Free Gas Cylinder: ಉಚಿತ ಗ್ಯಾಸ್ ಸಿಲಿಂಡರ್ ಪಡೆಯಲು ಈ ರೀತಿ ಅರ್ಜಿ ಸಲ್ಲಿಸಿ…! ಇಲ್ಲಿಗೆ ಸಂಪೂರ್ಣ ಮಾಹಿತಿ…!

Free Gas Cylinder: ಉಚಿತ ಗ್ಯಾಸ್ ಸಿಲಿಂಡರ್ ಪಡೆಯಲು ಈ ರೀತಿ ಅರ್ಜಿ ಸಲ್ಲಿಸಿ…! ಇಲ್ಲಿಗೆ ಸಂಪೂರ್ಣ ಮಾಹಿತಿ…!

WhatsApp Group Join Now
Telegram Group Join Now

ನಮಸ್ಕಾರ ಬಂಧುಗಳೇ ಗ್ಯಾಸ್ ಪಡೆದುಕೊಳ್ಳಬೇಕು ಅಂತ ಇರುವ ಅಭ್ಯರ್ಥಿಗಳಿಗೆ ಸರ್ಕಾರದಿಂದ ಸಿಗುತ್ತದೆ ಉಚಿತ ಗ್ಯಾಸ್…! ಸರ್ಕಾರದಿಂದ ಉಚಿತ ಗ್ಯಾಸ್ ಸೌಲಭ್ಯವನ್ನು ನೀಡಲಾಗುತ್ತಿದೆ. ಹಾಗಾದ್ರೆ ಉಚಿತ ಗ್ಯಾಸ್ ಸಿಲಿಂಡರ್ ಪಡೆಯಲು ಯಾವ ರೀತಿ ಅರ್ಜಿ ಸಲ್ಲಿಸಬೇಕು, ಸರ್ಕಾರದಿಂದ ಯಾರಿಗೆ ದೊರೆಯುತ್ತದೆ, ಯಾರು ಅರ್ಹರು ಮತ್ತು ಯಾವ ಯೋಜನೆ ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ನೀಡಲಾಗುತ್ತದೆ ಎಂಬ ಎಲ್ಲ ಮಾಹಿತಿ ನೀಡಿ ಲೇಖನದಲ್ಲಿ ಹಂತ ಹಂತವಾಗಿ ತಿಳಿಸಲಾಗಿದೆ.

ಪ್ರಧಾನ ಮಂತ್ರಿ ಉಜ್ವಲ ಯೋಜನೆ 2024

ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಸರ್ಕಾರದಿಂದ ಉಚಿತ ಗ್ಯಾಸ್ ಸಿಲಿಂಡರ್ ಅನ್ನು ನೀಡಲಾಗುತ್ತಿದೆ. ಈ ಯೋಜನೆಗೆ ಅರ್ಹ ಮಹಿಳೆಯರಿಗೆ ಮತ್ತು ಫಲಾನುಭವಿಗಳಿಗೆ ಸರ್ಕಾರದಿಂದ ಉಚಿತ ಗ್ಯಾಸ್ ಸಿಲಿಂಡರ್ ಅನ್ನು ನೀಡಲಾಗುತ್ತಿದೆ. ಈ ಯೋಜನೆಗೆ ಮೊದಲ ಬಾರಿಗೆ ಯಾರೆಲ್ಲಾ ಅರ್ಜಿ ಸಲ್ಲಿಸಿದ್ದಾರೆ ಅಂತವರಿಗೆ ಉಚಿತ ಗ್ಯಾಸ್ ಸಿಲಿಂಡರ್ ಅನ್ನು ನೀಡಲಾಗುತ್ತದೆ.

