IPPB Notification 2024: ಭಾರತೀಯ ಅಂಚೆ ಪಾವತಿ ಬ್ಯಾಂಕ್ ನಲ್ಲಿ ಖಾಲಿ ಇರುವ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ…! ಅರ್ಜಿ ಸಲ್ಲಿಸಲು ಇಲ್ಲಿದೆ ಸಂಪೂರ್ಣ ಮಾಹಿತಿ…!
ನಮಸ್ಕಾರ ಬಂಧುಗಳೇ ಭಾರತೀಯ ಅಂಚೆ ಪಾವತಿ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಂಚೆ ಪಾವತಿ ಬ್ಯಾಂಕ್ ನಲ್ಲಿ ಒಟ್ಟು 54 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಹ ಮತ್ತು ಆಸಕ್ತಿ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬೇಕಾಗುವ ಎಲ್ಲಾ ಮಾನದಂಡದ ಬಗ್ಗೆ ಈ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ.
ಭಾರತಿ ಅಂಚೆ ಪಾವತಿ ಬ್ಯಾಂಕ್ ಹುದ್ದೆ 2024
ಭಾರತೀಯ ಅಂಚೆ ಪಾವತಿ ಬ್ಯಾಂಕ್ ನಲ್ಲಿ ಒಟ್ಟು 54 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ವಿಭಾಗಗಳ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಖಾಲಿ ಇರುವ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ಯಾವುದೇ ವಿಷಯದಲ್ಲಿ ಪದವಿ ಮುಗಿಸಿದರೆ ಸಾಕು ಅಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಹಾಕಬಹುದು.
ಈ ಖಾಲಿ ಹುದ್ದೆಗೆ ನೀವೇನಾದರೂ ಅರ್ಜಿಯನ್ನು ಸಲ್ಲಿಸಬೇಕೆಂದರೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24.05.2024 ಆಗಿದೆ. ಈ ಹುದ್ದೆಗೆ ಇನ್ನು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬೇಕೆಂದರೆ ಭಾರತಿ ಅಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹಾಗಾದರೆ ಈ ಹುದ್ದೆಗೆ ನೀವೇನಾದರೂ ಅರ್ಜಿಯನ್ನು ಸಲ್ಲಿಸುವ ಮುನ್ನ ಬೇಕಾಗುವ ವಿದ್ಯಾರ್ಹತೆ, ಅರ್ಹತೆ, ವಯೋಮಿತಿ, ವೇತನ, ಅರ್ಜಿ ಶುಲ್ಕ, ಆಯ್ಕೆ ವಿಧಾನ, ಕೊನೆಯ ದಿನಾಂಕ, ಅರ್ಜಿ ಸಲ್ಲಿಸುವುದು ಹೇಗೆ ಎಂಬ ಎಲ್ಲ ವಿವರವನ್ನು ಈ ಕೆಳಭಾಗದಲ್ಲಿ ಹಂತ ಹಂತವಾಗಿ ತಿಳಿಸಲಾಗಿದೆ.
ಹುದ್ದೆಯ ವಿವರಗಳು
- ಸಂಸ್ಥೆಯ ಹೆಸರು: ಭಾರತೀಯ ಅಂಚೆ ಇಲಾಖೆ
- ಹುದ್ದೆಯ ಹೆಸರು: ಭಾರತೀಯ ಅಂಚೆ ಪಾವತಿ ಬ್ಯಾಂಕ್
- ಒಟ್ಟು ಖಾಲಿ ಇರುವ ಹುದ್ದೆಗಳು: 54
- ಹುದ್ದೆಯ ವಿವರ: ವಿವಿಧ ವಿಭಾಗದ ಎಕ್ಸಿಕ್ಯೂಟಿವ್ ಹುದ್ದೆಗಳು
- ಅರ್ಜಿ ಸಲ್ಲಿಸುವ ವಿಧಾನ: ಆನ್ಲೈನ್
- ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 24.05.2024
- ಅಧಿಕೃತ ವೆಬ್ಸೈಟ್: https://ibpsonline.ibps.in/ipppblfeb24/
ಹುದ್ದೆಗಳು
ಭಾರತೀಯ ಅಂಚೆ ಪಾವತಿ ಬ್ಯಾಂಕ್ ನಲ್ಲಿ ಒಟ್ಟು 54 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಖಾಲಿ ಹುದ್ದೆಗಳನ್ನು ವರ್ಗದ ಆಧಾರದ ಮೇಲೆ ವಿಂಗಡನೆ ಮಾಡಲಾಗಿದೆ.
