SSC Recruitment 2024: SSC 968 ಖಾಲಿ ಹುದ್ದೆಗಳಿಗೆ ನೇಮಕಾತಿ..! ಅರ್ಜಿ ಸಲ್ಲಿಸಲು ಇಲ್ಲಿದೆ ಸಂಪೂರ್ಣ ಮಾಹಿತಿ..!

SSC Recruitment 2024: SSC 968 ಖಾಲಿ ಹುದ್ದೆಗಳಿಗೆ ನೇಮಕಾತಿ..! ಅರ್ಜಿ ಸಲ್ಲಿಸಲು ಇಲ್ಲಿದೆ ಸಂಪೂರ್ಣ ಮಾಹಿತಿ..!

WhatsApp Group Join Now
Telegram Group Join Now

ನಮಸ್ಕಾರ ಬಂಧುಗಳೇ ಸ್ಟಾಫ್ ಸೆಲೆಕ್ಷನ್ ಕಮಿಷನ್ [SSC] ನ ಅಧಿಕೃತ ವೆಬ್ಸೈಟ್ ನಲ್ಲಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಒಟ್ಟು 968 ಖಾಲಿ ಜೂನಿಯರ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳಲು ಉತ್ತಮ ಅವಕಾಶ ಎಂದು ಹೇಳಬಹುದು. ಸ್ಟಾಫ್ ಸೆಲೆಕ್ಷನ್ ಕಮಿಷನ್ [SSC] ನ ಜೂನಿಯರ್ ಇಂಜಿನಿಯರ್ ಹುದ್ದೆಗೆ ಅರ್ಹ ಅಭ್ಯರ್ಥಿಯಾಗಿದ್ದರೆ ಆನ್ಲೈನ್ ಮೂಲಕ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು.

ಸ್ಟಾಫ್ ಸೆಲೆಕ್ಷನ್ ಕಮಿಷನ್ [SSC] ನ ಜೂನಿಯರ್ ಇಂಜಿನಿಯರ್ ಹುದ್ದೆಯ ನೇಮಕಾತಿ 20124

ಸ್ಟಾಫ್ ಸೆಲೆಕ್ಷನ್ ಕಮಿಷನ್ [SSC] ನ ಅಧಿಸೂಚನೆಯ ಪ್ರಕಾರ ಜೂನಿಯರ್ ಇಂಜಿನಿಯರ್ [JE], ಸಿವಿಲ್[Civil], ಮೆಕ್ಯಾನಿಕಲ್[Mechanical], ಮತ್ತು ಎಲೆಕ್ಟ್ರಿಕಲ್[Electrical] ಪರೀಕ್ಷೆಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಒಟ್ಟು 968 ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಸ್ಟಾಫ್ ಸೆಲೆಕ್ಷನ್ ಕಮಿಷನ್ [SSC] ಯ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 18 ಆಗಿದೆ.

ಹಾಗಾದರೆ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬೇಕಾಗುವ ಅರ್ಹತೆ? ವಯೋಮಿತಿ ಎಷ್ಟಿರಬೇಕು? ವೇತನ ಎಷ್ಟು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ? ಅರ್ಜಿ ಸಲ್ಲಿಸುವ ಶುಲ್ಕ? ಆಯ್ಕೆ ಮಾಡುವ ಪ್ರಕ್ರಿಯೆ? ಈ ಎಲ್ಲಾ ಮಾಹಿತಿಯನ್ನು ಈ ಕೆಳಭಾಗದಲ್ಲಿ ನೀಡಲಾಗಿದೆ.

ಹುದ್ದೆಗಳ ವಿವರ

  • ನೇಮಕಾತಿ ಮಾಡುವ ಸಂಸ್ಥೆ: ಸ್ಟಾಪ್ ಸೆಲೆಕ್ಷನ್ ಕಮಿಷನ್ [ಸಿಬ್ಬಂದಿ ಆಯ್ಕೆ ಆಯೋಗ]
  • ಸ್ಥಳ: ಭಾರತದೆಲ್ಲೆಡೆ
  • ವೇತನ: ರೂ 35,400 ರಿಂದ ರೂ 1,12,400
  • ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ: 968
  • ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 18 ಏಪ್ರಿಲ್ 2024
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಧಿಕೃತ ವೆಬ್ಸೈಟ್: https://ssc.gov.in/

ಒಟ್ಟು ಖಾಲಿ ಇರುವ ಹುದ್ದೆಗಳ ವಿವರ

ಸ್ಟಾಫ್ ಸೆಲೆಕ್ಷನ್ ಕಮಿಷನ್ [SSC] ನ ಜೂನಿಯರ್ ಇಂಜಿನಿಯರ್ ನೇಮಕಾತಿಯ ಪ್ರಕಾರ ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ 968. ಈ ಹುದ್ದೆಗಳನ್ನು ಬ್ರಾಂಚ್‌ವಾರು ಹುದ್ದೆಯಾಗಿ ವಿಂಗಡಣೆ ಮಾಡಲಾಗಿದೆ.

