PAN Card: ಪ್ಯಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು? ಪ್ಯಾನ್ ಕಾರ್ಡ್ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ…!
ನಮಸ್ಕಾರ ಬಂಧುಗಳೇ ಬ್ಯಾಂಕ್ ನ ಪ್ರಮುಖ ವ್ಯವಹಾರಗಳಿಗೆ ಮತ್ತು ಹಣಕಾಸಿನ ವ್ಯವಹಾರಗಳಿಗೆ ಹೆಚ್ಚಾಗಿ ಪ್ಯಾನ್ ಕಾರ್ಡ್ ಹೊಂದಿರಬೇಕು. ಪ್ಯಾನ್ ಕಾರ್ಡ್ ಇಲ್ಲದಿದ್ದರೆ ಇನ್ಕಮ್ ಟ್ಯಾಕ್ಸ್ ಅಥವಾ ಬ್ಯಾಂಕಿನ ವಹಿವಾಟು ನಡೆಸಲು ಸಾಧ್ಯವಾಗುವುದಿಲ್ಲ. ಈ ಕಾರಣದಿಂದ ಪ್ಯಾನ್ ಕಾರ್ಡ್ ಕಳೆದು ಹೋದರೆ ಅಥವಾ ಯಾರಾದರೂ ಅದನ್ನು ಕಳುವು ಮಾಡಿದರೆ ನಾವು ಮಾಡಬೇಕಾದ ಪ್ರಾಥಮಿಕ ಕೆಲಸವೇನು, ಮತ್ತೊಮ್ಮೆ ಪ್ಯಾನ್ ಕಾರ್ಡ್ ಅನ್ನು ಪಡೆದುಕೊಳ್ಳಬಹುದೇ ಎಂಬ ಎಲ್ಲ ಮಾಹಿತಿಯನ್ನು ಈ ಲೇಖನದಲ್ಲಿ ಹಂತ ಹಂತವಾಗಿ ತಿಳಿಸಲಾಗಿದೆ.
ಪ್ಯಾನ್ ಕಾರ್ಡ್
ಸರ್ಕಾರದ ಪ್ರತಿಯೊಂದು ಯೋಜನೆಗೂ ಆಧಾರ್ ಕಾರ್ಡ್, ವೋಟರ್ ಐಡಿ, ರೇಷನ್ ಕಾರ್ಡ್ ಇನ್ನಿತರ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ. ಅದೇ ರೀತಿ ನಿಮ್ಮ ಬ್ಯಾಂಕಿನ ವ್ಯವಹಾರಕ್ಕೆ ಮತ್ತು ಇನ್ನಿತರ ವ್ಯವಹಾರಗಳಿಗೆ ಪ್ರಮುಖವಾಗಿ ಪ್ಯಾನ್ ಕಾರ್ಡ್ ಅನ್ನು ಹೊಂದಿರಬೇಕು. 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ವ್ಯಕ್ತಿಯು ಪ್ಯಾನ್ ಕಾರ್ಡ್ ಅನ್ನು ಪಡೆದುಕೊಳ್ಳಲು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಪ್ಯಾನ್ ಕಾರ್ಡ್ ಅನ್ನು ಪಡೆದುಕೊಳ್ಳಲು ಆನ್ಲೈನ್ ಅಥವಾ ಆಫ್ಲೈನ್ ಮೂಲಕ ಸುಲಭವಾಗಿ ಪಡೆದುಕೊಳ್ಳಬಹುದಾಗಿದೆ.