- OBC- 13
- SC- 07
- ST – 03
- EWS- 04
- ಸಾಮಾನ್ಯ ವರ್ಗ/ UR- 27
ಒಟ್ಟು 54 ಹುದ್ದೆಗಳನ್ನು ಒಳಗೊಂಡಿದೆ.
ವಯೋಮಿತಿ
ಭಾರತೀಯ ಅಂಚೆ ಪಾವತಿ ಬ್ಯಾಂಕ್ ನ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಡೆ ಕನಿಷ್ಠ ಕೆಳಕಂಡ ವಯೋಮಿತಿಯನ್ನು ಹೊಂದಿರಬೇಕು. ಈ ಹುದ್ದೆಗೆ ಅರ್ಹ ಅಭ್ಯರ್ಥಿಯು ಕನಿಷ್ಠ 21 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು. 35 ವರ್ಷ ಮೀರಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುವುದಿಲ್ಲ. ಅದಲ್ಲದೆ ಈ ಹುದ್ದೆಗೆ ಗರಿಷ್ಠ ವಯೋಮಿತಿ ಸಡಿಲಿಕೆಯನ್ನು ಸಹ ಮಾಡಲಾಗಿದೆ.
ವಯೋಮಿತಿ ಸಡಿಲಿಕೆ
- ಇತರೆ ಹಿಂದುಳಿದ ವರ್ಗದ [OBC] ಅಭ್ಯರ್ಥಿಗಳಿಗೆ: 3 ವರ್ಷ
- ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ [SC/ST] ಅಭ್ಯರ್ಥಿಗಳಿಗೆ: 5 ವರ್ಷ
- ಅಂಗವಿಕಲರ [PWD] ಕೆಟಗರಿಯ ಅಭ್ಯರ್ಥಿಗಳಿಗೆ: 10 ವರ್ಷ
ಈ ರೀತಿ ವರ್ಗದ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ವೇತನ
ಭಾರತೀಯ ಅಂಚೆ ಇಲಾಖೆಯ ಅಂಚೆ ಪಾವತಿ ಬ್ಯಾಂಕ್ ನ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ, ಈ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 80,000 ದಿಂದ 1,50,000 ವರೆಗೆ ವೇತನವನ್ನು ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆ
ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಲಿರುವ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು. ಅಂದರೆ ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ವ್ಯಕ್ತಿಯು ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು ಹಾಗಾದರೆ ಮಾತ್ರ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ. ಈ ಹುದ್ದೆಯ ಬಗ್ಗೆ ನೀವು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬೇಕೆಂದರೆ ಈ ಹುದ್ದೆಯ ಅಧಿಸೂಚನೆ ಅಥವಾ ನೋಟಿಫಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಂಡು ಅಲ್ಲಿ ನೀವು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಆಯ್ಕೆಯ ವಿಧಾನ
ಭಾರತೀಯ ಅಂಚೆ ಪಾವತಿ ಬ್ಯಾಂಕ್ ನ ಹುದ್ದೆಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ.
ಅರ್ಜಿ ಸಲ್ಲಿಸುವ ಶುಲ್ಕ
ಭಾರತೀಯ ಅಂಚೆ ಪಾವತಿ ಬ್ಯಾಂಕ್ ನ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ಅಭ್ಯರ್ಥಿಗಳ ವರ್ಗದ ಆಧಾರದ ಮೇಲೆ ಅರ್ಜಿ ಸಲ್ಲಿಸುವ ಶುಲ್ಕವನ್ನು ವಿಧಿಸಲಾಗುತ್ತದೆ.
- ಇತರೆ ಎಲ್ಲಾ ಅಭ್ಯರ್ಥಿಗಳಿಗೆ ರೂ.750
- SC/ST/PWD ಅಭ್ಯರ್ಥಿಗಳಿಗೆ ರೂ.150
ಈ ಅರ್ಜಿ ಶುಲ್ಕವನ್ನು ನೀವು ಸುಲಭವಾಗಿ ನೆಟ್ ಬ್ಯಾಂಕಿಂಗ್, ಕ್ರೆಡಿಟ್ ಕಾರ್ಡ್ ಅಥವಾ ಡೆಬಿಟ್ ಕಾರ್ಡ್, ಯುಪಿಐ ಮೂಲಕ ಆನ್ಲೈನ್ ನಲ್ಲಿ ಪಾವತಿ ಮಾಡಬಹುದಾಗಿದೆ.