  • ಜೂನಿಯರ್ ಇಂಜಿನಿಯರ್: 788 ಹುದ್ದೆಗಳು
  • ಜೂನಿಯರ್ ಇಂಜಿನಿಯರ್ [ಎಲೆಕ್ಟ್ರಿಕಲ್ ,ಮೆಕಾನಿಕಲ್ ಇಂಜಿನಿಯರಿಂಗ್]: 37 ಹುದ್ದೆಗಳು
  • ಜೂನಿಯರ್ ಇಂಜಿನಿಯರ್ [ಮೆಕಾನಿಕಲ್ ಇಂಜಿನಿಯರಿಂಗ್]: 15 ಹುದ್ದೆಗಳು
  • ಜೂನಿಯರ್ ಇಂಜಿನಿಯರ್ [ಎಲೆಕ್ಟ್ರಿಕಲ್ ಇಂಜಿನಿಯರಿಂಗ್]: 128 ಹುದ್ದೆಗಳು

ವಯೋಮಿತಿ

ಸ್ಟಾಫ್ ಸೆಲೆಕ್ಷನ್ ಕಮಿಷನ್ [SSC] ನ ಜೂನಿಯರ್ ಇಂಜಿನಿಯರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ನಿಮ್ಮ ವಯಸ್ಸು ಕನಿಷ್ಠ 18 ವರ್ಷ ಆಗಿರಬೇಕು, ಗರಿಷ್ಠ 30 ವರ್ಷ ಮೀರಿರಬಾರದು. 30 ವರ್ಷ ಮೀರಿದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಲ್ಲ.

ಅಭ್ಯರ್ಥಿಗಳ ವರ್ಗದ ಆಧಾರದ ಮೇಲೆ ವಯಸ್ಸಿನ ಸೆಡಿಲಿಕೆಯನ್ನು ಅನ್ವಯಿಸಬಹುದು.

ವೇತನ

ಸ್ಟಾಫ್ ಸೆಲೆಕ್ಷನ್ ಕಮಿಷನ್ [SSC] ನ ಜೂನಿಯರ್ ಇಂಜಿನಿಯರ್ ಹುದ್ದೆಗೆ ಆಯ್ಕೆ ಆದ ನಂತರ ಅಭ್ಯರ್ಥಿಗಳ ವೇತನ ತಿಂಗಳಿಗೆ ರೂ 35,400 ರಿಂದ ರೂ 1,12,400 ವೇತನವನ್ನು ಪಡೆಯುತ್ತಾರೆ.

ಅರ್ಹತೆ

ಸ್ಟಾಫ್ ಸೆಲೆಕ್ಷನ್ ಕಮಿಷನ್ [SSC] ನ ಅಧಿಸೂಚನೆ ಪ್ರಕಾರ ಜೂನಿಯರ್ ಇಂಜಿನಿಯರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹತೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಪದವಿ [BE/B.Tech] ಅಥವಾ ಸಿವಿಲ್ ಇಂಜಿನಿಯರಿಂಗ್ ಅಥವಾ ಮೆಕ್ಯಾನಿಕಲ್ ಇಂಜಿನಿಯರಿಂಗ್ ಅಥವಾ ಎಲೆಕ್ಟ್ರಿಕ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮೋ ವನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪೂರ್ಣಗೊಂಡಿರಬೇಕು. ಈ ಮೇಲೆ ನೀಡಿರುವ ಶಿಕ್ಷಣ ಹೊಂದಿದರೆ ಮಾತ್ರ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹರಾಗುತ್ತಿದೆ.