ವ್ಯವಹಾರ ಮಾಡಲು ಪ್ಯಾನ್ ಕಾರ್ಡ್ ಪ್ರಮುಖ ದಾಖಲೆಯಾಗಿದೆ. ಒಂದು ವೇಳೆ ನಿಮ್ಮ ಪ್ಯಾನ್ ಕಾರ್ಡ್ ಕಳೆದು ಹೋದರೆ ಅಂತಹ ಸಮಯದಲ್ಲಿ ಏನು ಮಾಡಬೇಕು. ಪ್ಯಾನ್ ಕಾರ್ಡ್ ಕಳೆದು ಹೋದರೆ ಡ್ಯೂಪ್ಲಿಕೇಟ್ ಪ್ಯಾನ್ ಕಾರ್ಡ್ ಅನ್ನು ಪಡೆದುಕೊಳ್ಳಬಹುದು. ಹಾಗಾದರೆ ಡೂಪ್ಲಿಕೇಟ್ ಪ್ಯಾನ್ ಕಾರ್ಡ್ ಅನ್ನು ಪಡೆದುಕೊಳ್ಳುವುದು ಹೇಗೆ ಎಂಬ ಎಲ್ಲ ಮಾಹಿತಿಯನ್ನು ಈ ಕೆಳಭಾಗದಲ್ಲಿ ತಿಳಿಸಲಾಗಿದೆ.
ಪ್ಯಾನ್ ಕಾರ್ಡ್ ಕಳೆದು ಹೋದರೆ ಡೂಪ್ಲಿಕೇಟ್ ಪ್ಯಾನ್ ಕಾರ್ಡ್ ಅನ್ನು ಪಡೆದುಕೊಳ್ಳಿ
ಹೌದು ಗೆಳೆಯರೇ, ಒಂದು ವೇಳೆ ನಿಮ್ಮ ಪ್ಯಾನ್ ಕಾರ್ಡ್ ಅನ್ನು ಯಾರಾದರೂ ಕಳ್ಳತನ ಮಾಡಿದರೆ ಅಥವಾ ಕಳೆದು ಹೋದರೆ ಅಂತಹ ಸಮಯದಲ್ಲಿ ನೀವು ಡೂಪ್ಲಿಕೇಟ್ ಪ್ಯಾನ್ ಕಾರ್ಡ್ ಅನ್ನು ಪಡೆದುಕೊಳ್ಳಬಹುದು. ಭಾರತದಲ್ಲಿ ಬಹುತೇಕರಿಗೆ ಕಳೆದು ಹೋದ ಪ್ಯಾನ್ ಕಾರ್ಡ್ ಅನ್ನು ಮತ್ತೆ ಪಡೆಯುವ ಅವಕಾಶವಿದೆ ಎಂಬ ಮಾಹಿತಿಯನ್ನು ಸರ್ಕಾರ ಈಗಾಗಲೇ ತಿಳಿಸಿದೆ. ನಿಮ್ಮ ಹತ್ತಿರವಿರುವ ಮೊಬೈಲ್ ಅನ್ನು ಬಳಸಿಕೊಂಡು ಸುಲಭವಾಗಿ ಡೂಪ್ಲಿಕೇಟ್ ಪ್ಯಾನ್ ಕಾರ್ಡ್ ಅನ್ನು ಪಡೆದುಕೊಳ್ಳಲು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಆನ್ಲೈನ್ ಮೂಲಕ ಡೂಪ್ಲಿಕೇಟ್ ಪ್ಯಾನ್ ಕಾರ್ಡ್ ಅನ್ನು ಗೆ ಅರ್ಜಿ ಸಲ್ಲಿಸುವುದು ಹೇಗೆ
ನಿಮ್ಮ ಹತ್ತಿರವಿರುವ ಪ್ಯಾನ್ ಕಾರ್ಡ್ ಕಳೆದು ಹೋದರೆ ಅಥವಾ ಯಾರಾದರೂ ಕಳ್ಳತನ ಮಾಡಿದರೆ ಅಂತಹ ಸಮಯದಲ್ಲಿ ನೀವು ಸುಲಭವಾಗಿ ಡೂಪ್ಲಿಕೇಟ್ ಪ್ಯಾನ್ ಕಾರ್ಡ್ ಅನ್ನು ಪಡೆದುಕೊಳ್ಳಬಹುದಾಗಿದೆ. ಆನ್ಲೈನ್ ಮೂಲಕ NSDL ವೆಬ್‌ಸೈಟ್ ಗೆ ಭೇಟಿ ನೀಡುವ ಮೂಲಕ ಅಲ್ಲಿ ನೀವು ಡೂಪ್ಲಿಕೇಟ್ ಪ್ಯಾನ್ ಕಾರ್ಡ್ ಅನ್ನು ಪಡೆದುಕೊಳ್ಳಲು ಅರ್ಜಿಯನ್ನು ಸಲ್ಲಿಸಬಹುದು.