2016ರಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು ಪ್ರಧಾನ ಮಂತ್ರಿ ಮೋದಿಜಿ ಅವರು ಜಾರಿಗೆ ತಂದರು. ಈ ಯೋಜನೆ ಅಡಿಯಲ್ಲಿ ಕೋಟ್ಯಂತರ ಮಹಿಳೆಯರು ಗ್ಯಾಸ್ ಸಿಲಿಂಡರ್ ಅನ್ನು ಪಡೆದುಕೊಂಡಿದ್ದಾರೆ. ಈ ಯೋಜನೆ ಅಡಿಯಲ್ಲಿ ಗ್ಯಾಸ್ ಸಿಲಿಂಡರ್ ಪಡೆದುಕೊಂಡು ಜೊತೆಗೆ ಸಬ್ಸಿಡಿ ಹಣವನ್ನು ಕೂಡ ಪ್ರತಿ ತಿಂಗಳು ಅವರ ಬ್ಯಾಂಕ್ ಖಾತೆ ವರ್ಗಾವಣೆ ಮಾಡಲಾಗುತ್ತದೆ. ಹಳ್ಳಿ ಮತ್ತು ಗ್ರಾಮೀಣ ಪ್ರದೇಶದಲ್ಲಿ ವಾಸಿಸುತ್ತಿರುವ ಮಹಿಳೆಯರು ತಮ್ಮ ದಿನನಿತ್ಯದ ಅಡಿಗೆಯ ಕಟ್ಟಿಗೆಯನ್ನು ಬಳಸಿಕೊಂಡು ಅಡುಗೆ ಮಾಡುತ್ತಾರೆ. ಇದರಿಂದ ಅವರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಇದನ್ನು ನಿವಾರಿಸಲು ಸರ್ಕಾರದಿಂದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು ಜಾರಿಗೆಗೊಳಿಸಲಾಗಿದೆ. ಈ ಯೋಜನೆಯಿಂದ ಉಚಿತವಾಗಿ ಗ್ಯಾಸ್ ಕನೆಕ್ಷನ್ ನೀಡಲಾಗುತ್ತದೆ.

ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಅರ್ಹ ಮಹಿಳೆಯರು ಅಥವಾ ಅಭ್ಯರ್ಥಿಗಳು ಉಚಿತ ಗ್ಯಾಸ್ ಸಿಲಿಂಡರ್ ಅನ್ನು ಪಡೆದುಕೊಳ್ಳಬಹುದಾಗಿದೆ. ಅದಲ್ಲದೆ ಪ್ರತಿ ವರ್ಷ ನೀವು 12 ಸಿಲಿಂಡರ್ ಬಳಕೆ ಮಾಡಿದರೆ ಸಬ್ಸಿಡಿ ಕೂಡ ಸಹ ಪಡೆದುಕೊಳ್ಳಬಹುದು. ಒಂದು ಸಿಲಿಂಡರ್ ಅನ್ನು ರೂ.900 ರೂಪಾಯಿಗೆ ಪಡೆದುಕೊಂಡರೆ, ಅಂದರೆ ವರ್ಷಕ್ಕೆ 12 ಸಿಲಿಂಡರ್ ಅನ್ನು ಬಳಕೆ ಮಾಡಿದರೆ ರೂ.300 ಸಬ್ಸಿಡಿ ಹಣವನ್ನು ಕೇಂದ್ರ ಸರ್ಕಾರವು ನೀಡಲಾಗುತ್ತದೆ. ಈ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಈ ಸಬ್ಸಿಡಿ ಹಣದಿಂದ ಒಂದು ಸಿಲಿಂಡರ್ ಅನ್ನು ರೂ.600ಕ್ಕೆ ಪಡೆದುಕೊಳ್ಳಬಹುದಾಗಿದೆ.

ನೀವೇನಾದರೂ ಇದುವರೆಗೂ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಅನ್ನು ಪಡೆದುಕೊಂಡಿಲ್ಲವೆಂದರೆ ನೀವು ಸುಲಭವಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಉಚಿತ ಗ್ಯಾಸ್ ಸಿಸಿಲಿಂಡರ್ ಅನ್ನು ಪಡೆದುಕೊಳ್ಳಲು ನಿಮ್ಮ ಹತ್ತಿರ ಬಿಪಿಎಲ್ ರೇಷನ್ ಕಾರ್ಡ್ ಅನ್ನು ಹೊಂದಿರಬೇಕು. ಹಾಗಾದರೆ ಉಚಿತ ಗ್ಯಾಸ್ ಸಿಲಿಂಡರ್ ಪಡೆದುಕೊಳ್ಳಲು ಬೇಕಾಗುವ ದಾಖಲೆಗಳು, ಅರ್ಹತೆ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ ಈ ಎಲ್ಲ ಮಾಹಿತಿಯನ್ನು ಈ ಕೆಳಭಾಗದಲ್ಲಿ ಹಂತ ಹಂತವಾಗಿ ತಿಳಿಸಲಾಗಿದೆ.

