PMAY 2024: ಸ್ವಂತ ಮನೆ ಇಲ್ಲದವರಿಗೆ ಸರ್ಕಾರದಿಂದ ಉಚಿತ ಮನೆ…! ಹೊಸ ಫಲಾನುಭವಿಗಳ ಪಟ್ಟಿ ಬಿಡುಗಡೆ ಎಲ್ಲಿದೆ ಸಂಪೂರ್ಣ ಮಾಹಿತಿ…!
ನಮಸ್ಕಾರ ಬಂಧುಗಳೇ ಸ್ವಂತ ಮನೆ ಇಲ್ಲದವರಿಗೆ ಭಾರತ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಉಚಿತ ವಸತಿ ಸೌಲಭ್ಯ ಕಲ್ಪಿಸಲು ನಿರಂತರವಾಗಿ ಕೆಲಸ ಮಾಡಲಾಗುತ್ತಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ ಪ್ರಾರಂಭವಾಗಿ 8 ವರ್ಷ ಪೂರ್ಣಗೊಂಡಿದೆ. ಈ ಯೋಜನೆ ಅಡಿಯಲ್ಲಿ ಅರ್ಹ ಅಭ್ಯರ್ಥಿಗಳು ಸರ್ಕಾರದಿಂದ ಉಚಿತ ಮನೆಯನ್ನು ಪಡೆದುಕೊಳ್ಳಬಹುದಾಗಿದೆ, ಹಾಗಾದರೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆ ಬಗ್ಗೆ ತಿಳಿದುಕೊಳ್ಳೋಣ.
ಪ್ರಧಾನ ಮಂತ್ರಿ ಆವಾಸ್ ಯೋಜನೆ 2024 [Pradhan Mantri Awas Yojana 2024]
ಪ್ರಧಾನ ಮಂತ್ರಿ ಆವಾಸ್ ಯೋಜನೆಯು ಜೂನ್ 2015ರಲ್ಲಿ ಪ್ರಾರಂಭವಾಯಿತು, ಈ ಯೋಜನೆ ಪ್ರಾರಂಭವಾಗಿ ಇದುವರೆಗೂ 8 ವರ್ಷ ಪೂರ್ಣಗೊಂಡಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯು ಕೈಗೆಟುಕುವ ದರದಲ್ಲಿ ವಸತಿ ಒದಗಿಸುತ್ತದೆ. ದೇಶದಲ್ಲಿ ಕೋಟ್ಯಾಂತರ ಬಡ ರೈತರಿಗೆ ಸ್ವಂತ ಮನೆಯನ್ನು ಈ ಯೋಜನೆ ಅಡಿಯಲ್ಲಿ ನಿರ್ಮಾಣ ಮಾಡಿಕೊಡಲಾಗಿದೆ.
ಈಗಾಗಲೇ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಆ ಪಟ್ಟಿಯನ್ನು ನೀವು ಸುಲಭವಾಗಿ ಆನ್ಲೈನ್ ಮೂಲಕ ಪರಿಶೀಲನೆ ಮಾಡಿಕೊಳ್ಳಬಹುದು. ಈ ಯೋಜನೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅವರ ಸ್ಥಿತಿಯನ್ನು ಪರಿಶೀಲನೆ ಮಾಡಿಕೊಳ್ಳಬಹುದು, ಅಭ್ಯರ್ಥಿಗಳ ಅರ್ಜಿಯನ್ನು ಸರ್ಕಾರ ಸ್ವೀಕರಿಸಿ ಅವರ ಹೆಸರನ್ನು ಫಲಾನುಭವಿಗಳ ಪಟ್ಟಿಯಲ್ಲಿ ಸೇರಿಸಲಾಗುತ್ತದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳ ಪಟ್ಟಿಯನ್ನು ಹಲವಾರು ಭಾಗಗಳಲ್ಲಿ ಬಿಡುಗಡೆ ಮಾಡಲಾಗಿದೆ.
ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅವರ ಬ್ಯಾಂಕ್ ಖಾತೆಗೆ ಸಬ್ಸಿಡಿ ಮೊತ್ತವನ್ನು ನೇರವಾಗಿ ಜಮಾ ಮಾಡಲಾಗುತ್ತದೆ. ಈ ಯೋಜನೆ ಅಡಿಯಲ್ಲಿ ಎರಡು ವಿಭಾಗವನ್ನು ಹೊಂದಿದೆ, ಒಂದು ನಗರ ಮತ್ತು ಗ್ರಾಮೀಣ ಎಂಬ ಎರಡು ಭಾಗದಲ್ಲಿ ಈ ಯೋಜನೆ ಅಡಿಯಲ್ಲಿ ಹಣವನ್ನು ನೀಡಲಾಗುತ್ತದೆ. ಈ ಯೋಜನೆ ಅಡಿಯಲ್ಲಿ ಕೊಳೆಗೇರಿಗಳಲ್ಲಿ ಮನೆಗಳನ್ನು ನಿರ್ಮಿಸಲು ಭಾರತ ಸರ್ಕಾರ ಪ್ರತಿಮನೆಗೆ ರೂ.1 ಲಕ್ಷ ಸಹಾಯಧನವನ್ನು ನೀಡಲಾಗುತ್ತದೆ.
ಈ ಯೋಜನೆ ಅಡಿಯಲ್ಲಿ ಸಬ್ಸಿಡಿಯನ್ನು ಪಡೆಯುವುದಲ್ಲದೆ ಗೃಹ ಸಾಲವನ್ನು ಪಡೆದುಕೊಳ್ಳಬಹುದಾಗಿದೆ. ಮನೆ ನಿರ್ಮಾಣ ಮಾಡಲು ಗೃಹ ಸಾಲದಲ್ಲಿ 6.5% ವರೆಗೂ ಬಡ್ಡಿ ಸಹಾಯಧನವನ್ನು ಪಡೆಯಬಹುದಾಗಿದೆ. ಈ ಸಾಲವನ್ನು ಬರೋಬರಿ 20 ವರ್ಷಗಳವರೆಗೆ ಮರುಪಾವತಿ ಮಾಡಬಹುದಾಗಿದೆ. ಹಾಗಾದರೆ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ಬೇಕಾಗುವ ಅರ್ಹತೆ ಮತ್ತು ದಾಖಲೆಗಳ ಬಗ್ಗೆ ತಿಳಿದುಕೊಳ್ಳೋಣ.
ಈ ಯೋಜನೆಗೆ ಅರ್ಹತೆ
ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ನೀವೇನಾದರೂ ಅರ್ಜಿಯನ್ನು ಸಲ್ಲಿಸಬೇಕೆಂದರೆ ಸರ್ಕಾರ ನೀಡಿರುವ ಅರ್ಹತಾ ಮಾನದಂಡಗಳ ಪ್ರಕಾರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಕೆಳಭಾಗದಲ್ಲಿ ನೀಡಲಾಗಿರುವ ಅರ್ಹತೆಯನ್ನು ಹೊಂದಿದ್ದರೆ ಮಾತ್ರ ಅಂಥವರು ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು. ಹಾಗಾದರೆ ಅದರ ಬಗ್ಗೆ ಈ ಕೆಳಭಾಗದಲ್ಲಿ ತಿಳಿಸಲಾಗಿದೆ.
- ಪ್ರಧಾನ್ ಮಂತ್ರಿ ಆವಾಸ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ಅರ್ಜಿ ಸಲ್ಲಿಸುವ ಅಭ್ಯರ್ಥಿ ಯು ಭಾರತೀಯನಾಗಿರಬೇಕು ಮತ್ತು ಭಾರತದಲ್ಲಿ ಜನಿಸಿರಬೇಕು ಹಾಗಾದರೆ ಮಾತ್ರ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು.
- ಅಭ್ಯರ್ಥಿಗಳು ಬಡ ರೇಖೆ ಮತ್ತು ಕೆಲವರ್ಗದಲ್ಲಿ ಇರಬೇಕು ಮತ್ತು ಅಭ್ಯರ್ಥಿಯು ಕುಟುಂಬ ಪಡಿತರ ಚೀಟಿಯನ್ನು ಹೊಂದಿರಬೇಕು.
- ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ಕುಟುಂಬದ ಯಾವುದೇ ಅಭ್ಯರ್ಥಿಯು ಸರ್ಕಾರಿ ಹುದ್ದೆಯನ್ನು ಹೊಂದಿರಬಾರದು.
- ಅಭ್ಯರ್ಥಿಯು ಕುಟುಂಬದ ಮುಖ್ಯಸ್ಥನಾಗಿರಬೇಕು ಹಾಗಾದರೆ ಮಾತ್ರ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಪ್ರಯೋಜನವನ್ನು ಪಡೆದುಕೊಳ್ಳಬಹುದು.
- ಈ ಯೋಜನೆ ಅಡಿಯಲ್ಲಿ ಉಚಿತ ಮನೆಯನ್ನು ಪಡೆದುಕೊಳ್ಳಲು ಅಭ್ಯರ್ಥಿಯ ಪಡಿತರ ಚೀಟಿಯ ಪ್ರಕಾರ ಕುಟುಂಬದ ಮುಖ್ಯಸ್ಥರೆಂದು ಘೋಷಿಸಲ್ಪಟ್ಟ ಪುರುಷ ಅಥವಾ ಮಹಿಳೆಯರಿಗೆ ಮಾತ್ರ ಈ ಯೋಜನೆ ಅಡಿಯಲ್ಲಿ ಸಹಾಯಧನವನ್ನು ಪಡೆದುಕೊಳ್ಳಬಹುದು.
- ಈ ಯೋಜನೆಯಲ್ಲಿ ಫಲಾನುಭವಿಗಳು ಈಗಾಗಲೇ ಸ್ವಂತ ಮನೆ ಹೊಂದಿರಬಾರದು.
- ಈ ಯೋಜನೆಯಲ್ಲಿ ಹೆಚ್ಚಾಗಿ ಮಹಿಳೆಯರಿಗೆ ಆದ್ಯತೆ ನೀಡಲಾಗುತ್ತದೆ.
- ಮೊದಲೇ ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರದ ಯಾವುದೇ ವಸತಿ ಯೋಜನೆ ಪ್ರಯೋಜನವನ್ನು ಪಡೆದುಕೊಂಡಿರಬಾರದು.
ಈ ಮೇಲೆ ನೀಡಿರುವ ಅರ್ಹತೆ ಹೊಂದಿದ್ದರೆ ಮಾತ್ರ ಈ ಯೋಜನೆ ಅಡಿಯಲ್ಲಿ ಉಚಿತ ಮನೆಯನ್ನು ಪಡೆದುಕೊಳ್ಳಲು ಅರ್ಜಿಯನ್ನು ಸಲ್ಲಿಸಬಹುದು. ಹಾಗಾದರೆ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳ ಬಗ್ಗೆ ತಿಳಿದುಕೊಳ್ಳೋಣ.
ಬೇಕಾಗುವ ದಾಖಲೆಗಳು
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ನೀವೇನಾದರೂ ಅರ್ಜಿಯನ್ನು ಸಲ್ಲಿಸಬೇಕೆಂದರೆ ಈ ಕೆಳಭಾಗದಲ್ಲಿ ನೀಡಲಾಗಿರುವ ದಾಖಲೆಗಳು ನಿಮ್ಮ ಹತ್ತಿರ ಇರಬೇಕು, ಹಾಗಾದರೆ ಮಾತ್ರ ಯೋಜನೆ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
- ಆಧಾರ್ ಕಾರ್ಡ್
- ಮನೆಯ ವಿಳಾಸದ ಪುರಾವೆ
- ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ನ ದಾಖಲೆಗಳು
- ಪಾಸ್ಪೋರ್ಟ್ ಅಳತೆಯ ಫೋಟೋ
- ಆಧಾರ್ ಕಾರ್ಡ್ ಮತ್ತು ಬ್ಯಾಂಕಿಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ
- ವಯಸ್ಸಿನ ಪ್ರಮಾಣ ಪತ್ರ
ಮುಂತಾದ ದಾಖಲೆಗಳನ್ನು ಹೊಂದಿದ್ದರೆ ಮಾತ್ರ ಈ ಯೋಜನೆ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಬಹುದು
ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ
ನಿಮ್ಮ ಹತ್ತಿರ ಮೊಬೈಲ್ ಇದ್ದರೆ ಸಾಕು, ನೀವು ಸುಲಭವಾಗಿ ಈ ಯೋಜನೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
- ಮೊದಲು ನೀವು ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಧಿಕೃತ https://pmaymis.gov.in/ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
- ಈಗ ನಿಮಗೆ ಹೋಂ ಪೇಜ್ ಓಪನ್ ಆಗುತ್ತದೆ, ಅಲ್ಲಿ ನೀವು ಸಿಟಿಜನ್ ಅಸೆಸ್ಮೆಂಟ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
- ನಂತರ ನೀವು ಅನ್ವಯಿಸುವ ಆನ್ಲೈನ್ ಆಯ್ಕೆ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ, ನಂತರ ನೀವು ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ.