- ಮೊದಲು ನೀವು NSDL https://www.onlineservices.nsdl.com/paam/ ವೆಬ್‌ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
- ಅಲ್ಲಿ ಕೇಳುವ ಆಧಾರ್ ಸಂಖ್ಯೆ, ಪ್ಯಾನ್ ಕಾರ್ಡ್ ಸಂಖ್ಯೆ ಹಾಗೂ ಇನ್ನಿತರ ದಾಖಲೆಗಳನ್ನು ಸರಿಯಾಗಿ ನಮೂದಿಸಿ ಮತ್ತು ಕೆಲವು ದಾಖಲೆಗಳನ್ನು ಅಪ್ಲೋಡ್ ಮಾಡಬೇಕಾಗುತ್ತದೆ.
- ಎಲ್ಲಾ ಪ್ರಕ್ರಿಯೆಯನ್ನು ಮುಗಿದ ನಂತರ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ.
- ಈಗ ನಿಮಗೆ ಕಳೆದು ಹೋದ ಪ್ಯಾನ್ ಕಾರ್ಡ್ ಅಥವಾ ಹಳೆಯ ಪ್ಯಾನ್ ಕಾರ್ಡ್ ನ ಎಲ್ಲ ಮಾಹಿತಿ ಇಲ್ಲಿ ಕಾಣಿಸುತ್ತದೆ.
- ಆನಂತರ ಎಡಭಾಗದಲ್ಲಿ ಡ್ಯೂಪ್ಲಿಕೇಟ್ ಪ್ಯಾನ್ ಕಾರ್ಡ್ ಎಂಬ ಆಪ್ಷನ್ ಕಾಣುತ್ತದೆ, ನೀವು ಅದರ ಮೇಲೆ ಕ್ಲಿಕ್ ಮಾಡಿ.
- ಇಲ್ಲಿ ನೀವು ಕೇಳುವ ಮನೆ ಅಡ್ರೆಸ್ ಮತ್ತು ಕೆಲವು ದಾಖಲೆಗಳನ್ನು ಸರಿಯಾಗಿ ನಮೂದಿಸಬೇಕಾಗುತ್ತದೆ.
- ಎಲ್ಲಾ ದಾಖಲೆಗಳನ್ನು ಸರಿಯಾಗಿ ನಮೂದಿಸಿ. ಕೊನೆಯ ಹಂತದಲ್ಲಿ ರೂ 50 ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ.
- ಈ ಶುಲ್ಕವನ್ನು ಸುಲಭವಾಗಿ ನೀವು ಆನ್ಲೈನ್ ಮೂಲಕ ಪಾವತಿ ಮಾಡಬಹುದು.
- ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿ ಮಾಡಿದ ನಂತರ 7 ದಿನ ಅಥವಾ ಕೆಲವು ದಿನಗಳ ನಂತರ ನಿಮ್ಮ ಮನೆಯ ಅಡ್ರೆಸ್ ಗೆ ಪ್ಯಾನ್ ಕಾರ್ಡ್ ಪೋಸ್ಟ್ ಆಗುತ್ತದೆ.