ಪ್ರಮುಖ ದಿನಾಂಕಗಳು
ನೀವೇನಾದರೂ ಭಾರತೀಯ ಅಂಚೆ ಪಾವತಿ ಬ್ಯಾಂಕ್ ನ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ 04.05.2024
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 24.05.2024
ಅರ್ಜಿ ಸಲ್ಲಿಸುವ ವಿಧಾನ
ಭಾರತೀಯ ಅಂಚೆ ಇಲಾಖೆಯಿಂದ ಭಾರತೀಯ ಅಂಚೆ ಪಾವತಿ ಬ್ಯಾಂಕ್ ನ ಹುದ್ದೆಗೆ ನೀವೇನಾದರೂ ಅರ್ಹರಾಗಿದ್ದರೆ ಅಥವಾ ಈ ಮೇಲೆ ನೀಡಿರುವ ಎಲ್ಲ ಮಾನದಂಡಕ್ಕೆ ಬದ್ಧವಾಗಿದ್ದರೆ ನೀವು ಸುಲಭವಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. IPPB ಬ್ಯಾಂಕ್ ನ ಅಧಿಕೃತ https://ibpsonline.ibps.in/ipppblfeb24/ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಮೇ 24 ಕೊನೆಯ ದಿನಾಂಕ ವಾಗಿದೆ.
ಒಂದು ವೇಳೆ ನಿಮಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕಷ್ಟಕರವಾದರೆ ನಿಮ್ಮ ಊರಿನ ಹತ್ತಿರವಿರುವ ಸೇವಾ ಕೇಂದ್ರ ಅಥವಾ ಕೆಲವು ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಈ ಹುದ್ದೆಯ ಎಲ್ಲಾ ಮಾಹಿತಿಯನ್ನು ನೀಡಿ, ಅಲ್ಲಿ ನೀವು ಸುಲಭವಾಗಿ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್
ಹೌದು ಗೆಳೆಯರೇ, ಹೆಚ್ಚಿನ ಅಭ್ಯರ್ಥಿಗಳಿಗೆ ಅಥವಾ ವಿದ್ಯಾರ್ಥಿಗಳಿಗೆ ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳಬೇಕು ಎಂಬ ಕುತೂಹಲ ಹೆಚ್ಚಾಗಿ ಇರುತ್ತದೆ. ಅಂಥವರಿಗೆ ಗುಡ್ ನ್ಯೂಸ್ ಎಂದು ಹೇಳಬಹುದು. ಏಕೆಂದರೆ ಸರ್ಕಾರದ ಭಾರತೀಯ ಅಂಚೆ ಇಲಾಖೆಯಿಂದ ಭಾರತೀಯ ಅಂಚೆ ಪಾವತಿ ಬ್ಯಾಂಕ್ ನಲ್ಲಿ ಇರುವ ಖಾಲಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ನೀವೇನಾದರೂ ಈ ಹುದ್ದೆಗೆ ಅರ್ಹ ಮತ್ತು ಆಸಕ್ತಿ ಅಭ್ಯರ್ಥಿ ಆಗಿದ್ದರೆ ಆದಷ್ಟು ಬೇಗ ಅರ್ಜಿಯನ್ನು ಸಲ್ಲಿಸಿ. ಏಕೆಂದರೆ ಬೇಗ ಅರ್ಜಿಯನ್ನು ಸಲ್ಲಿಸುವುದರಿಂದ ಅರ್ಜಿಯಲ್ಲಿ ತೊಂದರೆ ಉಂಟಾದರೆ ಅದನ್ನು ಸರಿಪಡಿಸಿಕೊಳ್ಳಲು ಕೆಲವು ದಿನಗಳು ಇರುತ್ತದೆ. ಈ ಕಾರಣದಿಂದ ಈ ಹುದ್ದೆಗೆ ಅರ್ಹರಾಗಿದ್ದರೆ ಆದಷ್ಟು ಬೇಗ ಅರ್ಜಿಯನ್ನು ಸಲ್ಲಿಸಿ.
ಅರ್ಜಿಯನ್ನು ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಗಮನಿಸಿ
ಹೌದು ಗೆಳೆಯರೇ, ನಾನು ನಿಮಗೆ ತಿಳಿಸುವುದೇನೆಂದರೆ ಪ್ರತಿಯೊಂದು ಯೋಜನೆಗೂ ಮತ್ತು ಪ್ರತಿಯೊಂದು ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಮೊದಲು ಆ ಹುದ್ದೆಯ ಎಲ್ಲ ವಿವರವನ್ನು ತಿಳಿದುಕೊಳ್ಳಿ. ಏಕೆಂದರೆ ನಾನು ಈ ಮಾಧ್ಯಮದಲ್ಲಿ ಈ ಹುದ್ದೆಗೆ ಬೇಕಾಗುವ ಪ್ರಮುಖ ಮಾಹಿತಿಯನ್ನು ತಿಳಿಸಲಾಗಿರುತ್ತದೆ. ಈ ಕಾರಣದಿಂದ ಪ್ರತಿಯೊಂದು ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಮೊದಲು ಆ ಹುದ್ದೆಯ ಎಲ್ಲ ವಿವರವನ್ನು ತಿಳಿದುಕೊಳ್ಳಿ.
