SSP Post Matric Scholarship 2024: SSP ವಿದ್ಯಾರ್ಥಿವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ…!
ನಮಸ್ಕಾರ ಬಂಧುಗಳೇ ಸರ್ಕಾರವು ರಾಜ್ಯದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಕ್ಷಣದಿಂದ ವಂಚಿತರಾಗಬಾರದು ಎಂದು ಶಿಕ್ಷಣವನ್ನು ಮುಂದುವರಿಸಲು ಸರ್ಕಾರದಿಂದ ಆರ್ಥಿಕ ಸಹಾಯ ಮಾಡಲು ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ. ಸರ್ಕಾರದ ವಿದ್ಯಾರ್ಥಿವೇತನಕ್ಕೆ ಅರ್ಹ ವಿದ್ಯಾರ್ಥಿಗಳು ಲಾಭ ಪಡೆದುಕೊಳ್ಳಬಹುದಾಗಿದೆ. ಹಾಗಾದರೆ SSP ಪೋಸ್ಟ್ ಮೆಟ್ರಿಕ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು, ಯಾವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಮತ್ತು SSP ಸ್ಕಾಲರ್ಶಿಪ್ ನ ಎಲ್ಲ ವಿವರವನ್ನು ಈ ಲೇಖನದಲ್ಲಿ ಹಂತ ಹಂತವಾಗಿ ತಿಳಿಸಲಾಗಿದೆ.
ಎಸ್‌ಎಸ್‌ಪಿ ಮೆಟ್ರಿಕ್ ಸ್ಕಾಲರ್ಶಿಪ್ 2023-24 / SSP Post Matric Scholarship 2023-24
ಪಿಯುಸಿ, ಡಿಗ್ರಿ, ಡಿಪ್ಲೋಮೋ, ವೃತ್ತಿಪರ ಪದವಿ ಮತ್ತು ಸ್ಥಾನಕೋತ್ತರ ಪದವಿ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ವಿದ್ಯಾರ್ಥಿವೇತನವನ್ನು ಪಡೆಯಲು ಆನ್ಲೈನ್ ಮೂಲಕ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಮೇಲೆ ನೀಡಿರುವ ಕೋರ್ಸ್ ಗಳು ಮೆಟ್ರಿಕ್ ನಂತರದ ಕೋರ್ಸ್ ಗಳಾಗಿವೆ. ಈ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯಿಂದ ನೀಡಲಾಗುವ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿವೇತನಕ್ಕೆ ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ನೀವೇನಾದರೂ ಸಮಾಜ ಕಲ್ಯಾಣ ಇಲಾಖೆಯಿಂದ ನೀಡಲಾಗುವ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 20-05-2024 ಆಗಿದೆ. ಈ ಕಾರಣದಿಂದ SSP ವಿದ್ಯಾರ್ಥಿವೇತನಕ್ಕೆ ಅರ್ಹ ವಿದ್ಯಾರ್ಥಿಯಾಗಿದ್ದರೆ ಆದಷ್ಟು ಬೇಗ ಅರ್ಜಿಯನ್ನು ಸಲ್ಲಿಸಿ. ಹಾಗಾದರೆ ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳು ಮತ್ತು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ವಿಧಾನದ ಬಗ್ಗೆ ಕೆಳಭಾಗದಲ್ಲಿ ಹಂತ ಹಂತವಾಗಿ ತಿಳಿಸಲಾಗಿದೆ.