- ಅರ್ಜಿಯನ್ನು ಸಲ್ಲಿಸುವ ಮೊದಲು ನೀವು ಸರಿಯಾದ ದಾಖಲೆಯನ್ನು ಒದಗಿಸಿ ಮತ್ತು ಸರಿಯಾದ ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
ಈ ರೀತಿ ನೀವು ಸುಲಭವಾಗಿ ಆನ್ಲೈನ್ ಮೂಲಕ ಡೂಪ್ಲಿಕೇಟ್ ಪ್ಯಾನ್ ಕಾರ್ಡ್ ಅನ್ನು ಪಡೆದುಕೊಳ್ಳಲು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಡೂಪ್ಲಿಕೇಟ್ ಪ್ಯಾನ್ ಕಾರ್ಡ್ ಅನ್ನು ಪಡೆದುಕೊಂಡರೆ ನಂಬರ್ ಬದಲಾಗುವುದಿಲ್ಲ
ಹೌದು ಗೆಳೆಯರೇ, ಕೆಲವು ಜನರಿಗೆ ಡೂಪ್ಲಿಕೇಟ್ ಪ್ಯಾನ್ ಕಾರ್ಡ್ ಅನ್ನು ಪಡೆದುಕೊಂಡರೆ ಪ್ಯಾನ್ ಕಾರ್ಡ್ ನಂಬರ್ ಬದಲಾವಣೆ ಆಗುತ್ತದೆ ಎಂಬ ಗೊಂದಲ ಇದೆ. ಆದರೆ ಕಳ್ಳತನ ಮಾಡಿದ ಪ್ಯಾನ್ ಕಾರ್ಡ್ ಅಥವಾ ಕಳೆದು ಹೋದ ಪ್ಯಾನ್ ಕಾರ್ಡ್ ಅನ್ನು ಮತ್ತೆ ಪಡೆದುಕೊಳ್ಳಲು ನೀವು ಡ್ಯೂಪ್ಲಿಕೇಟ್ ಪ್ಯಾನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
ನೀವು ಡೂಪ್ಲಿಕೇಟ್ ಪ್ಯಾನ್ ಕಾರ್ಡ್ ಅನ್ನು ಪಡೆದುಕೊಂಡರೆ ಯಾವುದೇ ಕಾರಣಕ್ಕೂ ನಿಮ್ಮ ಪ್ಯಾನ್ ಕಾರ್ಡ್ ನಂಬರ್ ಬದಲಾವಣೆ ಆಗುವುದಿಲ್ಲ. ಅದು ನಿಮ್ಮ ಕಳೆದು ಹೋದ ವರ್ಜಿನಲ್ ಪ್ಯಾನ್ ಕಾರ್ಡ್ ನ ಡೂಪ್ಲಿಕೇಟ್ ಪ್ಯಾನ್ ಕಾರ್ಡ್ ಅನ್ನು ಆಗಿರುತ್ತದೆ. ಇದನ್ನು ಹೊರತುಪಡಿಸಿ ನಿಮ್ಮ ಪ್ಯಾನ್ ಕಾರ್ಡ್ ನಲ್ಲಿ ಯಾವುದಾದರೂ ಸಣ್ಣ ಪುಟ್ಟ ಬದಲಾವಣೆ ಮಾಡಲು ಇಚ್ಚಿಸಿದರೆ ಎರಡನೇ ಪ್ಯಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಮಾಡುವ ಅವಕಾಶವಿದೆ.