ಉಚಿತ ಗ್ಯಾಸ್ ಸಿಲಿಂಡರ್ ಅನ್ನು ಪಡೆದುಕೊಳ್ಳಲು ಬೇಕಾಗುವ ಪ್ರಮುಖ ದಾಖಲೆಗಳು

ಹೌದು ಗೆಳೆಯರೇ ನೀವೇನಾದರೂ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಅನ್ನು ಪಡೆದುಕೊಳ್ಳಬೇಕೆಂದರೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಈ ಕೆಳಗೆ ನೀಡಲಾಗಿರುವ ಪ್ರಮುಖ ದಾಖಲೆಗಳು ನಿಮ್ಮ ಹತ್ತಿರವಿರಬೇಕು. ಹಾಗಾದರೆ ಮಾತ್ರ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

  • ರೇಷನ್ ಕಾರ್ಡ್
  • ಪಾಸ್ ಪೋರ್ಟ್ ಅಳತೆಯ ಫೋಟೋ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಮನೆಯ ಪ್ರಮಾಣ ಪತ್ರ [ವಾಸಸ್ಥಳ ಪ್ರಮಾಣ ಪತ್ರ]
  • ಬ್ಯಾಂಕ್ ಖಾತೆಯ ವಿವರ
  • ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್
  • ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ
  • ಅರ್ಜಿ ಹಾಕುವವರ ಸಹಿ ಪುರಾವೆ

ಈ ಮೇಲೆ ನೀಡಿರುವ ಎಲ್ಲಾ ದಾಖಲೆಗಳು ನಿಮ್ಮ ಹತ್ತಿರವಿದ್ದರೆ ಸಾಕು ನೀವು ಸುಲಭವಾಗಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಅನ್ನು ಪಡೆದುಕೊಳ್ಳಬಹುದಾಗಿದೆ.

ಉಚಿತ ಗ್ಯಾಸ್ ಸಿಲಿಂಡರ್ ಅನ್ನು ಪಡೆದುಕೊಳ್ಳಲು ಯಾರು ಅರ್ಹರು

ನೀವೇನಾದರೂ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಅನ್ನು ಪಡೆದುಕೊಳ್ಳಬೇಕೆಂದರೆ ಈ ಕೆಳಗೆ ನೀಡಲಾಗಿರುವ ಅರ್ಹತೆಯನ್ನು ಹೊಂದಿರಬೇಕಾಗಿದೆ.

  • ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಅನ್ನು ಪಡೆದುಕೊಳ್ಳಲು ಭಾರತೀಯ ನಿವಾಸಿಯಾಗಿರಬೇಕು.
  • ಇದುವರೆಗೂ ಯಾವುದೇ ಗ್ಯಾಸ್ ಸಂಪರ್ಕವನ್ನು ಹೊಂದಿರಬಾರದು.
  • ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 18 ವರ್ಷ ಮೇಲ್ಪಟ್ಟಿರಬೇಕು.
  • ಅರ್ಜಿ ಹಾಕುವ ಮಹಿಳೆಯರ ರೇಷನ್ ಕಾರ್ಡ್ ಹೊಂದಿರಬೇಕು [ಪ್ರಮುಖವಾಗಿ ಬಿಪಿಎಲ್ ಕಾರ್ಡ್]
  • ಗ್ರಾಮೀಣ ಪ್ರದೇಶದಲ್ಲಿ ವಾಸಿಸುತ್ತಿರುವ ಆದಾಯ ಒಂದು ಲಕ್ಷ ಮತ್ತು ನಗರ ಭಾಗದಲ್ಲಿ ವಾಸಿಸುತ್ತಿರುವ ಕುಟುಂಬದ ಆದಾಯ ಎರಡು ಲಕ್ಷ ಮೀರಿರಬಾರದು.

ಈ ಮೇಲೆ ನೀಡಲಾಗಿರುವ ಅರ್ಹತೆಯನ್ನು ಹೊಂದಿದರೆ ಮಾತ್ರ ನೀವು ಸುಲಭವಾಗಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಅನ್ನು ಪಡೆದುಕೊಳ್ಳಲು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹಾಗಾದರೆ ಆನ್ಲೈನ್ ಮೂಲಕ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ವಿಧಾನದ ಬಗ್ಗೆ ತಿಳಿದುಕೊಳ್ಳೋಣ.