SSP ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
- ವಿದ್ಯಾರ್ಥಿಯ ಆದಾಯ ಪ್ರಮಾಣ ಪತ್ರ
- ಆಧಾರ್ ಕಾರ್ಡ್
- ಎಸ್ ಎಸ್ ಎಲ್ ಸಿ ರಿಜಿಸ್ಟರ್ ನಂಬರ್
- ಕಾಲೇಜ್ ರಿಜಿಸ್ಟರ್ ನಂಬರ್
- ಇ-ಮೇಲ್ ಐಡಿ
- ಬ್ಯಾಂಕ್ ನ ವಿವರಗಳು
- ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ
- ಹಾಸ್ಟೆಲಿನ ವಿವರಗಳು [ಅನ್ವಯಿಸಿದರೆ ಮಾತ್ರ]
- ಸಂಬಂಧಪಟ್ಟ ದಾಖಲೆಗಳ ಈ ದೃಡೀಕರಣ ಸಂಖ್ಯೆ [ಅನ್ವಯಿಸಿದರೆ ಮಾತ್ರ]
- ಒಂದು ವೇಳೆ ವಿದ್ಯಾರ್ಥಿಯು ವಿಕಲಚೇತನರಾಗಿದ್ದರೆ ಯುಡಿಐಡಿ ಗುರುತಿನ ಸಂಖ್ಯೆ ಹೊಂದಿರಬೇಕು
- ವಿದ್ಯಾರ್ಥಿಯ ಜಿಲ್ಲೆ, ತಾಲೂಕು, ಹೋಬಳ್ಳಿ, ಗ್ರಾಮ ಮತ್ತು ಮನೆಯ ವಿಳಾಸ
ಈ ಎಲ್ಲಾ ದಾಖಲೆಗಳನ್ನು ಹೊಂದಿದರೆ ಮಾತ್ರ ನೀವು ಸುಲಭವಾಗಿ ಆನ್ಲೈನ್ ಮೂಲಕ SSP ಸ್ಕಾಲರ್ಶಿಪ್‌ಗೆ ಅರ್ಜಿಯನ್ನು ಸಲ್ಲಿಸಲು ಸುಲಭವಾಗುತ್ತದೆ. ಹಾಗಾದರೆ ಆನ್ಲೈನ್ ಮೂಲಕ SSP ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸುವ ವಿಧಾನದ ಬಗ್ಗೆ ಈ ಕೆಳಭಾಗದಲ್ಲಿ ತಿಳಿಸಲಾಗಿದೆ.
ಆನ್ಲೈನ್ ಮೂಲಕ SSP ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸುವುದು ಹೇಗೆ
ನಿಮ್ಮ ಹತ್ತಿರ ಮೊಬೈಲ್ ಇದ್ದರೆ ಸಾಕು, ನೀವು ಸುಲಭವಾಗಿ ಆನ್ಲೈನ್ ಮೂಲಕ SSP ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಕೆಲವು ಕೇಳುವು ದಾಖಲೆಗಳನ್ನು ಒದಗಿಸಿ ಅರ್ಜಿಯನ್ನು ಸಲ್ಲಿಸಬಹುದು.
- ಮೊದಲು ನೀವು ಸರ್ಕಾರದ ಅಥವಾ SSP ಯ ಅಧಿಕೃತ ssp.karnataka.gov.in ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
- ಈಗ ನಿಮಗೆ SSP ವೆಬ್ಸೈಟ್ ಓಪನ್ ಆಗುತ್ತದೆ, ಇಲ್ಲಿ ನೀವು SSP ಸ್ಕಾಲರ್ಶಿಪ್ ವಿದ್ಯಾರ್ಥಿವೇತನ 2024 ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ.
- ಈಗ ನಿಮಗೆ ಹೊಸ ಪುಟ್ಟ ಓಪನ್ ಆಗುತ್ತದೆ, ಇಲ್ಲಿ ನೀವು ಬಳಕೆದಾರರ ಐಡಿ ಮತ್ತು ಪಾಸ್ವರ್ಡ್ ಅನ್ನು ಪಡೆಯಲು ಹೊಸದಾಗಿ ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ.
- ಹೊಸದಾಗಿ ನೋಂದಣಿ ಮಾಡಿಕೊಳ್ಳಲು ನೋಂದಣಿ ಮೇಲೆ ಕ್ಲಿಕ್ ಮಾಡಿ. ಇಲ್ಲಿ ನೀವು ಎಚ್ಚರಿಕೆಯಿಂದ ಕೇಳುವ ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ ಎಲ್ಲಾ ದಾಖಲೆಯನ್ನು ಒದಗಿಸಿ ಪಾಸ್ವರ್ಡ್ ಅನ್ನು ಕ್ರಿಯೇಟ್ ಮಾಡಿಕೊಳ್ಳಿ.
- ನಂತರ ನೀವು ನೋಂದಣಿ ಐಡಿ ಮತ್ತು ಪಾಸ್ವರ್ಡ್ ಅನ್ನು ಹಾಕಿ ಲಾಗಿನ್ ಮಾಡಿಕೊಳ್ಳಿ.