ಹೊಸದಾಗಿ ಪ್ಯಾನ್ ಕಾರ್ಡ್ ಅನ್ನು ಪಡೆದುಕೊಳ್ಳುವುದು ಹೇಗೆ
ನಿಮಗೆ 18 ವರ್ಷ ತುಂಬಿದ್ದು ಇನ್ನೂ ಕೂಡ ನೀವು ಪ್ಯಾನ್ ಕಾರ್ಡ್ ಅನ್ನು ಪಡೆದುಕೊಂಡಿಲ್ಲವೆಂದರೆ ನೀವು ಸುಲಭವಾಗಿ ಆನ್ಲೈನ್ ಮತ್ತು ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಪ್ಯಾನ್ ಕಾರ್ಡ್ ಒಂದು ರೀತಿಯಲ್ಲಿ ಶಾಶ್ವತ ಖಾತೆ ಸಂಖ್ಯೆ ಅಥವಾ ರಾಷ್ಟ್ರೀಕೃತ ಗುರುತಿನ ಚೀಟಿಯಾಗಿದೆ. ಪ್ಯಾನ್ ಕಾರ್ಡ್ ಇಲ್ಲದೆ ನೀವು ಯಾವುದೇ ಹಣಕಾಸಿನ ವಹಿವಾಟು ನಡೆಸಲು ಸಾಧ್ಯವಾಗುವುದಿಲ್ಲ.
ಭಾರತೀಯ ಆದಾಯ ತೆರಿಗೆ ಇಲಾಖೆಯು ಈ 10-ಅಂಕಿಯ ಆಲ್ಫಾನ್ಯೂಮರಿಕ್ ಮತ್ತು ಅನನ್ಯ ಖಾತೆ ಸಂಖ್ಯೆಯನ್ನು ತೆರಿಗೆ-ಪಾವತಿಸುವ ವ್ಯಕ್ತಿ, ಕಂಪನಿಗೆ ನಿಯೋಜಿಸುತ್ತದೆ. ಹಾಗಾದರೆ ನೀವು ಆನ್ಲೈನ್ ಮೂಲಕ ಸುಲಭವಾಗಿ ಪ್ಯಾನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸುವ ವಿಧಾನದ ಬಗ್ಗೆ ತಿಳಿದುಕೊಳ್ಳೋಣ. ಅರ್ಜಿಯನ್ನು ಸಲ್ಲಿಸಲು ಮೊದಲು ಸಂಸ್ಕರಣಾ ಶುಲ್ಕದ ಆನ್ಲೈನ್ ಪಾವತಿಯೊಂದಿಗೆ ಆನ್ಲೈನ್ ಅರ್ಜಿ ನಮುಂದಿಸಿ.
ಹೊಸದಾಗಿ ಪ್ಯಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯವಿರುವ ದಾಖಲೆಗಳು
ನೀವೇನಾದರೂ ಹೊಸದಾಗಿ ಪ್ಯಾನ್ ಕಾರ್ಡ್ ಅನ್ನು ಪಡೆದುಕೊಳ್ಳಲು ಅರ್ಜಿಯನ್ನು ಸಲ್ಲಿಸಬೇಕೆಂದರೆ ಈ ಕೆಳಗೆ ನೀಡಲಾಗಿರುವ ಪ್ರಮುಖ ದಾಖಲೆಗಳನ್ನು ಹೊಂದಿರಬೇಕಾಗಿರುತ್ತದೆ.
- ಆಧಾರ್ ಕಾರ್ಡ್
- ವಿಳಾಸದ ಪುರಾವೆ
- ಜನ್ಮ ದಿನಾಂಕದ ಪುರಾವೆ
- ಮುಂತಾದ ದಾಖಲೆಗಳನ್ನು ಹೊಂದಿದರೆ ಮಾತ್ರ ನೀವು ಸುಲಭವಾಗಿ ಆನ್ಲೈನ್ ಮೂಲಕ ಹೊಸದಾಗಿ ಪ್ಯಾನ್ ಕಾರ್ಡ್ ಅನ್ನು ಪಡೆದುಕೊಳ್ಳುವ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ನೀವು ಎರಡು ರೀತಿಯಲ್ಲಿ ಪ್ಯಾನ್ ಕಾರ್ಡ್ ಅನ್ನು ಪಡೆದುಕೊಳ್ಳಬಹುದಾಗಿದೆ. ಅಂದರೆ ಇ-ಪ್ಯಾನ್ ಕಾರ್ಡ್ ಅನ್ನು ನೀವು ಸುಲಭವಾಗಿ 5 ನಿಮಿಷದಲ್ಲಿ ಪಡೆದುಕೊಳ್ಳಬಹುದಾಗಿದೆ ಅಥವಾ NSDL ವೆಬ್‌ಸೈಟ್ ಮೂಲಕ ಆನ್ಲೈನ್ ನಲ್ಲಿ ಪ್ಯಾನ್ ಕಾರ್ಡ್ ಅನ್ನು ಪಡೆದುಕೊಳ್ಳಬಹುದಾಗಿದೆ. ಹಾಗಾದರೆ ಅದರ ಬಗ್ಗೆ ಈ ಕೆಳಭಾಗದಲ್ಲಿ ತಿಳಿಸಲಾಗಿದೆ.
