮ ಮನೆಯ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಗೆ ಕಡ್ಡಾಯವಾಗಿ ಮೊಬೈಲ್ ನಂಬರ್ ಲಿಂಕ್ ಆಗಿರಬೇಕು ಮತ್ತು ಒಂದು ವೇಳೆ ನಿಮ್ಮ ಮನೆಯಲ್ಲಿ ಆಧಾರ್ ಕಾರ್ಡ್ ಗೆ ಹತ್ತು ವರ್ಷಕ್ಕಿಂತ ಹಳೆಯದಾಗಿದ್ದರೆ ಕೂಡಲೇ ಅದನ್ನು ಅಪ್ಡೇಟ್ ಮಾಡಿಕೊಳ್ಳಿ. ಇಲ್ಲದಿದ್ದರೆ ಕೆಲವು ಸಮಸ್ಯೆಗಳಿಗೆ ಒಳಗಾಗಬೇಕಾಗುತ್ತದೆ. ನೀವು ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಕೊಳ್ಳಲು ನಿಮ್ಮ ಊರಿನ ಹತ್ತಿರವಿರುವ ಸೇವ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಸುಲಭವಾಗಿ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿ ಕೊಡಬಹುದಾಗಿದೆ. ಹಾಗಾದರೆ ಹೊಸ ರೇಷನ್ ಕಾರ್ಡ್ ಅನ್ನು ಪಡೆದುಕೊಳ್ಳಲು ಅರ್ಹತೆ ಬಗ್ಗೆ ಕೆಳಭಾಗದಲ್ಲಿ ತಿಳಿಸಲಾಗಿದೆ.

ಇಂಥವರು ಮಾತ್ರ ಹೊಸದಾಗಿ ರೇಷನ್ ಕಾರ್ಡ್ ಅನ್ನು ಪಡೆದುಕೊಳ್ಳಬಹುದು

ನೀವೇನಾದರೂ ಹೊಸ ರೇಷನ್ ಕಾರ್ಡ್ ಅನ್ನು ಪಡೆದುಕೊಳ್ಳಬೇಕು ಎಂದರೆ ಈ ಕೆಳಗೆ ನೀಡಲಾಗಿರುವ ಅರ್ಹತೆ ಮತ್ತು ಇಂತವರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ಅನ್ನು ಪಡೆದುಕೊಳ್ಳಲು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

  • ಮೊದಲು ನೀವು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
  • ನೀವು ಕರ್ನಾಟಕದ ನಿವಾಸಿಯಾಗಿ ಇದುವರೆಗೂ ಪಡಿತರ ಚೀಟಿಯನ್ನು ಹೊಂದಿರದ ಕುಟುಂಬಗಳು ಅರ್ಹರಾಗಿರುತ್ತಾರೆ.
  • ಹೊಸದಾಗಿ ಮದುವೆಯಾದ ದಂಪತಿಗಳು ಹೊಸ ಪಡಿತರ ಚೀಟಿಯನ್ನು ಪಡೆದುಕೊಳ್ಳಲು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
  • ಬಿಪಿಎಲ್ ಕಾರ್ಡ್ ಅನ್ನು ಪಡೆದುಕೊಳ್ಳಬೇಕೆಂದರೆ ನೀವು ಬಡತನ ರೇಖೆಗಿಂತ ಕೆಳಗಿನವರು ಬಿಪಿಎಲ್ ಕಾರ್ಡ್ ಅನ್ನು ಪಡೆದುಕೊಳ್ಳಬಹುದಾಗಿದೆ.
  • ನಿಮ್ಮ ಆದಾಯ ಒಂದು ಲಕ್ಷ ರೂಪಾಯಿಗಿಂತ ಕಡಿಮೆ ಇದ್ದರೆ ಬಿಪಿಎಲ್ ಕಾರ್ಡ್ ಅನ್ನು ಪಡೆದುಕೊಳ್ಳಬಹುದಾಗಿದೆ.
  • ನಿಮ್ಮ ಆದಾಯ ಒಂದು ಲಕ್ಷ ಅಥವಾ ಅದಕ್ಕಿಂತ ಹೆಚ್ಚು ಇದ್ದರೆ ಎಪಿಎಲ್ ಕಾರ್ಡ್ ಅನ್ನು ನೀಡಲಾಗುತ್ತದೆ.

ಹಾಗಾದರೆ ಆನ್ಲೈನ್ ಮೂಲಕ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸುವ ವಿಧಾನದ ಬಗ್ಗೆ ಈ ಕೆಳಭಾಗದಲ್ಲಿ ತಿಳಿಸಲಾಗಿದೆ.

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ

ಹೌದು ಗೆಳೆಯರೇ, ನಿಮ್ಮ ಹತ್ತಿರ ಮೊಬೈಲ್ ಇದ್ದರೆ ಸಾಕು ನೀವು ಸುಲಭವಾಗಿ ಆನ್ಲೈನ್ ಮೂಲಕ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸುವ ವಿಧಾನವನ್ನು ಈ ಕೆಳಭಾಗದಲ್ಲಿ ಹಂತ ಹಂತವಾಗಿ ತಿಳಿಸಲಾಗಿದೆ.