ಅದೇ ರೀತಿ ಭಾರತೀಯ ಅಂಚೆ ಪಾವತಿ ಬ್ಯಾಂಕ್ ನಲ್ಲಿರುವ ಖಾಲಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಮೊದಲು ಭಾರತೀಯ ಅಂಚೆ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಲ್ಲಿ ಈ ಹುದ್ದೆಯ ಅಧಿಸೂಚನೆ ಅಥವಾ ನೋಟಿಫಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಂಡು ಅಲ್ಲಿ ನೀವು ಈ ಹುದ್ದೆಯ ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹಾಗೆಯೇ ಆನ್ಲೈನ್ ಮೂಲಕ ನೀವು ಅರ್ಜಿಯನ್ನು ಸಲ್ಲಿಸುವ ಮೊದಲು ಸರಿಯಾದ ದಾಖಲೆಯನ್ನು ಒದಗಿಸಿ ಮತ್ತು ಸರಿಯಾದ ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿಯನ್ನು ಸಲ್ಲಿಸಿ. ಏಕೆಂದರೆ ಒಂದು ಬಾರಿ ಅರ್ಜಿಯನ್ನು ಸಲ್ಲಿಸಿದರೆ ಅದನ್ನು ತಿದ್ದುಪಡಿ ಮಾಡಿಕೊಳ್ಳಲು ಅವಕಾಶವಿರುವುದಿಲ್ಲ, ಈ ಕಾರಣದಿಂದ ಸರಿಯಾದ ದಾಖಲೆಗಳನ್ನು ಒದಗಿಸಿ ಅರ್ಜಿಯನ್ನು ಸಲ್ಲಿಸಿ.
ಒಂದು ವೇಳೆ ನಿಮಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕಷ್ಟಕರವಾದರೆ ನಿಮ್ಮ ಊರಿನ ಹತ್ತಿರ ಇರುವ ಕೆಲವು ಸೈಬರ್ ಗಳಿಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ವಿದ್ಯಾರ್ಥಿಗಳು ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳಬೇಕು ಎಂಬ ಆಸಕ್ತಿ ಹೆಚ್ಚಾಗಿರುತ್ತದೆ. ಅಂತವರಿಗೆ ಈ ಹುದ್ದೆ ಉತ್ತಮ ಎಂದು ಹೇಳಬಹುದು. ಅದೇ ರೀತಿ ನಿಮ್ಮ ಗೆಳೆಯ ಅಥವಾ ಸ್ನೇಹಿತನಿಗೆ ಈ ಮಾಹಿತಿಯನ್ನು ಒದಗಿಸಿ ಅವರು ಈ ಹುದ್ದೆಗೆ ಅರ್ಹರಾಗಿದ್ದರೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇದನ್ನು ಗಮನಿಸಿ
ಬಂಧುಗಳೇ, ಈ ಮಾಧ್ಯಮದಲ್ಲಿ ಜನರಿಗೆ ಉಪಯೋಗವಾಗುವ ಜಾಬ್ ನ್ಯೂಸ್, ಅಗ್ರಿಕಲ್ಚರ್ ನ್ಯೂಸ್, ಇತರೆ ಉಪಯೋಗವಾಗುವ ನ್ಯೂಸ್ ಅನ್ನು ನೀಡಲಾಗುತ್ತದೆ. ಅದಲ್ಲದೆ ಈ ಮಾಧ್ಯಮದಲ್ಲಿ ಯಾವುದೇ ತಪ್ಪು ಮಾಹಿತಿಯನ್ನು ಒದಗಿಸುವುದಿಲ್ಲ.
ಇದೇ ರೀತಿ ಹೆಚ್ಚಿನ ಜಾಬ್ ಮತ್ತು ಅಗ್ರಿಕಲ್ಚರ್ ಮಾಹಿತಿಯನ್ನು ತಿಳಿದುಕೊಳ್ಳಬೇಕೆಂದರೆ ಈ ಮೇಲೆ ನೀಡಿರುವ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ ಇಲ್ಲಿ ನಾನು ಪ್ರತಿದಿನ ನ್ಯೂಸ್ ಅನ್ನು ಅಪ್ಡೇಟ್ ಮಾಡುತ್ತೇನೆ.