ಆನ್ಲೈನ್ ಮೂಲಕ ಕೇವಲ 5 ನಿಮಿಷದಲ್ಲಿ ಇ-ಪ್ಯಾನ್ ಅನ್ನು ಪಡೆದುಕೊಳ್ಳುವುದು ಹೇಗೆ
ನಿಮ್ಮ ಹತ್ತಿರ ಮೊಬೈಲ್ ಇದ್ದರೆ ಸಾಕು, ನೀವು ಸುಲಭವಾಗಿ ಆನ್ಲೈನ್ ಮೂಲಕ ಇ-ಪ್ಯಾನ್ ಕಾರ್ಡ್ ಅನ್ನು 5 ನಿಮಿಷದಲ್ಲಿ ಪಡೆದುಕೊಳ್ಳಬಹುದಾಗಿದೆ. ಒಮ್ಮೆ ಇ-ಪ್ಯಾನ್ ಅನ್ನು ನಿಗದಿಪಡಿಸಿದ ನಂತರ ನಿಮಗೆ ಅದರ ಬಗ್ಗೆ ತಿಳಿಸಲಾಗುತ್ತದೆ. ಆದಾಗ್ಯೂ, ಈ ಅಂಶವು PAN ನ ಡಿಜಿಟಲ್ ನಕಲನ್ನು ಮಾತ್ರ ಒದಗಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ.
- ಮೊದಲು ನೀವು ಆದಾಯ ತೆರಿಗೆ ಇಲಾಖೆಯ ಇ-ಫೈಲಿಂಗ್ ಅಧಿಕೃತ https://eportal.incometax.gov.in/iec/foservices/#/pre-login/instant-e-pan ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
- ನಂತರ ನಿಮಗೆ ಅಲ್ಲಿ ಕೆಲಭಾಗದಲ್ಲಿ ಕಾಣಬಹುದು ಗೇಟ್ ನ್ಯೂ ಇ-ಪ್ಯಾನ್ ಕಾರ್ಡ್ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ.
- ಕ್ಲಿಕ್ ಮಾಡಿದ ನಂತರ ನೀವು ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ ಮತ್ತು ಕ್ಯಾಪ್ಚರ್ ಕೋಡ್ ಅನ್ನು ಭರ್ತಿ ಮಾಡಬೇಕು ನಂತರ ದೃಢೀಕರಣದ ಮೇಲೆ ಚೆಕ್ ಮಾಡಬೇಕು.
- ನಂತರ ನೀವು ಗೆಟ್ ಓಟಿಪಿ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ. ನಿಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರೋ ಮೊಬೈಲ್ ಸಂಖ್ಯೆಗೆ ಓಟಿಪಿ[OTP] ಬರುತ್ತದೆ ಆ ಓಟಿಪಿ[OTP] ಯನ್ನು ನಮೂದಿಸಿ.
- ಈಗ ನಿಮಗೆ ನಿಮ್ಮ ಆಧಾರ್ ಕಾರ್ಡ್ ನ ಎಲ್ಲ ಮಾಹಿತಿ ದೊರೆಯುತ್ತದೆ, ಅಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ನ ಮಾಹಿತಿಯನ್ನು ಪರಿಶೀಲನೆ ಮಾಡಿಕೊಳ್ಳಿ ನಂತರ ನೀವು ದೃಢೀಕರಿಸುವ ಬಾಕ್ಸ್ ಮೇಲೆ ಚೆಕ್ ಮಾಡಿಕೊಳ್ಳಿ.