  • ಮೊದಲು ನೀವು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಅಧಿಕೃತ ವೆಬ್ಸೈಟ್ https://ahara.kar.nic.in/public_new_rc/ ಗೆ ಭೇಟಿ ನೀಡಬೇಕಾಗುತ್ತದೆ
  • ಈಗ ನಿಮಗೆ ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ ಓಪನ್ ಆಗುತ್ತದೆ, ಅಲ್ಲಿ ಮೇಲ್ಭಾಗದಲ್ಲಿ ಇರುವ ‘ಇ-ಸೇವೆಗಳು’ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ.
  • ನಂತರ ಎಡ ಭಾಗದಲ್ಲಿ ಇರುವ ‘ಇ-ಪಡಿತರ ಚೀಟಿ’ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ.
  • ಅಲ್ಲಿ ಕೆಳಭಾಗದಲ್ಲಿ ನಿಮಗೆ ‘ಹೊಸ ಪಡಿತರ ಚೀಟಿ’ ಎಂಬ ಆಪ್ಷನ್ ಕಾಣುತ್ತದೆ, ನೀವು ಅದರ ಮೇಲೆ ಕ್ಲಿಕ್ ಮಾಡಿ.
  • ನಂತರ ನಿಮಗೆ ‘new application for ration card’ ಎಂಬ ಆನ್ಲೈನ್ ಅರ್ಜಿ ಪುಟ ತೆರೆಯುತ್ತದೆ.
  • ಅದರಲ್ಲಿ ನಿಮಗೆ ಮೂರು ಆಯ್ಕೆಗಳು ಕಾಣುತ್ತದೆ, ಅಲ್ಲಿ ನೀವು ‘new ration card request’ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
  • ಈಗ ನಿಮಗೆ ‘Priority household’ ಮತ್ತು ‘non Priority household’ ಎಂಬ ಎರಡು ಆಯ್ಕೆಗಳು ನಿಮಗೆ ಕಾಣುತ್ತದೆ.
  • ಅದರಲ್ಲಿ ನೀವು ಬಿಪಿಎಲ್ ಕಾರ್ಡ್ ಗೆ ಅರ್ಹರಾಗಿದ್ದರೆ ‘Priority household’ ಅನ್ನು ಆಯ್ಕೆ ಮಾಡಿಕೊಳ್ಳಿ ಅಥವಾ ಎಪಿಎಲ್ ಕಾರ್ಡ್ ಗೆ ಅರ್ಹರಾಗಿದ್ದರೆ ‘non Priority household’ ಅನ್ನು ಆಯ್ಕೆ ಮಾಡಿಕೊಳ್ಳಿ.
  • ನಂತರ ನಿಮಗೆ ಕೆಳಭಾಗದಲ್ಲಿ ಕೆಲವು ಅಂಶಗಳನ್ನು ಓದಿ ‘ಹೌದು ಅಥವಾ ಇಲ್ಲ’ ಎಂಬ ಆಯ್ಕೆ ಮಾಡಿ ಮುಂದುವರೆಯಿರಿ.
  • ಈಗ ನಿಮ್ಮ ಆಧಾರ್ ಸಂಖ್ಯೆ ಮತ್ತು ಆಧಾರ್ ಲಿಂಕ್ ಮೊಬೈಲ್ ಸಂಖ್ಯೆಯನ್ನು ಎಂಟರ್ ಮಾಡಿ ‘ಗೋ’ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ.
  • ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಗೆ ‘ಓಟಿಪಿ’ ಬರುತ್ತದೆ ಅದನ್ನು ಎಂಟರ್ ಮಾಡಿ ‘ಗೋ’ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ.
  • ನಂತರ ಕೆಳಭಾಗದಲ್ಲಿ ಕ್ಯಾಪ್ಚರ್ ಎಂಟರ್ ಮಾಡಲು ಕೇಳುತ್ತದೆ ಕ್ಯಾಪ್ಟವನ್ನು ಎಂಟರ್ ಮಾಡಿ ‘verify’ ಬಟನ್ ಮೇಲೆ ಕ್ಲಿಕ್ ಮಾಡಿ.
  • ನಂತರ ‘fingerprint verification’ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ, ಫಿಂಗರ್ ಪ್ರಿಂಟ್ ಮಿಷಿನ್ ಮೇಲೆ ಬೆರಳಿಟ್ಟು ವೆರಿಫಿಕೇಶನ್ ಮಾಡಿಕೊಳ್ಳಿ.