ಅರ್ಜಿ ಸಲ್ಲಿಸುವಾಗ ವಿಧಿಸುವ ಶುಲ್ಕ

  • ST/SC/PwBD/ExServicemen: ಯಾವುದೇ ಶುಲ್ಕವನ್ನು ಪಾವತಿಸುವಂತಿಲ್ಲ
  • ಇತರೆ ಅಭ್ಯರ್ಥಿಗಳು: ರೂ.100 ಪಾವತಿಸಬೇಕಾಗುತ್ತದೆ

ಅರ್ಜಿ ಸಲ್ಲಿಸುವ ಶುಲ್ಕವನ್ನು ನೀವು ಸುಲಭವಾಗಿ ನೆಟ್ ಬ್ಯಾಂಕಿಂಗ್ ಕ್ರೆಡಿಟ್ ಕಾರ್ಡ್ ಅಥವಾ ಡೆಬಿಟ್ ಕಾರ್ಡ್ ಯುಪಿಐ ಮೂಲಕ ಸುಲಭವಾಗಿ ಆನ್ಲೈನ್ ನಲ್ಲಿ ಪಾವತಿ ಮಾಡಬಹುದು

ಆಯ್ಕೆ ಪ್ರಕ್ರಿಯೆ

ಮೂರು ಹಂತಗಳಲ್ಲಿ ಆಯ್ಕೆ ಪ್ರಕ್ರಿಯೆಯನ್ನು ಮಾಡಲಾಗುತ್ತದೆ

  • ಮೊದಲು ಕಂಪ್ಯೂಟರ್ ಆಧಾರಿತ ಪರೀಕ್ಷೆ 1
  • ನಂತರ ಕಂಪ್ಯೂಟರ್ ಆಧಾರಿತ ಪರೀಕ್ಷೆ 2
  • ಕೊನೆಯ ಹಂತದಲ್ಲಿ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಅಥವಾ ಸಂದರ್ಶನವನ್ನು ಮಾಡಲಾಗುತ್ತದೆ

ಸ್ಟಾಫ್ ಸೆಲೆಕ್ಷನ್ ಕಮಿಷನ್ [SSC] ನ ಜೂನಿಯರ್ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 28 ಮಾರ್ಚ್ 2024
  • ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 18 ಏಪ್ರಿಲ್ 2024

ಪರೀಕ್ಷೆ ದಿನಾಂಕಗಳು

ಸ್ಟಾಫ್ ಸೆಲೆಕ್ಷನ್ ಕಮಿಷನ್ [SSC] ನ ಜೂನಿಯರ್ ಇಂಜಿನಿಯರ್ ಹುದ್ದೆಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ-1 ದಿನಾಂಕವನ್ನು ಜೂನ್ 4, 5 ಮತ್ತು 6 ರಂದು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪರೀಕ್ಷಾ ದಿನಾಂಕವನ್ನು ತಿಳಿದುಕೊಳ್ಳಬಹುದು. ಕಂಪ್ಯೂಟರ್ ಆಂತರಿಕ ಪರೀಕ್ಷೆ ಒಂದು ಮುಗಿದ ನಂತರ ಕಂಪ್ಯೂಟರ್ ಆಂತರಿಕ ಪರೀಕ್ಷೆ ಎರಡು ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ ಹಾಗಾದರೆ ಆನ್ಲೈನ್ ಮೂಲಕ ಸುಲಭವಾಗಿ ಜೂನಿಯರ್ ಇಂಜಿನಿಯರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ವಿಧಾನದ ಬಗ್ಗೆ ತಿಳಿದುಕೊಳ್ಳೋಣ.

ಸ್ಟಾಫ್ ಸೆಲೆಕ್ಷನ್ ಕಮಿಷನ್ [SSC] ನ ನೇಮಕಾತಿಗೆ ಅರ್ಜಿ ಸಲ್ಲಿಸುವ ವಿಧಾನ

ಈ ಹುದ್ದೆಗೆ ಸುಲಭವಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು, ನಿಮ್ಮ ಹತ್ತಿರ ಮೊಬೈಲ್ ಇದ್ದರೆ ಸಾಕು.