- ಒಂದು ವೇಳೆ ಮೊದಲೇ ನೀವು ನೋಂದಣಿ ಮಾಡಿಕೊಂಡರೆ ಲಾಗಿನ್ ಮಾಡಿಕೊಳ್ಳಿ.
- ಲಾಗಿನ್ ಮಾಡಿಕೊಂಡ ನಂತರ ನಿಮಗೆ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಎಲ್ಲ ವಿವರ ಕಾಣುತ್ತದೆ.
- ಅಲ್ಲಿ ನಿಮಗೆ ಕೆಲವು ಹಂತಗಳಲ್ಲಿ ದಾಖಲೆಗಳನ್ನು ಭರ್ತಿ ಮಾಡಲು ಕೇಳುತ್ತದೆ.
- ಇಲ್ಲಿ ನೀವು ಎಚ್ಚರಿಕೆಯಿಂದ ಸರಿಯಾದ ದಾಖಲೆಯನ್ನು ಭರ್ತಿ ಮಾಡಿ ಮತ್ತು ಕೆಲವು ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಲು ಕೇಳುತ್ತದೆ.
- ಅಲ್ಲಿ ಕೇಳುವ ಎಲ್ಲಾ ದಾಖಲೆಗಳನ್ನು ಸರಿಯಾಗಿ ಭರ್ತಿ ಮಾಡಿ ನಂತರ ಸಲ್ಲಿಸಿ ಬಟನ್ ಮೇಲೆ ಕ್ಲಿಕ್ ಮಾಡಿ.
ಈ ರೀತಿ ನೀವು ಸುಲಭವಾಗಿ ಆನ್ಲೈನ್ ಮೂಲಕ SSP ಸ್ಕಾಲರ್ಶಿಪ್‌ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಒಂದು ವೇಳೆ ನಿಮಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕಷ್ಟಕರವಾದರೆ ನಿಮ್ಮ ಊರಿನ ಹತ್ತಿರವಿರುವ ಸೇವಾ ಕೇಂದ್ರ ಅಥವಾ ಕೆಲವು ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಸುಲಭವಾಗಿ SSP ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
SSP ಸ್ಕಾಲರ್ಶಿಪ್ ನ ಸ್ಥಿತಿ ಪರಿಶೀಲನೆ ಮಾಡುವ ವಿಧಾನ
ಹೌದು ಗೆಳೆಯರೇ, ನೀವೇನಾದರೂ ಮೊದಲೇ SSP ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಿದರೆ ಅದರ ಸ್ಥಿತಿಯನ್ನು ಸುಲಭವಾಗಿ ಪರಿಶೀಲನೆ ಮಾಡಿಕೊಳ್ಳಬಹುದಾಗಿದೆ. ನೀವು SSP ಸ್ಕಾಲರ್ಷಿಪ್ ನ ಸ್ಥಿತಿ ಪರಿಶೀಲನೆ ಮಾಡುವುದರಿಂದ ನಿಮ್ಮ ಬ್ಯಾಂಕ್ ಖಾತೆಗೆ ಸ್ಕಾಲರ್ಶಿಪ್ ಮಂಜೂರು ಆಗಿದೆಯೋ ಇಲ್ಲವೋ ಎಂಬ ಎಲ್ಲ ವಿವರವನ್ನು ಅಲ್ಲಿ ತಿಳಿದುಕೊಳ್ಳಬಹುದಾಗಿದೆ.
- ಮೊದಲು ನೀವು ಸರ್ಕಾರದ ಅಥವಾ SSP ಯ ಅಧಿಕೃತ ssp.karnataka.gov.in ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
- ಈಗ ನಿಮಗೆ ಹೋಂ ಪೇಜ್ ಓಪನ್ ಆಗುತ್ತದೆ, ಅಲ್ಲಿ ನೀವು ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ.
- ಮೊದಲೇ ಈ ವೆಬ್ಸೈಟ್ ಅನ್ನು ನೋಂದಣಿ ಮಾಡಿಕೊಂಡಿದ್ದರೆ ಬಳಕೆದಾರರ ಐಡಿ ಮತ್ತು ಪಾಸ್ವರ್ಡ್ ಅನ್ನು ಹಾಕಿ ಲಾಗಿನ್ ಮಾಡಿಕೊಳ್ಳಿ.