  • ನಂತರ ನಿಮ್ಮ ಆಯ್ಕೆ ಮಾಡಿ ನಮುಂದಿಸಿದ ಆಧಾರ್ ಸಂಖ್ಯೆಯಲ್ಲಿ ಎಲ್ಲಾ ಮಾಹಿತಿ ತೋರಿಸುತ್ತದೆ. ಅಂದರೆ ನಿಮ್ಮ ಹೆಸರು, ಜನ್ಮ ದಿನಾಂಕ, ಹೀಗೆ ಎಲ್ಲ ಮಾಹಿತಿ ಕಾಣುತ್ತದೆ, ಅಲ್ಲಿ ಕೆಳಭಾಗದಲ್ಲಿ ‘add’ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ.
  • ಈಗ ಮತ್ತೆ ‘add family member’ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ ಮತ್ತು ನಿಮ್ಮ ಮನೆಯ ಎಲ್ಲಾ ಸದಸ್ಯರ ಆಡ್ ಮಾಡಿ.
  • ಈಗ ನಿಮಗೆ ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ವಿಳಾಸ ಅಲ್ಲಿ ಕಾಣುತ್ತದೆ. ಅದನ್ನು ಸೆಲೆಕ್ಟ್ ಮಾಡಿಕೊಳ್ಳಿ ನಂತರ ನಿಮ್ಮ ನ್ಯಾಯಬೆಲೆ ಅಂಗಡಿಯನ್ನು ಆಯ್ಕೆ ಮಾಡಲು ಕೇಳುತ್ತದೆ. ಅಲ್ಲಿ ನೀವು ನಿಮ್ಮ ಸಮೀಪದ ನ್ಯಾಯಬೆಲೆ ಅಂಗಡಿಯನ್ನು ಆಯ್ಕೆ ಮಾಡಿಕೊಳ್ಳಿ.
  • ನಂತರ ನಿಮಗೆ ನಗರ ಅಥವಾ ಗ್ರಾಮೀಣ ಎಂಬ ಆಯ್ಕೆ ಕಾಣುತ್ತದೆ, ಅಲ್ಲಿ ನೀವು ಯಾವುದಕ್ಕೆ ಅನ್ವಯಿಸುತ್ತದೆ ಅದನ್ನು ಆಯ್ಕೆ ಮಾಡಿಕೊಳ್ಳಿ.
  • ಮತ್ತೆ ನೀವು ನಿಮ್ಮ ನಗರ ಅಥವಾ ಊರು ಮತ್ತು ವಾರ್ಡ್ ಅನ್ನು ಆಯ್ಕೆ ಮಾಡಿಕೊಳ್ಳಿ, ಆಯ್ಕೆ ಮಾಡಿಕೊಂಡಿದ್ದ ನಂತರ ‘next stage’ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ.
  • ಈಗ ನೀವು add ಮಾಡಿರೋ ಸದಸ್ಯರಲ್ಲಿ ಯಾರಾರು ಒಬ್ಬರನ್ನು ಕುಟುಂಬದ ಮುಖ್ಯಸ್ಥನಾಗಿ ಮಾಡಬೇಕು, ಅವರ ಹೆಸರನ್ನು ಆಯ್ಕೆಮಾಡಿಕೊಳ್ಳಿ.
  • ನಂತರ ಕುಟುಂಬದ ಮುಖ್ಯಸ್ಥರನ್ನು ಆಯ್ಕೆ ಮಾಡಿಕೊಂಡ ನಂತರ ‘save’ ಆಪ್ಷನ್ ಮೇಲೆ ಕ್ಲಿಕ್ ಮಾಡಿ.
  • ಈಗ ನಿಮಗೆ ಅರ್ಜಿ ಸಲ್ಲಿಸಿದ ಪಡಿತರ ಚೀಟಿಯ ಸ್ವೀಕೃತಿ ಸಿಗುತ್ತದೆ. ಅದನ್ನು ನೀವು ಪಿಡಿಎಫ್ ಅಥವಾ ಡೌನ್ಲೋಡ್ ಅಥವಾ ಪ್ರಿಂಟ್ ತೆಗೆದುಕೊಳ್ಳಬಹುದು.
  • ನಿಮಗೆ ಸಿಕ್ಕಿರುವ ಸ್ವೀಕೃತಿ ನಂಬರ್ ನಿಂದ ರೇಷನ್ ಕಾರ್ಡ್ ನ ಸ್ಥಿತಿಯನ್ನು ಪರಿಶೀಲನೆ ಮಾಡಿಕೊಳ್ಳಬಹುದಾಗಿದೆ ಅಥವಾ ಹೆಚ್ಚಿನ ಮಾಹಿತಿಗಾಗಿ ನಿಮ್ಮ ಊರಿನ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಬಹುದಾಗಿದೆ.

ಒಂದು ವೇಳೆ ನಿಮಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕಷ್ಟಕರವಾದರೆ ನಿಮ್ಮ ಊರಿನ ಹತ್ತಿರವಿರುವ ಆಹಾರ ಇಲಾಖೆಯ ಕಚೇರಿಗಳಿಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಸುಲಭವಾಗಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಸಲ್ಲಿಸುವ ಮೊದಲು ಸರಿಯಾದ ದಾಖಲೆಯನ್ನು ಒದಗಿಸಿ ಅರ್ಜಿಯನ್ನು ಸಲ್ಲಿಸಿ. ಇಲ್ಲವಾದಲ್ಲಿ ಸಮಸ್ಯೆಗೆ ಒಳಗಾಗಬೇಕಾಗುತ್ತದೆ.

WhatsApp Group Join Now
Telegram Group Join Now

Leave a Comment