  • ಮೊದಲು ನೀವು ಸ್ಟಾಫ್ ಸೆಲೆಕ್ಷನ್ ಕಮಿಷನ್ [SSC] ಅಧಿಕೃತ https://ssc.gov.in/ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
  • ಈಗ ನಿಮಗೆ ಹೋಂ ಪೇಜ್ ಓಪನ್ ಆಗುತ್ತದೆ, ಈ ವೆಬ್ಸೈಟ್ ನಲ್ಲಿ ಮೊದಲೇ ಬಳಸಿದರೆ ಲಾಗಿನ್ ಮಾಡಿಕೊಳ್ಳಿ.
  • ಒಂದು ವೇಳೆ ಹೊಸ ಬಳಕೆದಾರರಾಗಿದ್ದರೆ ಕೆಲವು ದಾಖಲೆಗಳನ್ನು ನೀಡಿ ರಿಜಿಸ್ಟರ್ ಮಾಡಿಕೊಳ್ಳಿ.
  • ರಿಜಿಸ್ಟರ್ ಮಾಡಿಕೊಂಡ ಲಾಗಿನ್ ಮಾಡಿಕೊಳ್ಳಿ, ನಂತರ ನೀವು ಸ್ಟಾಫ್ ಸೆಲೆಕ್ಷನ್ ಕಮಿಷನ್ [SSC] ನೇಮಕಾತಿ ಅರ್ಜಿ ಸಲ್ಲಿಸುವ ಆಪ್ಷನ್ ಮೇಲೆ ಕ್ಲಿಕ್ ಮಾಡಿ.
  • ಇಲ್ಲಿ ಕೇಳುವ ಎಲ್ಲಾ ದಾಖಲೆಗಳನ್ನು ಭರ್ತಿ ಮಾಡಿ ಮತ್ತು ಫೋಟೋ, ಕೆಲವು ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಲು ಕೇಳುತ್ತದೆ.
  • ನಂತರ ಕೊನೆಯ ಹಂತದಲ್ಲಿ ಅಭ್ಯರ್ಥಿಗಳ ವರ್ಗದ ಆಧಾರದ ಮೇಲೆ ಪಾವತಿ ಶುಲ್ಕವನ್ನು ಪಾವತಿ ಮಾಡಲು ಕೇಳುತ್ತದೆ.
  • ಹಣವನ್ನು ಪಾವತಿ ಮಾಡಿದ ನಂತರ ಅರ್ಜಿಯನ್ನು ಸಲ್ಲಿಸಬಹುದು.
  • ಅರ್ಜಿಯನ್ನು ಸಲ್ಲಿಸುವ ಮೊದಲು ದಾಖಲೆಗಳ ಮಾಹಿತಿಯನ್ನು ಒಂದರಿಂದ ಎರಡು ಬಾರಿ ಪರಿಶೀಲನೆ ಮಾಡಿ ಸರಿಯಾಗಿ ಭರ್ತಿ ಮಾಡಿ. ಒಂದು ಬಾರಿ ದಾಖಲೆಗಳನ್ನು ಸಲ್ಲಿಸಿದ ನಂತರ ಮತ್ತೊಮ್ಮೆ ಬದಲಾವಣೆ ಮಾಡಲು ಸಾಧ್ಯವಾಗುವುದಿಲ್ಲ.
  • ಅರ್ಜಿಯನ್ನು ಸಲ್ಲಿಸಿದ ನಂತರ ಅರ್ಜಿ ರಶೀದಿಯನ್ನು ಡೌನ್ಲೋಡ್ ಮಾಡಿಕೊಳ್ಳಿ, ಇದರಿಂದ ಅರ್ಜಿ ಸ್ಥಿತಿಯನ್ನು ಪರಿಶೀಲನೆ ಮಾಡಬಹುದು.

ಒಂದು ವೇಳೆ ನಿಮಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕಷ್ಟಕರವಾದರೆ ನಿಮ್ಮ ಊರಿನ ಹತ್ತಿರವಿರುವ ಕೆಲವು ಸೈಬರ್ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಕೆಲವು ದಾಖಲೆಗಳನ್ನು ಒದಗಿಸಿ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಗಮನಿಸಿ

ಹೌದು ಗೆಳೆಯರೇ ಈ ಮಾಧ್ಯಮದಲ್ಲಿ ಹುದ್ದೆಗೆ ಬೇಕಾಗುವ ಪ್ರಮುಖ ಮಾಹಿತಿಯನ್ನು ಮಾತ್ರ ಒದಗಿಸಲಾಗುತ್ತದೆ. ಉಳಿದ ಎಲ್ಲಾ ಮಾಹಿತಿಯನ್ನು ಸ್ಟಾಫ್ ಸೆಲೆಕ್ಷನ್ ಕಮಿಷನ್ [SSC] ನ ಅಧಿಕೃತ ವೆಬ್ಸೈಟ್ ನಲ್ಲಿ ಅಧಿಸೂಚನೆಯನ್ನು ನೀಡಲಾಗುತ್ತದೆ, ಅದನ್ನು ನೀವು ಡೌನ್ಲೋಡ್ ಮಾಡಿಕೊಂಡು ಚೆನ್ನಾಗಿ ಓದಿಕೊಳ್ಳಿ. ಇಲ್ಲವಾದಲ್ಲಿ ಸಮಸ್ಯೆಗೆ ಒಳಗಾಗುತ್ತೀರಾ ಅಧಿಸೂಚನೆಯಲ್ಲಿರುವ ಮಾಹಿತಿಯನ್ನು ಒಂದರಿಂದ ಎರಡು ಬಾರಿ ಚೆನ್ನಾಗಿ ಓದಿ, ನಂತರ ಅರ್ಜಿಯನ್ನು ಸಲ್ಲಿಸಿ.

ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 18 ಏಪ್ರಿಲ್ ಆಗಿರುವುದರಿಂದ ಆದಷ್ಟು ಬೇಗ ಅರ್ಜಿ ಸಲ್ಲಿಸಿ. ಅರ್ಹ ಅಭ್ಯರ್ಥಿಯಾಗಿದ್ದರೆ ಆನ್ಲೈನ್ ಮೂಲಕ ಸುಲಭವಾಗಿ ಅರ್ಜಿಯನ್ನು ಸಲ್ಲಿಸಿದ ನಂತರ ನಿಮಗೆ ಎರಡು ಹಂತದಲ್ಲಿ ಪರೀಕ್ಷೆಯನ್ನು ನೀಡಲಾಗುತ್ತದೆ. ಈ ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಹರಾಗುತ್ತೀರಾ. ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ಸರಿಯಾದ ದಾಖಲೆಗಳನ್ನು ಪರಿಶೀಲನೆ ಮಾಡಿ, ದಾಖಲೆಗಳನ್ನು ಭರ್ತಿ ಮಾಡಿ. ಒಂದು ವೇಳೆ ದಾಖಲೆಗಳು ತಪ್ಪಾಗಿದ್ದರೆ ಅದನ್ನು ಮತ್ತೊಮ್ಮೆ ಪರಿಶೀಲನೆ ಮಾಡಲು ಸಾಧ್ಯವಾಗುವುದಿಲ್ಲ.

ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳಬೇಕು ಎಂಬ ಆಸೆ ಇರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ಎಂದು ಹೇಳಬಹುದು. ನಿಮ್ಮ ಸ್ನೇಹಿತರಿಗೆ ಅಥವಾ ಗೆಳೆಯರಿಗೆ ಈ ಹುದ್ದೆಯ ಬಗ್ಗೆ ತಿಳಿಸಿ ಅವರು ಅರ್ಹರಾಗಿದ್ದರೆ ಸುಲಭವಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಯ ಹೆಚ್ಚಿನ ಮಾಹಿತಿಗಾಗಿ ಸ್ಟಾಫ್ ಸೆಲೆಕ್ಷನ್ ಕಮಿಷನ್ [SSC] ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಹುದ್ದೆಯ ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳಬಹುದು ಮತ್ತು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳುವ ಮೂಲಕ ಅಲ್ಲಿ ಈ ಹುದ್ದೆಯ ಬಗ್ಗೆ ಎಲ್ಲಾ ಮಾಹಿತಿಯನ್ನು ನೀಡಲಾಗಿರುತ್ತದೆ.

ಇದನ್ನು ಗಮನಿಸಿ

ನಾನು ಈ ವೆಬ್ ಸೈಟ್ ನಲ್ಲಿ ಜನರಿಗೆ ಉಪಯೋಗವಾಗುವ ಮಾಹಿತಿಯನ್ನು ಪ್ರತಿದಿನ ಒದಗಿಸುತ್ತೇನೆ. ನೀವು ಪ್ರತಿದಿನ ಉತ್ತಮ ಮಾಹಿತಿಯನ್ನು ಪಡೆದುಕೊಳ್ಳಬೇಕೆಂದರೆ ನಮ್ಮ ಟೆಲಿಗ್ರಾಂ ಮತ್ತು ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ ಇದರಿಂದ ಪ್ರತಿದಿನ ಉತ್ತಮ ಮತ್ತು ಉಪಯೋಗವಾಗುವ ಮಾಹಿತಿಯನ್ನು ಗ್ರೂಪ್ನಲ್ಲಿ ಅಪ್ಡೇಟ್ ಮಾಡುತ್ತೇನೆ

ಈ ವೆಬ್ ಸೈಟ್ ನಲ್ಲಿ ನಾವು ಯಾವುದೇ ತಪ್ಪು ಮಾಹಿತಿಯನ್ನು ನೀಡುವುದಿಲ್ಲ. ಜನರಿಗೆ ಉಪಯೋಗವಾಗುವ ಜಾಬ್ ನ್ಯೂಸ್, ಅಗ್ರಿಕಲ್ಚರ್ ನ್ಯೂಸ್, ಇನ್ನಿತರ ಉಪಯೋಗವಾಗುವ ಮಾಹಿತಿಯನ್ನು ಇಲ್ಲಿ ನೀಡಲಾಗುತ್ತದೆ.

ಧನ್ಯವಾದಗಳು

WhatsApp Group Join Now
Telegram Group Join Now

Leave a Comment