- ಈಗ ನೀವು ವಿದ್ಯಾರ್ಥಿ ವೇತನ ಸ್ಥಿತಿ ಚೆಕ್ ಲಿಂಕ್ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ.
- ಈಗ ನಿಮಗೆ ಮತ್ತೊಂದು ಪುಟ ಓಪನ್ ಆಗುತ್ತದೆ, ಇಲ್ಲಿ ನೀವು ನಿಮ್ಮ ಐಡಿ ಸಂಖ್ಯೆ ಮತ್ತು ಹಣಕಾಸಿನ ವರ್ಷವನ್ನು ಬರ್ತಿ ಮಾಡಿ ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಿ.
- ಕ್ಲಿಕ್ ಮಾಡಿದ ನಂತರ ನಿಮಗೆ ಒಂದು ಹೊಸ ಪುಟ್ಟ ತೆರೆಯುತ್ತದೆ.
- ಇಲ್ಲಿ ನಿಮಗೆ SSP ಸ್ಕಾಲರ್ಶಿಪ್ ನಿಮ್ಮ ಬ್ಯಾಂಕ್ ಖಾತೆಗೆ ಮಂಜೂರು ಆಗಿದೆಯೋ ಇಲ್ಲವೋ ಎಂಬ ಎಲ್ಲ ವಿವರವನ್ನು ಈ ಪುಟದಲ್ಲಿ ಸ್ಥಿತಿಯನ್ನು ಪರಿಶೀಲನೆ ಮಾಡಿಕೊಳ್ಳಬಹುದು.
ಕೇಲವು ಇಲಾಖೆಯಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ..!
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಆಯುಷ್ ಇಲಾಖೆ ಈ ಎಲ್ಲಾ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನಕ್ಕೆ ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-05-2024 ಆಗಿದೆ.
- ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-05-2024 ಆಗಿದೆ.
- ಕಾರ್ಮಿಕ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31-05-2024 ಆಗಿದೆ.
- ವೈದ್ಯಕೀಯ ಶಿಕ್ಷಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31-0 5-2024 ಆಗಿದೆ.
- ಆಯುಷ್ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಬಂದು 31-05-2024 ಆಗಿದೆ.
ಈ ಮೇಲೆ ನೀಡಿರುವ ಹಲವು ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಆನ್ಲೈನ್ ಮೂಲಕ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅಂದರೆ ಪರಿಶಿಷ್ಟ ಪಂಗಡ ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-05-2024 ಆಗಿರುವುದರಿಂದ ಅರ್ಹ ವಿದ್ಯಾರ್ಥಿಗಳು ಆದಷ್ಟು ಬೇಗ ಈ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಿ.
ರಾಜ್ಯ ಸರ್ಕಾರವು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣಕ್ಕೆ ಆರ್ಥಿಕ ಸಹಾಯದ ಮೂಲಕ ಉಪಯೋಗವಾಗಲಿ ಎಂದು ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ. ಈ ಮೇಲೆ ನೀಡಿರುವ ಕೆಲವು ಇಲಾಖೆಯ ವಿದ್ಯಾರ್ಥಿವೇತನಕ್ಕೆ ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇನ್ನು ಕೂಡ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು ಅರ್ಜಿ ಸಲ್ಲಿಸಿಲ್ಲವೆಂದರೆ ಆದಷ್ಟು ಬೇಗ ಆನ್ಲೈನ್ ಮೂಲಕ ಅಥವಾ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ. ಒಂದು ವೇಳೆ ಮೊದಲೇ ಅರ್ಜಿಯನ್ನು ಸಲ್ಲಿಸಿದರೆ ಅದರ ಸ್ಥಿತಿಯನ್ನು ಸಹ ಪರಿಶೀಲನೆ ಮಾಡಿಕೊಡಬಹುದಾಗಿದೆ. ಹಿಂದುಳಿದ ವರ್ಗದ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಇಲಾಖೆಯ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸುವ ದಿನಾಂಕ ಮುಕ್ತಾಯವಾಗಿದೆ. ಈ ಕಾರಣದಿಂದ ಉಳಿದ ವಿದ್ಯಾರ್ಥಿವೇತನಕ್ಕೆ ಅರ್ಹ ವಿದ್ಯಾರ್ಥಿಗಳಾಗಿದ್ದರೆ ಅರ್ಜಿಯನ್ನು ಸಲ್ಲಿಸಿ.