- ನಮೂಂದಿಸಿದ ನಂತರ ದೃಢೀಕರಿಸಲು ಚೆಕ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
- ಕ್ಲಿಕ್ ಮಾಡಿದ ತಕ್ಷಣ ನಿಮಗೆ ಪ್ರಧಾನ್ ಮಂತ್ರಿ ಆವಾಸ್ ಯೋಜನೆಯ ಪುಟವು ನಿಮ್ಮ ಮುಂದೆ ಓಪನ್ ಆಗುತ್ತದೆ.
- ಇಲ್ಲಿ ನೀವು ನಿಮ್ಮ ವೈಯಕ್ತಿಕ ವಿವರ, ಆದಾಯದ ವಿವರ, ಬ್ಯಾಂಕ್ ನ ವಿವರ, ಮುಂತಾದ ವಿವರಗಳನ್ನು ನಮೂದಿಸಬೇಕಾಗುತ್ತದೆ. ಅವುಗಳನ್ನು ನೀವು ಸರಿಯಾಗಿ ನಮೂದಿಸಿ.
- ನಮ್ಮೊಂದಿಸಿದ ನಂತರ I am aware ಚೆಕ್ ಬಾಕ್ಸ್ ಅನ್ನು ಕ್ಲಿಕ್ ಮಾಡಿ ನಂತರ ಕ್ಯಾಪ್ಚವನ್ನು ಎಂಟರ್ ಮಾಡಿ.
- ಸೇವ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿದ ತಕ್ಷಣ ನಿಮ್ಮ ಅರ್ಜಿ ಪೂರ್ಣಗೊಳ್ಳುತ್ತದೆ. ನಂತರ ನೀವು ಅಪ್ಲಿಕೇಶನ್ ಸಂಖ್ಯೆಯನ್ನು ಪಡೆಯಿರಿ.
- ಕೊನೆ ಹಂತದಲ್ಲಿ ನೀವು ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಪ್ರಿಂಟ್ ಅನ್ನು ತೆಗೆದುಕೊಳ್ಳಬಹುದಾಗಿದೆ.
ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವುದು ಸುಲಭ ವಿಧಾನವಾಗಿದೆ, ಆದರೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವಾಗ ಕೆಲವು ಸಮಸ್ಯೆಗೆ ಒಳಗಾಗುತ್ತೀರಾ ಈ ಕಾರಣದಿಂದ ನೀವು ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವುದು ಸುಲಭ ಎಂದು ಹೇಳಬಹುದು. ನಿಮ್ಮ ಊರಿನ ಹತ್ತಿರವಿರುವ ಇ ಸೇವಕೇಂದ್ರ, ಸಾಮಾನ್ಯ ಸೇವಾ ಕೇಂದ್ರ ಅಥವಾ ಕೆಲವು ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ಅಲ್ಲಿ ಕೇಳುವ ಕೆಲವು ದಾಖಲೆಗಳನ್ನು ನೀಡಿ ಮತ್ತು ಫಾರ್ಮ್ ಅನ್ನು ಭರ್ತಿ ಮಾಡಿ ನೀವು ಅಲ್ಲಿ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು.
ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಹೊಸ ಫಲಾನುಭವಿಗಳ ಪಟ್ಟಿ ಪರಿಶೀಲನೆ ಮಾಡುವುದು ಹೇಗೆ
ನೀವೇನಾದರೂ ಮೊದಲೇ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಿದರೆ ಅಂಥವರಿಗೆ ಹೊಸ ಫಲಾನುಭವಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಯೋಜನೆಯ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತದೆ. ನೀವೇನಾದರೂ ನಗರ ಪ್ರದೇಶದಲ್ಲಿ ಮನೆ ನಿರ್ಮಾಣ ಮಾಡಬೇಕೆಂದರೆ 2,50,000 ಸರ್ಕಾರದಿಂದ ನೀಡಲಾಗುತ್ತದೆ. ಗ್ರಾಮೀಣ ಪ್ರದೇಶದಲ್ಲಿ ಮನೆ ನಿರ್ಮಾಣ ಮಾಡಬೇಕೆಂದರೆ 1,20,000 ಹಣವನ್ನು ಸರ್ಕಾರದಿಂದ ನೀಡಲಾಗುತ್ತದೆ. ಹಾಗಾದರೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಬಿಡುಗಡೆ ಮಾಡಲಾದ ಹೊಸ ಫಲಾನುಭವಿಗಳ ಪಟ್ಟಿಯನ್ನು ಆನ್ಲೈನಲ್ಲಿ ಸುಲಭವಾಗಿ ಪರಿಶೀಲನೆ ಮಾಡಿಕೊಳ್ಳುವ ವಿಧಾನದ ಬಗ್ಗೆ ತಿಳಿದುಕೊಳ್ಳೋಣ.
- ಮೊದಲು ನೀವು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
- ನಂತರ ನಿಮಗೆ ಹೋಂ ಪೇಜ್ ಓಪನ್ ಆಗುತ್ತದೆ ಅಲ್ಲಿ ಮೆನು ಭಾಗದಲ್ಲಿ Avosoft Why ಎಂಬ ಆಪ್ಶನ್ ಮೇಲೆ ಕ್ಲಿಕ್ ಮಾಡಿ.
- ನಂತರ ನೀವು ಅಲ್ಲಿ ವರದಿ ಆಯ್ಕೆ ಮೇಲೆ ಕ್ಲಿಕ್ ಮಾಡಿ, ಇದರ ನಂತರ ನೀವು H ವಿಭಾಗಕ್ಕೆ ಹೋಗಬೇಕಾಗುತ್ತದೆ
- ಅಲ್ಲಿ ನೀವು ನಿಮ್ಮ ಕೆಲವು ಡಾಟಾ ವನ್ನು ನಮೂದಿಸಬೇಕಾಗುತ್ತದೆ, ಅಂದರೆ ರಾಜ್ಯ, ಜಿಲ್ಲೆ, ಮುಂತಾದ ದಾಖಲೆಗಳ ಮತ್ತು ಶಾಶ್ವತ ವಿಳಾಸವನ್ನು ನೀವು ಆಯ್ಕೆ ಮಾಡಬೇಕಾಗುತ್ತದೆ.
- ಎಲ್ಲ ವಿವರವನ್ನು ಭರ್ತಿ ಮಾಡಿದ ನಂತರ ಕ್ಯಾಪ್ಚರ್ ಕೋಡ್ ಅನ್ನು ಭರ್ತಿ ಮಾಡಿ, ಹುಡುಕಾಟ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
- ನಂತರ ನಿಮಗೆ ಪಿಎಂ ಆವಾಸ್ ಯೋಜನೆ ಅಡಿಯಲ್ಲಿ ಹೊಸ ಫಲಾನುಭವಿಗಳ ಪಟ್ಟಿಯ ವಿವರವನ್ನು ನೀಡಲಾಗುತ್ತದೆ.
- ಇಲ್ಲಿ ನಿಮ್ಮ ಹೆಸರು ಇದೆ ಇಲ್ಲವೋ ಎಂದು ಸುಲಭವಾಗಿ ಪರಿಶೀಲನೆ ಮಾಡಿಕೊಳ್ಳಬಹುದು. ಇಲ್ಲವಾದಲ್ಲಿ ಕೆಲವು ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ನಿಮ್ಮ ಅರ್ಜಿಯನ್ನು ಪರಿಶೀಲನೆ ಮಾಡಿಕೊಳ್ಳಬಹುದು.