- ಕೊನೆಯ ಹಂತದಲ್ಲಿ ನೀವು ಸಲ್ಲಿಸು ಎಂಬ ಆಪ್ಶನ್ ಮೇಲೆ ಕ್ಲಿಕ್ ಮಾಡಿದರೆ ಸಾಕು ಇ-ಪ್ಯಾನ್ ಕಾರ್ಡ್ ದೊರೆಯುತ್ತದೆ.
NSDL ವೆಬ್‌ಸೈಟ್ ನ ಮೂಲಕ ಆನ್‌ಲೈನ್‌ನಲ್ಲಿ ಪ್ಯಾನ್ ಕಾರ್ಡ್‌ಗೆ ಅರ್ಜಿ ಸಲ್ಲಿಸುವ ವಿಧಾನ
- ಮೊದಲು ನೀವು NSDL https://www.onlineservices.nsdl.com/paam/endUserRegisterContact.html ವೆಬ್‌ಸೈಟ್ ಗೆ ಭೇಟಿ ನೀಡಿ.
- ಲಭ್ಯವಿರುವ PAN ಕಾರ್ಡ್ ಅಪ್ಲಿಕೇಶನ್ ಅನ್ನು ಆಯ್ಕೆಮಾಡಿ – ‘ಹೊಸ PAN ಭಾರತೀಯ ನಾಗರಿಕ (ಫಾರ್ಮ್ 49A)’ .
- ಫಾರ್ಮ್‌ನಲ್ಲಿ ಎಲ್ಲಾ ವಿವರಗಳನ್ನು ಭರ್ತಿ ಮಾಡಿ. ಪ್ಯಾನ್ ಕಾರ್ಡ್ ಅರ್ಜಿ ನಮೂನೆಯಲ್ಲಿ ವಿವರಗಳನ್ನು ಭರ್ತಿ ಮಾಡುವ ಮೊದಲು ವಿವರವಾದ ಸೂಚನೆಗಳನ್ನು ಓದಿ.
- ಅಗತ್ಯವಿರುವ ಶುಲ್ಕವನ್ನು ಪಾವತಿಸಿ. ನಿಮ್ಮ PAN ಕಾರ್ಡ್ ಅನ್ನು ಕಳುಹಿಸಲು ನೀವು ಆಯ್ಕೆ ಮಾಡುವ ಆಯ್ಕೆಯನ್ನು ಅವಲಂಬಿಸಿ PAN ಕಾರ್ಡ್ ಅಪ್ಲಿಕೇಶನ್ ಶುಲ್ಕಗಳು ಬದಲಾಗುತ್ತವೆ.
- ಕ್ರೆಡಿಟ್/ಡೆಬಿಟ್ ಕಾರ್ಡ್, ಡಿಮ್ಯಾಂಡ್ ಡ್ರಾಫ್ಟ್ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ ಪಾವತಿ ಮಾಡಬಹುದು.
- ಯಶಸ್ವಿ ಪಾವತಿಯ ನಂತರ, ನಿಮ್ಮ ಅಪ್ಲಿಕೇಶನ್ ಸ್ಥಿತಿಯನ್ನು ನೀವು ಪರಿಶೀಲಿಸಬಹುದಾದ ಸ್ವೀಕೃತಿಯನ್ನು ಪ್ರದರ್ಶಿಸಲಾಗುತ್ತದೆ. ಇದನ್ನು ನಿಮ್ಮ ಇಮೇಲ್ ಐಡಿಗೂ ಕಳುಹಿಸಲಾಗುತ್ತದೆ.