ಆನ್ಲೈನ್ ಮೂಲಕ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ

ಹೌದು ಗೆಳೆಯರೆ, ನಿಮ್ಮ ಹತ್ತಿರ ಮೊಬೈಲ್ ಇದ್ದರೆ ಸಾಕು, ನೀವು ಸುಲಭವಾಗಿ ಆನ್ಲೈನ್ ಮೂಲಕ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಅನ್ನು ಪಡೆದುಕೊಳ್ಳಲು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

  • ಮೊದಲು ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಧಿಕೃತ https://www.pmuy.gov.in/ujjwala2.html ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ
  • ಇಲ್ಲಿ ನಿಮಗೆ ಹೋಂ ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮಗೆ click here ಎಂಬ ಆಪ್ಶನ್ ಕಾಣುತ್ತದೆ, ನೀವು ಅದರ ಮೇಲೆ ಕ್ಲಿಕ್ ಮಾಡಿ.
  • ಈಗ ನಿಮಗೆ ಮೂರು ಕಂಪನಿಗಳು ಕಾಣುತ್ತದೆ, ನಿಮಗೆ ಬೇಕಾಗಿರುವ ಕಂಪನಿಯ ಮೇಲೆ ಕ್ಲಿಕ್ ಮಾಡಿಕೊಳ್ಳಿ.
  • ನಂತರ ನೀವು ನಿಮ್ಮ ಇಮೇಲ್ ಮತ್ತು ಫೋನ್ ನಂಬರ್ ಹಾಕಿ ರಿಜಿಸ್ಟರ್ ಮಾಡಿಕೊಳ್ಳಿ.
  • ನಿಮಗೆ ಫಾರ್ಮ್ ಓಪನ್ ಆಗುತ್ತದೆ, ಆ ಫಾರ್ಮ್ ಕೇಳುವ ಕೆಲವು ದಾಖಲೆಗಳನ್ನು ಭರ್ತಿ ಮಾಡಿ. ಭರ್ತಿ ಮಾಡುವ ಸಮಯದಲ್ಲಿ ಎರಡರಿಂದ ಮೂರು ಬಾರಿ ಗಮನಿಸಿ ಸರಿಯಾದ ದಾಖಲೆಯನ್ನು ಭರ್ತಿ ಮಾಡಿ.
  • ನಂತರ ನೀವು ಕೆಲವು ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕಾಗುತ್ತದೆ, ಸರಿಯಾದ ರೀತಿಯಲ್ಲಿ ಅಪ್ಲೋಡ್ ಮಾಡಿಕೊಳ್ಳಿ.
  • ಈಗ ನಿಮಗೆ ಕೊನೆಯ ಹಂತದಲ್ಲಿ ಅರ್ಜಿ ಸಲ್ಲಿಸಿ ಎಂಬ ಆಪ್ಷನ್ ಬರುತ್ತದೆ. ಅರ್ಜಿ ಸಲ್ಲಿಸಿ ಎಂಬ ಆಪ್ಷನ್ ಅನ್ನು ಕ್ಲಿಕ್ ಮಾಡಿದರೆ ಸಾಕು ನೀವು ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು.

ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಿ

ಒಂದು ವೇಳೆ ನಿಮಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕಷ್ಟಕರವಾದರೆ ನಿಮ್ಮ ಊರಿನ ಹತ್ತಿರವಿರುವ ಗ್ಯಾಸ್ ವಿತರಕರ ಕಚೇರಿಗೆ ಭೇಟಿ ನೀಡುವ ಮೂಲಕ ಅಲ್ಲಿ ಕೇಳುವ ಎಲ್ಲ ದಾಖಲೆಯನ್ನು ಒದಗಿಸಿ, ಸುಲಭವಾಗಿ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಸಲ್ಲಿಸುವ ಮೊದಲು ಸರಿಯಾದ ದಾಖಲೆಯನ್ನು ಒದಗಿಸಿ ಇಲ್ಲವಾದಲ್ಲಿ ಸಮಸ್ಯೆಗೆ ಒಳಗಾಗಬೇಕಾಗುತ್ತದೆ.

WhatsApp Group Join Now
Telegram Group Join Now

Leave a Comment