- ಅರ್ಜಿಯನ್ನು ಸಲ್ಲಿಸಿದ ನಂತರ, ನೀವು ಈ ಕೆಳಗಿನ ವಿಧಾನಗಳನ್ನು ಬಳಸಿಕೊಂಡು ಅಂತಹ ಅಪ್ಲಿಕೇಶನ್ ಅನ್ನು ಪರಿಶೀಲಿಸಬಹುದು.
- ಆಧಾರ್ ಆಧಾರಿತ ಇ-ಚಿಹ್ನೆ: ಡಿಜಿಟಲ್ ಪರಿಶೀಲನೆ
- ಡಿಜಿಟಲ್ ಸಿಗ್ನೇಚರ್ ಪ್ರಮಾಣಪತ್ರ
- ಭೌತಿಕ ಸ್ವೀಕೃತಿ: ಪುಣೆಯಲ್ಲಿರುವ NSDL ಕಚೇರಿಗೆ ಕೊರಿಯರ್/ಪೋಸ್ಟ್ ಮೂಲಕ ಅಗತ್ಯ ದಾಖಲೆಗಳನ್ನು ಕಳುಹಿಸಿ. ಡಾಕ್ಯುಮೆಂಟ್‌ಗಳ ಸ್ವೀಕೃತಿಯ ನಂತರವೇ PAN ಅರ್ಜಿಯನ್ನು NSDL ಪ್ರಕ್ರಿಯೆಗೊಳಿಸುತ್ತದೆ.
- NSDL ಒಮ್ಮೆ ಅಪ್ಲಿಕೇಶನ್ ಮತ್ತು ದಾಖಲೆಗಳನ್ನು ಪರಿಶೀಲಿಸಿದ ನಂತರ, ಅದು 15 ದಿನಗಳಲ್ಲಿ ಪ್ಯಾನ್ ಕಾರ್ಡ್ ಅನ್ನು ನೀಡುತ್ತದೆ.
ಒಂದು ವೇಳೆ ನಿಮಗೆ ಆನ್ಲೈನ್ ಮೂಲಕ ಪ್ಯಾನ್ ಕಾರ್ಡ್ ಅನ್ನು ಪಡೆದುಕೊಳ್ಳಲು ಅರ್ಜಿಯನ್ನು ಸಲ್ಲಿಸಲು ಕಷ್ಟಕರವಾದರೆ ನಿಮ್ಮ ಊರಿನ ಹತ್ತಿರವಿರುವ ಸೇವಾ ಕೇಂದ್ರ ಅಥವಾ ಕೆಲವು ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ಅಲ್ಲಿ ಕೇಳುವ ಕೆಲವು ದಾಖಲೆಗಳನ್ನು ನೀಡಿ. ಅಲ್ಲಿ ನೀವು ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಪ್ಯಾನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಆನ್ಲೈನ್ ಅಥವಾ ಆಫ್ಲೈನ್ ನಲ್ಲಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಪ್ಯಾನ್ ಕಾರ್ಡ್ ಅನ್ನು ಪಡೆದುಕೊಳ್ಳಲು ಅರ್ಜಿಯನ್ನು ಸಲ್ಲಿಸಿದ ನಂತರ ಪ್ಯಾನ್ ಕಾರ್ಡ್ ಅಪ್ಲಿಕೇಶನ್ ಸ್ಥಿತಿಯನ್ನು ನೀವು ಸುಲಭವಾಗಿ ಆನ್ಲೈನ್ ಮೂಲಕ ಟ್ರ್ಯಾಕ್ ಮಾಡಿಕೊಳ್ಳಬಹುದಾಗಿದೆ. ಟ್ರ್ಯಾಕ್ ಮಾಡಿಕೊಳ್ಳಲು ನಿಮ್ಮ ಹತ್ತಿರ ಸ್ವೀಕೃತ ಸಂಖ್ಯೆಯನ್ನು ನೀವು ಹೊಂದಿರಬೇಕು.